ನಾಳೆ (ಮೇ21) ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ; 4 ಜಿಲ್ಲೆಗಳಿಗೆ ರೆಡ್ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಮೇ 21ರ ಹೊತ್ತಿಗೆ ಕರ್ನಾಟಕ ಕರಾವಳಿಗೆ ಹತ್ತಿರದ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಮೇಲ್ಮಟ್ಟದ ವಾಯುಭಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಮೇ 21 ರಂದು ರಾಜ್ಯ ನಾಲ್ಕು ಜಿಲ್ಲೆಗಳಲ್ಲಿ ಅತ್ಯಂತ ಭಾರಿಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. 6 ಜಿಲ್ಲೆಗಳಿಗೆ … Continued

ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಕರ್ನಾಟಕದಾದ್ಯಂತ ಮೇ 24ರ ವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡಿನಲ್ಲಿ ಟ್ರಫ್ ಇದೆ. ಅರಬ್ಬೀ ಸಮುದ್ರದ ರಾಜ್ಯದ ಕರಾವಳಿಯ ಬಳಿ ಮೇ 22 ರಂದು ವಾಯುಭಾರ ಕುಸಿತ ಆಗಲಿದೆ. ಇದರ ಪ್ರಭಾವದಿಂದ ಮೇ 24ರ ವರೆಗೆ ಕರ್ನಾಟಕದಾದ್ಯಂತ ಉತ್ತಮ ಮಳೆ ಆಗಲಿದೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರಾಗಿ ಮಳೆ; ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮೇ 20 ಹಾಗೂ ಕರಾವಳಿ ಜಿಲ್ಲೆಗಳಿಗೆ ಮೇ 21ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮೇ 19ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಊಡುಪಿ ಹಾಗೂ ದಕ್ಷಿಣ ಕನ್ನಡ ಉತ್ತರ ಒಳನಾಡಿನ … Continued

ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ 23 ಜಿಲ್ಲೆಗಳಿಗೆ ಮಳೆಯಾಗಲಿದ್ದು, ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. … Continued

ಇಂದು ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆಯಿದ್ದು, ಹವಾಮಾನ ಇಲಾಖೆ (IMD) ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ (Yellow Alert) ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ … Continued

ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ಬಳ್ಳಾರಿ: ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಘಟನೆಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಮೃತರನ್ನು ರಾರಾವಿ ಗ್ರಾಮದ ಭೀರಪ್ಪ (45), ಸುನೀಲ (26) ಎಂದು ಗುರುತಿಸಲಾಗಿದೆ. ಸಿಡಿಲು ಬಡಿದ ಪರಿಣಾಮ ವಿನೋದ (14) … Continued

ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದಾದ್ಯಂತ ಮೇ 13ರಿಂದ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ ಹಾಗೂ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ತಿಳಿಸಿದೆ. ಇಂದು, ಸೋಮವಾರ ( ಮೇ 12) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಗುಡುಗು-ಮಿಂಚು ಸಹಿತ ಗಾಳಿ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 10ರ ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಾಯುಭಾರ ಕುಸಿತದಿಂದ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದೆ. ಹೀಗಾಗಿ ಮೇ 10ರ ವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲುದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ 7ರಿಂದ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಮೇ 6ರ ವರೆಗೆ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು-ಗಾಳಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಚಲನೆಯಿಂದಾಗಿ ಮೇ 6ರ ವರೆಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ವ್ಯಾಪಕ ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮರಾಠವಾಡ ಪ್ರದೇಶದಿಂದ ಕರ್ನಾಟಕ ಮತ್ತು ತಮಿಳುನಾಡು ಮೂಲಕ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿರುವ ಮನ್ನಾರ್ ಕೊಲ್ಲಿಯವರೆಗೆ ವಿಸ್ತರಿಸಿರುವ … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆ ; ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಏ.27ರಿಂದ ಮೇ 1ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾವೇರಿ, ಬೀದರ್, ಬಳ್ಳಾರಿ, ವಿಜಯನಗರ, ತುಮಕೂರು ಹಾಗೂ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ 27ರಂದು ಉತ್ತರ ಕನ್ನಡ, ಉಡುಪಿ ಹಾಗೂ … Continued