ಕರ್ನಾಟದಲ್ಲಿ ಈವರೆಗೂ ಮುಂಗಾರು ನೀರಸ ; 17 ಜಿಲ್ಲೆಗಳು, 129 ತಾಲೂಕುಗಳಲ್ಲಿ ಮಳೆ ಕೊರತೆ

ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, ಜೂನ್ 1ರಿಂದ ಜುಲೈ 6ರ ವರೆಗೆ ಮುಂಗಾರು ಮಳೆ ಬಿದ್ದ ಪ್ರಮಾಣ ಗಮಿಸಿದರೆ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಮಳೆ ಕೊರತೆ(Deficit)ಯಾಗಿದೆ. 13 ಜಿಲ್ಲೆಗಳಲ್ಲಿ ಬಹುತೇಕ ವಾಡಿಕೆ (Normal)ಯಷ್ಟು ಮಳೆಯಾಗಿದ್ದರೆ ಒಂದು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಕರ್ನಾಟಕ ರಾಜ್ಯ … Continued

ಮುಂಗಾರು ಕೊರತೆ : ಡ್ಯಾಂನಲ್ಲಿ ನೀರಿಲ್ಲ ; ಇದರ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ; ಸಿಎಂ ಶಿವಕುಮಾರ

ಬೆಂಗಳೂರು: ಈ ವರ್ಷ ದೇಶದಲ್ಲಿ ತೀವ್ರ ಮಳೆ ಕೊರತೆ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರನ್ನೇ ನಂಬಿಕೊಂಡು ಬೆಳೆ ಬೆಳೆಯುವುದುಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ ರೈತರಿಗೆ ಸಲಹೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continued

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲಿ ಮಳೆಯಿಲ್ಲದೆ ಕಂಗಾಲಾಗಿಸಿದ ಜೂನ್ ತಿಂಗಳಿಗೆ ಈ ವರ್ಷದ ಜೂನ್‌ ತಿಂಗಳೂ ಸೇರ್ಪಡೆ…!

ನವದೆಹಲಿ: ಭಾರತದಲ್ಲಿ ಈ ವರ್ಷದ (2026) ಮುಂಗಾರು ಆರಂಭದಲ್ಲೇ ತೀವ್ರ ನಿರಾಸೆ ಮೂಡಿಸಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿದ್ದು, ವಾಯುವ್ಯ ಭಾರತದ ಹಲವು ಭಾಗಗಳಿಗೆ ಮುಂಗಾರು ಮಾರುತಗಳ ಆಗಮನ ಮತ್ತಷ್ಟು ವಿಳಂಬವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮುಂಗಾರಿನ ಪ್ರಗತಿ ತೀವ್ರ ಅಸಮತೋಲನದಿಂದ ಕೂಡಿದ್ದು, ದೇಶದ ಬಹುದೊಡ್ಡ ಭಾಗಗಳು ಇನ್ನೂ ಮಳೆಯ … Continued

ಮುಂಗಾರು ಕುಂಠಿತ ? ಭಾರತದ ಬಹುತೇಕ ಭಾಗಗಳಲ್ಲಿ ಮಳೆಮೋಡಗಳೇ ಕಾಣುತ್ತಿಲ್ಲ ; ಉಪಗ್ರಹ ಚಿತ್ರದಲ್ಲಿ ಆತಂಕಕಾರಿ ದೃಶ್ಯ

ನವದೆಹಲಿ : ನೈಋತ್ಯ ಮುಂಗಾರು ದೇಶದ ಬಹುತೇಕ ಭಾಗಗಳಿಗೆ ಅಧಿಕೃತವಾಗಿ ಪ್ರವೇಶಿಸಿದ್ದರೂ, ಮಧ್ಯ, ಪಶ್ಚಿಮ ಹಾಗೂ ವಾಯವ್ಯ ಭಾರತದ ವಿಶಾಲ ಪ್ರದೇಶಗಳಲ್ಲಿ ಅಸಾಮಾನ್ಯವಾಗಿ ಕಂಡುಬರುವ ಮೋಡರಹಿತ ವಾತಾವರಣ ಮುಂದುವರಿದಿದೆ. ಇತ್ತೀಚಿನ ಉಪಗ್ರಹ ಚಿತ್ರಗಳು ದೇಶದ ಬಹುಭಾಗದಲ್ಲಿ ವ್ಯಾಪಕ ಮಳೆ ಸುರಿಸುವ ದಟ್ಟ ಮಳೆಮೋಡಗಳು ಕಾಣಿಸದಿರುವುದನ್ನು ಸ್ಪಷ್ಟವಾಗಿ ತೋರಿಸಿವೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳ ಪ್ರಕಾರ, … Continued

ಕರ್ನಾಟಕದಲ್ಲಿ ಮುಂಗಾರು ಕ್ಷೀಣ : ಕರಾವಳಿ-ಮಲೆನಾಡಿನ ಜಿಲ್ಲೆಗಳಲ್ಲೇ ಭಾರಿ ಮಳೆ ಕೊರತೆ….!

ಬೆಂಗಳೂರು: ರಾಜ್ಯಕ್ಕೆ ಜೂನ್ 4 ರಂದೇ ಮುಂಗಾರು ಪ್ರವೇಶಿಸಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬರಗಾಲದ ಆತಂಕ ಶುರುವಾಗಿದೆ. ಜೂನ್ 4 ರಿಂದ 15 ರವರೆಗಿನ ಅವಧಿಯಲ್ಲಿ ಕೇವಲ 19 ಮಿ.ಮೀ ಮಳೆಯಾಗಿದ್ದು, ವಾಡಿಕೆಯ 53 ಮಿ.ಮೀ ಗೆ ಹೋಲಿಸಿದರೆ ಇದು ಅರ್ಧಕ್ಕಿಂತಲೂ ಕಡಿಮೆಯಾಗಿದೆ. ಜಾಗತಿಕ ಹವಾಮಾನ ಬದಲಾವಣೆ ಹಾಗೂ ‘ಎಲ್ … Continued

ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?

ನವದೆಹಲಿ: ದಕ್ಷಿಣ ಮತ್ತು ಮಧ್ಯ ಭಾರತದ ಭಾಗಗಳಿಗೆ ಪ್ರವೇಶಿಸಿದ ಬೆನ್ನಲ್ಲೇ ನೈಋತ್ಯ ಮುಂಗಾರು ಮಳೆ ಆರ್ಭಟ ತೀವ್ರವಾಗಿ ಕ್ಷೀಣಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಅಂಕಿ-ಅಂಶಗಳ ಪ್ರಕಾರ, ಜೂನ್ 4 ರಿಂದ ಜೂನ್ 15 ರ ನಡುವಿನ ಅವಧಿಯಲ್ಲಿ ದೇಶದಲ್ಲಿ ಕೇವಲ 19.2 ಮಿಮೀ ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆಯು 53.7 ಮಿಮೀ … Continued

ಜೂನ್ ಮೊದಲಾರ್ಧದಲ್ಲಿ ಕೈಕೊಟ್ಟ ಮುಂಗಾರು ; ದೇಶಾದ್ಯಂತ ಶೇ. 32 ರಷ್ಟು ಮಳೆ ಕೊರತೆ; ಐಎಂಡಿ ಕಳವಳಕಾರಿ ವರದಿ

ನವದೆಹಲಿ: ಜೂನ್ 1ರಿಂದ ಆರಂಭವಾಗಿರುವ ಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಋತುವಿನ ಮೊದಲ ಹದಿನೈದು ದಿನಗಳಲ್ಲಿ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾದೆ. ಈ ಅವಧಿಯಲ್ಲಿ ಭಾರತದಾದ್ಯಂತ 42.4 ಮಿ.ಮೀ ಮಳೆ ಸುರಿದಿದ್ದು, ಇದು ವಾಡಿಕೆ … Continued

ಭಾರತದಲ್ಲಿ ಜೂನ್ ತಿಂಗಳಲ್ಲಿ ಮಾನ್ಸೂನ್ ಮಳೆ ಕೊರತೆ : ಹವಾಮಾನ ಇಲಾಖೆ

ನವದೆಹಲಿ: ಭಾರತದ ಹವಾಮಾನ ಇಲಾಖೆ (IMD) ಮಂಗಳವಾರ ತನ್ನ ಜೂನ್ ತಿಂಗಳ ಮಳೆಯ ಮುನ್ಸೂಚನೆಯನ್ನು ನವೀಕರಣ ಮಾಡಿದ್ದು, ಈ ವರ್ಷದ ಜೂನ್‌ ತಿಂಗಳಲ್ಲಿ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ತಿಳಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದ ಕೆಲವು ಭಾಗಗಳು ತೀವ್ರವಾದ ಶಾಖದ ಅಲೆಯಲ್ಲಿ ತತ್ತರಿಸುತ್ತಿವೆ. ಈಗ ದೇಶದಲ್ಲಿ ಮಾನ್ಸೂನ್ ಆಗಮನದ ಕುರಿತಾದ ನವೀಕರಣದಲ್ಲಿ ಭಾರತ … Continued

ಮಳೆ ಕೊರತೆ : ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸರ್ಕಾರದ ಅನುಮತಿ

ಬೆಳಗಾವಿ : ಜಿಲ್ಲೆಯ ಬೆಳಗಾವಿ ಹಾಗೂ ಖಾನಾಪುರ ತಾಲೂಕುಗಳನ್ನು ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲ ತಾಲೂಕುಗಳಲ್ಲಿ ಈ ಬಾರಿ ಮಳೆಯ ತೀವ್ರ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಎರಡು ತಾಲೂಕುಗಳನ್ನು ಹೊರತುಪಡಿಸಿ ಉಳಿದ ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ. ಮಳೆಯ ತೀವ್ರ ಅಭಾವ ಎದುರಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೋಡ … Continued