ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ಮೇ 31ರಂದು ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ (ಮೇ 31) ರಂದು ಎಲ್ಲ ಅಂಗನವಾಡಿಗಳು, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, (ಸಿಬಿಎಸ್​ಸಿ, ಐಸಿಎಸ್ಇ ಸೇರಿದಂತೆ), ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ … Continued

ಮಂಗಳೂರು | ಗುಡ್ಡ ಕುಸಿದು ಅನಾಹುತ ; ಬಾಲಕಿ ಸೇರಿ ಇಬ್ಬರು ಸಾವು, ಅವಶೇಷಗಳಡಿ ಸಿಲುಕಿರುವ ಮೂವರ ರಕ್ಷಣೆಗೆ ಪ್ರಯತ್ನ

ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲvew ಅನಾಹುತಗಳು ಸಂಭವಿಸಿವೆ. ಕೆಲವೆಡೆ ಗುಡ್ಡ ಕುಸಿತ (Landslide) ಉಂಟಾಗಿದೆ. ಮಳೆ ಸಂಬಂಧಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದೇರಳಕಟ್ಟೆ ಮೊಂಟೆಪದವಿನ ಪಂಬದ ಹಿತ್ಲುವಿನಲ್ಲಿ ಗುಡ್ಡ ಕುಸಿದು ಮಣ್ಣು ಮನೆಗಳ ಮೇಲೆ ಬಿದ್ದಿದೆ. ಮನೆಗಳ ಅಡಿಯಲ್ಲಿ ಒಂದೇ ಕುಟುಂಬದ ಸಿಲುಕಿಕೊಂಡಿದ್ದಾರೆ. ಅವರಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಓರ್ವರನ್ನು … Continued

ಭಾರೀ ಮಳೆ : ಮೇ 30 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅಂಗನವಾಡಿಗಳು, ಶಾಲೆಗಳಿಗೆ ರಜೆ

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೇ 30 ರಂದು ಈ ಎರಡು ಜಿಲ್ಲೆಗಳ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ … Continued

ಇಂದು (ಮೇ 29) ಕರ್ನಾಟಕದ 6 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ನೆಚ್ಚರಿಕೆ ; ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಗುರುವಾರ (ಮೇ 29) ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೈಸೂರು, ಉಡುಪಿ, … Continued

ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಜೂನ್ ನಿಂದ ಸೆಪ್ಟೆಂಬರ್ ಅವಧಿಗೆ ಹವಾಮಾನ ಇಲಾಖೆ ತನ್ನ ಮಾನ್ಸೂನ್ ಮುನ್ಸೂಚನೆಯನ್ನು ಸ್ವಲ್ಪ ಪರಿಷ್ಕರಿಸಿದೆ, ದೀರ್ಘಾವಧಿಯ ಸರಾಸರಿಯ 106 ಪ್ರತಿಶತದಷ್ಟು ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದ್ದು, ಇದು ಹಿಂದಿನ ಅಂದಾಜಿನ 105 ಪ್ರತಿಶತಕ್ಕಿಂತ ಹೆಚ್ಚಾಗಿದೆ. ಈ ಮುನ್ಸೂಚನೆಯಲ್ಲಿ ಪ್ಲಸ್ ಅಥವಾ ಮೈನಸ್ ಶೇಕಡಾ 4 ರಷ್ಟು ಸಂಭವನೀಯ ವ್ಯತ್ಯಾಸವಾಗಬಹುದು ಎಂದು ಹೇಳಿದೆ. … Continued

ಗೋಕಾಕ | ಗೋಡೆ ಕುಸಿದು ಮಗು ಸಾವು ; ಇನ್ನೊಂದು ಮಗುವಿಗೆ ಗಾಯ

ಬೆಳಗಾವಿ: ಜಿಲ್ಲೆಯ ಗೋಕಾಕದ ಮಹಾಲಿಂಗೇಶ್ವರ ಕಾಲೊನಿಯಲ್ಲಿ ಸೋಮವಾರ ನಸುಕಿನಲ್ಲಿ ಮನೆ ಗೋಡೆ ಕುಸಿದು ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದೆ ಹಾಗೂ ಮತ್ತೊಂದು ಮಗುವಿಗೆ ಗಾಯವಾಗಿದೆ. ಮೃತಪಟ್ಟ ಮಗುವನ್ನು ಕೃತಿಕಾ ನಾಗೇಶ ಪೂಜಾರಿ (3.9 ವರ್ಷ) ಎಂದು ಗುರುತಿಸಲಾಗಿದೆ. ಈ ಮಗುವಿನ ಪಕ್ಕದಲ್ಲೇ ಮಲಗಿದ್ದ, ಈಕೆಯ ಐದು ವರ್ಷದ ಅಕ್ಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ … Continued

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ; 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು … Continued

ವಾಡಿಕೆಗಿಂತ ಒಂದು ವಾರಕ್ಕಿಂತ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ…!

ನವದೆಹಲಿ: ನೈಋತ್ಯ ಮಾನ್ಸೂನ್ ಶನಿವಾರ ಕೇರಳವನ್ನು ತಲುಪಿದ್ದು, 2009 ರ ನಂತರ ಭಾರತದ ಮುಖ್ಯ ಭೂಭಾಗಕ್ಕೆ ನೈಋತ್ಯ ಮುಂಗಾರು ಮಳೆ ಇಷ್ಟು ಮೊದಲು ಆಗಮಿಸಿರುವುದು ಇದೇ ಮೊದಲು ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. 2009 ರಲ್ಲಿ, ಮಾನ್ಸೂನ್ ಮೇ 23 ರಂದು ಕೇರಳಕ್ಕೆ ಆಗಮಿಸಿತ್ತು, 1975 ರಿಂದ ಲಭ್ಯವಿರುವ ದತ್ತಾಂಶವು ಮಾನ್ಸೂನ್ 1990 … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, … Continued

ಭಾರಿ ಮಳೆ ಮುನ್ನೆಚ್ಚರಿಕೆ : ಉತ್ತರ ಕನ್ನಡ ಜಿಲ್ಲೆ ಅಂಗನಾಡಿಗಳಿಗೆ ಮೇ 21 ರಂದು ರಜೆ ಘೋಷಣೆ

ಕಾರವಾರ: ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಇರುವ ಎಲ್ಲ ಅಂಗನವಾಡಿಗಳಿಗೆ ಮೇ 21 ರಂದು ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯಿ ಮೇ 22ರ ಬೆಳಿಗ್ಗೆ 8:30 ವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸದ್ಯ ಕಿರಿಯ … Continued