ರಾಜ್ಯದ ಈ ಜಿಲ್ಲೆಗಳಲ್ಲಿ ನವೆಂಬರ್‌ 22ರ ವರೆಗೂ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19ರಿಂದ 3 ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಎದ್ದಿರುವುದರಿಂದ ಟ್ರಫ್‌ ನಿರ್ಮಾಣವಾಗಿದೆ. ಹೀಗಾಗಿ ಅದರ ಪ್ರಭಾವದಿಂದಾಗಿ ಮುಂದಿನ ಮೂರು ದಿನಗಳು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಹಲವಡೆ ಜೋರಾಗಿ ಮಳೆಯಾಗಲಿದೆ ಎಂದು ತಿಳಿಸಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. … Continued

ನವೆಂಬರ್ 5ರ ವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ನವೆಂಬರ್ 5ರವರೆಗೆ ಗುಡುಗು, ಸಿಡಿಲಿನ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮಳೆಯಾಗಲಿದೆ. ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 2 ರಿಂದ ನಾಲ್ಕೈದು ದಿನ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 2 ರಿಂದ ನಾಲ್ಕೈದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್‌ 2 ರಿಂದ 7ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ … Continued

ಮಳೆ : ಬೆಳಗಾವಿ ಜಿಲ್ಲೆ ಐದು ತಾಲೂಕುಗಳ ಶಾಲೆಗಳಿಗೆ ಬುಧವಾರ ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ … Continued

ಭಾರೀ ಮಳೆ : ಇಂದು ಉತ್ತರ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್‌ಗಳಿಗೆ ಜುಲೈ 24ರಂದು  ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 24ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ,ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. … Continued

ವೀಡಿಯೊ: ಭಾರೀ ಮಳೆ ನಡುವೆ ಜಮ್ಮು-ಶ್ರೀನಗರ ಹೆದ್ದಾರಿಯ ದೊಡ್ಡ ಭಾಗ ಕುಸಿತ: ಅಮರನಾಥ ಯಾತ್ರೆ ಸ್ಥಗಿತ

ನವದೆಹಲಿ: ಭಾರೀ ಮಳೆಯಿಂದಾಗಿ ಶನಿವಾರ ಬೆಳಿಗ್ಗೆ ಜಮ್ಮು ನಗರದಿಂದ ವಾರ್ಷಿಕ ಅಮರನಾಥ ಯಾತ್ರೆ ಸ್ಥಗಿತಗೊಳಿಸಲಾಯಿತು, ಇದರಿಂದ ಭೂ ಕುಸಿತ ರಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯನ್ನು ಕೊಚ್ಚಿ ಹಾಕಿದೆ. ಹವಾಮಾನ ವೈಪರೀತ್ಯದಿಂದಾಗಿ ಶನಿವಾರ ಬೆಳಗ್ಗೆ ಇಲ್ಲಿನ ಭಗವತಿ ನಗರದ ಯಾತ್ರಿ ನಿವಾಸ ಬೇಸ್ ಕ್ಯಾಂಪ್‌ನಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. … Continued

ಮುಂದುವರಿದ ಮಳೆ : ದಕ್ಷಿಣ ಕನ್ನಡ, ಉಡುಪಿ ಶಾಲೆ-ಪಿಯು ಕಾಲೇಜುಗಳಿಗೆ ಶುಕ್ರವಾರವೂ ರಜೆ ಘೋಷಣೆ

ಮಂಗಳೂರು/ಉಡುಪಿ : ಜೋರಾದ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 7 ರಂದು ರಜೆ ಘೋಷಿಸಲಾಗಿದೆ. ಸತತ ನಾಲ್ಕನೇ ದಿನ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸುರಿಯುತ್ತಿದೆ. ಶುಕ್ರವಾರದ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಶುಕ್ರವಾರವೂ ಮಳೆಯ ಆರ್ಭಟ … Continued

ಭಾರೀ ಮಳೆ : ಜುಲೈ 7ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಶಾಲೆ-ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 7 ರಂದು ಜಿಲ್ಲೆಯ ಕರಾವಳಿ ತಾಲೂಕಿನ ಎಲ್ಲಾ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭಾರೀ ಭಾರೀ ಮಳೆ ಬೀಳುವ ಕುರಿತು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕರವಾಳಿ … Continued

ಭಾರೀ ಮಳೆ ಹಿನ್ನೆಲೆ : ಉತ್ತರ ಕನ್ನಡ ಜಿಲ್ಲೆ ಐದು ತಾಲೂಕಿನ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ತೀವ್ರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 12 ತರಗತಿವರೆಗೆ ಎಲ್ಲ ಶಾಲೆ ಕಾಲೇಜುಗಳಿಗೆ ಇಂದು, ಗುರುವಾರ (ಜುಲೈ 6)ಸಹ ರಜೆ ಮುಂದುವರಿಸಲಾಗಿದೆ. ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ 1 ರಿಂದ 12 ತರಗತಿವರೆಗೆ ಎಲ್ಲಾ ಶಾಲೆ … Continued