ಉತ್ತರ ಕನ್ನಡ ಜಿಲ್ಲೆ : ಗುಡ್ಡ ಕುಸಿದು ಬಂದ್‌ ಆಗಿದ್ದ ಕುಮಟಾ-ಸಿದ್ದಾಪುರ ಮಾರ್ಗ ಸಂಚಾರಕ್ಕೆ ಮುಕ್ತ

ಕುಮಟಾ : ಗುಡ್ಡ ಕುಸಿದು ಎರಡು ದಿನಗಳಿಂದ ಬಂದ್ ಆಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಸಿದ್ದಾಪುರ ಮಾರ್ಗ ಈಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಕುಮಟಾ-ಸಿದ್ದಾಪುರ ರಸ್ತೆಯ ಉಳ್ಳೂರುಮಠ ಕ್ರಾಸ್‌ ಸಮೀಪ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆಯ ಮೇಲೆ ಬಂದು ಬಿದ್ದಿತ್ತು. ರಸ್ತೆಯ ಮೇಲೆ ಬಿದ್ದಿದ್ದ ಮರ ಹಾಗೂ ಮಣ್ಣನ್ನು ತೆರವುಗೊಳಿಸಲಾಗಿದ್ದು, ಕುಮಟಾ-ಸಿದ್ದಾಪುರ ನಡುವಿನ … Continued

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲ ಶಾಲೆ-ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಮಂಗಳೂರು/ಉಡುಪಿ : ಧಾರಾಕಾರ ಮಳೆ ಹಿನ್ನಲೆ ಜುಲೈ 20 (ಶನಿವಾರ ) ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಪಿಯುಸಿ ವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 20 (ಶನಿವಾರ )ರಂದು … Continued

ಉತ್ತರ ಕನ್ನಡ ಜಿಲ್ಲೆ: ಶಾಲೆ- ಕಾಲೇಜುಗಳಿಗೆ ಇಂದು (ಜುಲೈ 20) ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್‌ ಅಲರ್ಟ್‌ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಶನಿವಾರ (ಜುಲೈ 20) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, … Continued

ಭಾರಿ ಮಳೆ ಮುನ್ಸೂಚನೆ ; ಕರ್ನಾಟಕದ ಐದು ಜಿಲ್ಲೆಗಳಿಗೆ ಇಂದು ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದ್ದು, ಆರು ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 19ರಂದು ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆಯು ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿಯಿಂದ … Continued

ವಿಪರೀತ ಮಳೆ : ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ಜುಲೈ 19ಕ್ಕೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 19) ಜಿಲ್ಲೆಯ ಐದು ತಾಲೂಕುಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು (12 ನೇ ತರಗತಿಯವರೆಗೆ) ಜುಲೈ … Continued

ಸಿದ್ದಾಪುರ : ಸರ್ಕುಳಿ ಸೇತವೆ ಮೇಲೆ 3 ಅಡಿಗಳಷ್ಟು ನೀರು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಅಘನಾಶಿನಿ ನದಿ ಪಾತ್ರದಲ್ಲಿ ವಿಪರೀತ ಮಳೆಯಾಗುತ್ತಿದೆ. ಸಿದ್ದಾಪುರ ತಾಲೂಕಿನ ನಿಲ್ಕುಂದ, ಹೆಗ್ಗರಣಿ, ತಟ್ಟಿಕೈ, ಬಾಳೇಸರ, ಹಾರ್ಸಿಕಟ್ಟಾ ಸುತ್ತಮುತ್ತ ವಿಪರೀತ ಮಳೆಯಾಗಿತ್ತಿದ್ದು, ಅಘನಾಶಿನಿ ನದಿ ಉಕ್ಕಿ ಹರಿಯುತ್ತಿದೆ. ಶಿರಸಿ ಸಿದ್ದಾಪುರ ತಾಲೂಕಿನ ಗಡಿ ಸರ್ಕುಳಿಯಲ್ಲಿ ಸೇತುವೆ ಮೇಲೆ 3-4 ಅಡಿಗಳಷ್ಟು ನೀರು ಹರಿಯುತ್ತಿದೆ. ಅಲ್ಲಿಯ ಮಹಿಷಾಸುರ ಮರ್ಧಿನಿ … Continued

ಉಡುಪಿ : ನಾಳೆ (ಜುಲೈ 19) ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಪಿಯುಸಿ ವರೆಗಿನ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 19ರ (ಶುಕ್ರವಾರ) ರಜೆ ಘೋಷಣೆ ಮಾಡಲಾಗಿದೆ. ಗುರುವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ, ಶುಕ್ರವಾರವು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, … Continued

ಉತ್ತರ ಕನ್ನಡ ಜಿಲ್ಲೆ ; ಇಂದು (ಜುಲೈ 19)ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್‌ ಅಲರ್ಟ್‌ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜುಲೈ 19) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ, ಹಳಿಯಾಳ, … Continued

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಮಾರುತಿ ಒಮ್ನಿ ಮೇಲೆ ಗುಡ್ಡ ಕುಸಿದು ಬಿದ್ದು ಜಖಂಗೊಂಡಿದ್ದು, ವಾಹನಲ್ಲಿದ್ದವರು ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಗುರುವಾರ ( ಜು.18) ನಸುಕಿನ ಜಾವ 3ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದ್ದು, ದೊಡ್ಡತಪ್ಪಲು ಸಮೀಪ ಭೂ … Continued

ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ ; ಇಬ್ಬರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಅಂಕೋಲಾ:  ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಸಾವೀಗಿಡಾದ ಮತ್ತೆರಡು ಮೃತ ದೇಹಗಳು ಗುರುವಾರ ಬೆಳಿಗ್ಗೆ ಪತ್ತೆಯಾಗಿದ್ದು, ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿದೆ. ಬಾಲಕಿಯ ಮೃತದೇಹ ಗೋಕರ್ಣ ಸಮೀಪ ಗಂಗೆಕೊಳ್ಳ ಸಮುದ್ರ ತೀರದಲ್ಲಿ ದೊರೆತಿದೆ. ತಾಲೂಕಿನ ಮಂಜಗುಣಿ ಬಳಿ ಪುರುಷನೋರ್ವನ ಮೃತ ದೇಹ ಪತ್ತೆಯಾಗಿದೆ ಈತ ಲಾರಿ ಚಾಲಕ ಇರಬಹುದು ಎಂದು ಅಂದಾಜಿಸಲಾಗಿದೆ ಆವಂತಿಕಾ (6) … Continued