ಬೆಂಗಳೂರು ಗಾಳಿ ಮಳೆ : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು 3 ವರ್ಷದ ಬಾಲಕಿ ಸಾವು

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯ ನಡುವೆ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಗಾಳಿಮಳೆಯಿಂದಾಗಿ ನಗರದಲ್ಲಿ ಸುಮಾರು 30 ಮರಗಳು ಬಿದ್ದಿದ್ದು, ಹಲವೆಡೆ ಜಲಾವೃತವಾಗಿದೆ ಎಂದು ಬೆಂಗಳೂರಿನ ಸಿವಿಲ್ ಡಿಫೆನ್ಸ್ ತಂಡ ತಿಳಿಸಿದೆ. ಶನಿವಾರ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಸ್ಟ್​ 27ರ ವರೆಗೂ ಭಾರಿ ಮಳೆ ಸಾಧ್ಯತೆ ; ಯೆಲ್ಲೊ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಆಗಸ್ಟ್‌ 27ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಆಗಸ್ಟ್‌ 27ರ ವರೆಗೂ ಗಾಳಿ ಸಮೇತ ಭಾರಿ ಮಳೆ ಮುಂದುವರಿಯುವ ಸಂಭವವಿದ್ದು, ಶುಕ್ರವಾರದಿಂದ ಐದು ದಿನಗಳು ಉತ್ತರ … Continued

ಜುಲೈ 2ರ ವರೆಗೆ ಕರ್ನಾಟಕದ 6 ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದ ಕರಾವಳಿಯ ಸಮುದ್ರತೀರಗಳಲ್ಲಿ ದಟ್ಟಮೋಡ ಇರುವುದರಿಂದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿಯೂ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, … Continued

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭಾನುವಾರ (ಜೂನ್‌ 30)ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಗಾಳಿಯ … Continued

ಜೂನ್ 21ರಿಂದ 10 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ

ಬೆಂಗಳೂರು : ಈ ಬಾರಿ ಮುಂಗಾರು ಈವರೆಗೆ ತಕ್ಕಮಟ್ಟಿಗೆ ಸಮಾಧಾನ ನೀಡಿದ್ದರೂ ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗದರೆ ಕೆಲವು ಭಾಗಗಳಲ್ಲಿ ಮಳೆಯ ಕೊರತೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮಳೆ ಉತ್ತಮವಾಗಿದೆ, ಆದರೆ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದೆ. ಇದೇ ವೇಳೆ ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 6 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮುಂಗಾರು ಮತ್ತಷ್ಟು ಚುರುಕು ಪಡೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40-50 kmp ವೇಗದಲ್ಲಿ ಗಾಳಿ ಬೀಸಬಹುದು ಎಂದು ಹೇಳಿದೆ. … Continued

ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶುಕ್ರವಾರ (ಜೂನ್‌ ೧೪)ರಂದು ಬಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. … Continued

ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮುಂದುವರಿದಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ರಷ್ಟು ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ … Continued

ರಾಜ್ಯದಲ್ಲಿ ಮುಂಗಾರು ಚುರುಕು: ಶನಿವಾರ 7 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಮುಂಗಾರು ಮಾರುತಗಳು ಇಡೀ ರಾಜ್ಯವನ್ನು ಆವರಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ (ಜೂನ್‌ 8) ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ ಉಡುಪಿ ಮತ್ತು ಉತ್ತರ ಒಳನಾಡಿನ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ … Continued

ಮುಂದಿನ ನಾಲ್ಕೈದು ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಬಳ್ಳಾರಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು … Continued