ಉಳ್ಳಾಲ : ಭಾರೀ ಮಳೆಗೆ ಕಂಪೌಂಡ್ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ಮಂಗಳೂರು : ಪಕ್ಕದ ಕಂಪೌಂಡ್ ಗೋಡೆ ಮನೆ ಮೇಲೆ ಬಿದ್ದು ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವಿಗೀಡಾದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ರಿಹಾನ ಮಂಝಿಲ್ ಮನೆಯ ಯಾಸಿರ್ (45), ಪತ್ನಿ ಮರಿಯಮ್ಮ(40), ಪುತ್ರಿಯರಾದ ರಿಹಾನಾ (11)ಮತ್ತು ರಿಫಾನ (17) ಮೃತರು ಎಂದು ಗೊತ್ತಾಗಿದೆ. … Continued

ಮಳೆಗೆ ಅಯೋಧ್ಯೆ ರಾಮ ಮಂದಿರದ ಗರ್ಭಗುಡಿ ಮೇಲ್ಛಾವಣಿಯಲ್ಲಿ ಸೋರಿಕೆ: ಪ್ರಧಾನ ಅರ್ಚಕ

ಅಯೋಧ್ಯೆ: ಜನವರಿ 22 ರಂದು ಸಾರ್ವಜನಿಕ ದರ್ಶನಕ್ಕೆ ಉದ್ಘಾಟನೆಗೊಂಡ ನಂತರ, ಮೊದಲ ಭಾರಿ ಮಳೆಗೆ ಅಯೋಧ್ಯೆ ರಾಮ ಮಂದಿರದ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ ಎಂದು ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ. ದೇವಸ್ಥಾನದ ಆವರಣದಿಂದ ಮಳೆ ನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಸೋರಿಕೆಯಾಗಿದೆ. ದೇವಸ್ಥಾನದ ಅಧಿಕಾರಿಗಳು ಸೂಕ್ತ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜೂನ್‌ 27 ರ ವರೆಗೂ ಹಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿರುವ ಹಿನ್ನಲೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದಿನಿಂದ ಆರಂಭವಾಗಿ ಜೂನ್ 27 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ, ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು … Continued

ಇಂದು 12 ಜಿಲ್ಲೆಗಳಲ್ಲಿ ಭರ್ಜರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸೋಮವಾರ (ಜೂನ್‌ 24) ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 24 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಚಿಕ್ಕಮಗಳೂರು, ಮಂಡ್ಯ, ಮೈಸೂರು, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್‌ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 22, 23ರಂದು ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಜೂನ್ 22 ಮತ್ತು 23ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಎರಡು ದಿನ ರೆಡ್ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ , ಭೂ ಕುಸಿತದ ಸಾಧ್ಯತೆ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ಮುಂಗಾರು ಮಳೆಯ ಆರ್ಭಟ ಶುಕ್ರವಾರ (ಜೂನ್‌ 21)ದಿಂದ ಮತ್ತೆ ಜೋರಾಗಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಒಂದು ವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ, ಮೈಸೂರು … Continued

ಭಾರತದಲ್ಲಿ ಜೂನ್ ತಿಂಗಳಲ್ಲಿ ಮಾನ್ಸೂನ್ ಮಳೆ ಕೊರತೆ : ಹವಾಮಾನ ಇಲಾಖೆ

ನವದೆಹಲಿ: ಭಾರತದ ಹವಾಮಾನ ಇಲಾಖೆ (IMD) ಮಂಗಳವಾರ ತನ್ನ ಜೂನ್ ತಿಂಗಳ ಮಳೆಯ ಮುನ್ಸೂಚನೆಯನ್ನು ನವೀಕರಣ ಮಾಡಿದ್ದು, ಈ ವರ್ಷದ ಜೂನ್‌ ತಿಂಗಳಲ್ಲಿ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ತಿಳಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದ ಕೆಲವು ಭಾಗಗಳು ತೀವ್ರವಾದ ಶಾಖದ ಅಲೆಯಲ್ಲಿ ತತ್ತರಿಸುತ್ತಿವೆ. ಈಗ ದೇಶದಲ್ಲಿ ಮಾನ್ಸೂನ್ ಆಗಮನದ ಕುರಿತಾದ ನವೀಕರಣದಲ್ಲಿ ಭಾರತ … Continued

ಜೂನ್ 21ರಿಂದ 10 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ

ಬೆಂಗಳೂರು : ಈ ಬಾರಿ ಮುಂಗಾರು ಈವರೆಗೆ ತಕ್ಕಮಟ್ಟಿಗೆ ಸಮಾಧಾನ ನೀಡಿದ್ದರೂ ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗದರೆ ಕೆಲವು ಭಾಗಗಳಲ್ಲಿ ಮಳೆಯ ಕೊರತೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮಳೆ ಉತ್ತಮವಾಗಿದೆ, ಆದರೆ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದೆ. ಇದೇ ವೇಳೆ ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 6 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮುಂಗಾರು ಮತ್ತಷ್ಟು ಚುರುಕು ಪಡೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40-50 kmp ವೇಗದಲ್ಲಿ ಗಾಳಿ ಬೀಸಬಹುದು ಎಂದು ಹೇಳಿದೆ. … Continued

ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶುಕ್ರವಾರ (ಜೂನ್‌ ೧೪)ರಂದು ಬಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. … Continued