ಕರ್ನಾಟಕದ 7 ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಲೆನಾಡಿನಲ್ಲೂ ಮಳೆ ಜೋರಾಗಿ ಸುರಿಯುತ್ತಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮತ್ತೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡಿನ … Continued

ಭಾರಿ ಮಳೆ : ಜುಲೈ 6ರಂದು ಉತ್ತರ ಕನ್ನಡ ಜಿಲ್ಲೆ 5 ತಾಲೂಕುಗಳ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದು, ಹಲವೆಡೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶನಿವಾರ (ಜುಲೈ 6) ಜಿಲ್ಲೆಯ ಕರಾವಳಿ ಭಾಗದ ಐದು ತಾಲೂಕಿನ ಶಾಲೆ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ … Continued

ಕರ್ನಾಟಕದ 5 ಜಿಲ್ಲೆಗಳಲ್ಲಿ 5 ದಿನಗಳ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಐದು ದಿನ(ಜುಲೈ 9)ಗಳ ವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 3, ಉಡುಪಿ ಜಿಲ್ಲೆ 3 ತಾಲೂಕುಗಳ ಶಾಲೆಗಳಿಗೆ ಜುಲೈ 5ರಂದು ರಜೆ ಘೋಷಣೆ

ಕಾರವಾರ /ಉಡುಪಿ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ವ್ಯಾಪಕ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ. ಭಟ್ಕಳ ಮತ್ತು ಹೊನ್ನಾವರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ … Continued

ಮಳೆ : ಜುಲೈ 5ರಂದು ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕುಮಟಾ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ(ಜುಲೈ 5) ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ‌ರಜೆ ಘೋಷಣೆ ಮಾಡಿದ್ದಾರೆ. ಶುಕ್ರವಾರ ಕುಮಟಾ ತಾಲೂಕಿನಲ್ಲಿ … Continued

ಗುಡ್ಡ ಕುಸಿತ: ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಕಾರವಾರ : ಉತ್ತರ ಜಿಲ್ಲೆಯಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಭಾರಿ ಮಳೆಗೆ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವಾಗಿದ್ದು, ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್(Bangalore-Honnavar National Highway​​​ ಆಗಿದೆ. ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿದ್ದು, ಹೆದ್ದಾರಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು, ಬೃಹತ್ ಬಂಡೆಗಳು, ಮರಗಳು ಬಿದ್ದಿವೆ. ಏಕಾಏಕಿ ಗುಡ್ಡ … Continued

ಜುಲೈ 9ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 9ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ ೭ರ ವರೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಅಲ್ಲದೆ, ಗುಡುಗು … Continued

ಭಾರತ-ದಕ್ಷಿಣ ಆಫ್ರಿಕ ನಡುವೆ T20 ವಿಶ್ವಕಪ್ ಫೈನಲ್: ಮಳೆ ಬಂದ್ರೆ ಮುಂದೇನು..? ʼರಿಸರ್ವ್ ದಿನʼ ನಿಯಮ, ಕನಿಷ್ಠ ಓವರ್‌ಗಳು, ಹೆಚ್ಚುವರಿ ಸಮಯ…

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ನಲ್ಲಿ ಶನಿವಾರ ನಡೆಯಲಿರುವ T20 ವಿಶ್ವಕಪ್ 2024 ರ ಫೈನಲ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಡಲಿವೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಐಸಿಸಿ ಟ್ರೋಫಿಗಾಗಿ ತಮ್ಮ ಸುದೀರ್ಘ 11 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸುವ ಗುರಿಯನ್ನು ಹೊಂದಿದೆ, ಆದಾಗ್ಯೂ, ಪಂದ್ಯವು ಮಳೆಯಿಂದ ಅಡ್ಡಿಯಾಗುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯು ಶೇ 51 … Continued

ನಾಳೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ಬೀಳುವ ಮುನ್ಸೂಚನೆ ; ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ಮುಂದಿನ ಮೂರು ದಿನ ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅತ್ಯಧಿಕ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 50 ಕಿ.ಮಿಗೂ ಹೆಚ್ಚಿರುವ ಕಾರಣ, ಮೀನುಗಾರರಿಗೆ ಅಗತ್ಯ ಎಚ್ಚರಿಕೆ ನೀಡಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ಕೊಡಲಾಗಿದೆ. ನಾಳೆ … Continued

ಕರ್ನಾಟಕದ 8 ಜಿಲ್ಲೆಗಳಲ್ಲಿ ಮೂರು ದಿನ ಅಧಿಕ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಪ್ರತ್ಯೇಕ ಬಾರೀ ಮಳೆಯಿಂದ ಅತಿ ಭಾರೀ ಮಳೆ ಆಗುವ … Continued