ಗುರುವಾರ (ಆಗಸ್ಟ್‌ 1) ಉತ್ತರ ಕನ್ನಡ ಜಿಲ್ಲೆಯ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಗುರುವಾರ (ಆಗಸ್ಟ್‌ 1) ಉತ್ತರ ಕನ್ನಡ ಜಿಲ್ಲೆಯ ಆರು ತಾಲೂಕಿನ ಶಾಲೆ-ಪಿಯು ಕಾಲೇಜ್‌ ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಜೋಯೊಡಾ ತಾಲೂಕಿನ ಎಲ್ಲಾ ಶಾಲೆಗಳು- ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ … Continued

ಭಾರಿ ಮಳೆ ; ಉಡುಪಿ ಜಿಲ್ಲೆಯ 4 ತಾಲೂಕಿನ ಶಾಲೆ-ಪಿಯು ಕಾಲೇಜುಗಳಿಗೆ ಇಂದು (ಜುಲೈ 31) ರಜೆ ಘೋಷಣೆ

ಉಡುಪಿ : ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜುಲೈ 31) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಮಳೆ ಹೆಚ್ಚಾಗುವ ಮುನ್ಸೂಚನೆ ನೀಡಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ, ಕಾಪು, ಕಾರ್ಕಳ, ಹೆಬ್ರಿಯ … Continued

ಮಳೆ : ಇಂದು (ಜುಲೈ 31)ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಇಂದು ಬುಧವಾರ (ಜುಲೈ 31) ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು- ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಬಾರಿ ಮಳೆ ಸುರಿಯುತ್ತಿದ್ದು, ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ … Continued

ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಭೂಕುಸಿತದ ಎಚ್ಚರಿಕೆ

ಬೆಂಗಳೂರು : ಬುಧವಾರ (ಜುಲೈ 31) ಕರ್ನಾಟಕದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ. … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಮುಂಗಾರು ಮಳೆ, ಮತ್ತೆ ಚುರುಕಾಗುವ ಸಾಧ್ಯತೆಯಿದ್ದು ಮತ್ತೆ ಆ ಭಾಗದ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳಿಗೆ ಅನ್ವಯವಾಗುವಂತೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ … Continued

ಬೆಳಗಾವಿ ಜಿಲ್ಲೆಯ 2 ತಾಲೂಕಿನ‌ ಶಾಲೆಗಳಿಗೆ, ಕೆಲ ತಾಲೂಕಿನ ಆಯ್ದ ಗ್ರಾಮಗಳ ಶಾಲೆಗಳಿಗೆ ಜುಲೈ 29-30 ರಂದು ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗೋಕಾಕ‌ ಮತ್ತು ಮೂಡಲಗಿ ತಾಲೂಕುಗಳಲ್ಲಿ ಮಾತ್ರ ಅಂಗನವಾಡಿ ಕೇಂದ್ರಗಳು, ಎಲ್ಲ‌ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ (ಜುಲೈ 29) ಹಾಗೂ ಮಂಗಳವಾರ (ಜುಲೈ 30) ರಜೆ‌ ಘೋಷಿಸಲಾಗಿದೆ. ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು, ಹುಕ್ಕೇರಿ ತಾಲೂಕಿನ … Continued

ಬೈಲಹೊಂಗಲ : ಮಲಪ್ರಭಾ ನದಿ ತೀರದಲ್ಲಿ ಕಾಣಿಸಿಕೊಂಡ ಬೃಹತ್‌ ಮೊಸಳೆ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಸಮೀಪದ ಮಾಟೊಳ್ಳಿ, ಲಿಂಗದಳ್ಳಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿ ಇದೀಗ ಬೃಹತ್ ಗಾತ್ರದ ಮೊಸಳೆ ಕಂಡು ಬಂದಿದೆ. ಇದರಿಂದ ನದಿತೀರದ ನಾಗರಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಮಹಾರಾಷ್ಟ್ರದ (Maharashtra) ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಬೆಳಗಾವಿ (Belagavi) ಜಿಲ್ಲೆಯ ಸಪ್ತ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರೊಟ್ಟಿಗೆ ಮೊಸಳೆಗಳು ಬರುತ್ತಿವೆ. … Continued

ಮಳೆ: ಇಂದು (ಜುಲೈ 27) ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ 10 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ಶನಿವಾರ (ಜುಲೈ 27) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಯಲ್ಲಾಪುರ, ದಾಂಡೇಲಿ, ಜೋಯಿಡಾ, ಶಿರಸಿ, ಸಿದ್ದಾಪುರ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಶಾಲೆಗಳು, … Continued

ಮಳೆ ; ನಾಳೆ (ಜು.27) ಧಾರವಾಡ ಜಿಲ್ಲೆಯ ಶಾಲೆ-ಪಿಯು ಕಾಲೇಜುಗಳಿಗೆ ರಜೆ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಮುಂದುವರೆದ ಪರಿಣಾಮ ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಶನಿವಾರ (ಜು.27)ದ ವರೆಗೆ ರಜೆ ವಿಸ್ತರಿಸಲಾಗಿದೆ‌. ಜುಲೈ 25 ಮತ್ತು 26 ರಂದು ಎರಡು ದಿನ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮಳೆ ಮುಂದುವರೆದ … Continued

ವ್ಯಾಪಕ ಮಳೆ : 1 ತಾಲೂಕು ಹೊರತುಪಡಿಸಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಲೆ-ಪಿಯು ಕಾಲೇಜುಗಳಿಗೆ ನಾಳೆ (ಜುಲೈ 27) ರಜೆ ಘೋಷಣೆ

ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ(ಜುಲೈ 27) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಮಳೆಯ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು … Continued