ಆಮಿಷ…ಮದುವೆ.. ನಂತರ ಚಿನ್ನಾಭರಣ-ಹಣದೊಂದಿಗೆ ಪಲಾಯನ…: ಕೊನೆಗೂ ಬಲೆಗೆಬಿದ್ದ 25 ಪುರುಷರನ್ನು ವಂಚಿಸಿದ್ದ ‘ಲೂಟಿಕೋರ ವಧು’…!

ಜೈಪುರ: ವಿವಾಹವಾಗಬೇಕು ಎಂದು ಬಯಸುತ್ತಿದ್ದ ಅಮಾಯಕರನ್ನು ವಂಚಿಸಿ ಲಕ್ಷಾಂತರ ಮೌಲ್ಯದ ಆಭರಣ ಮತ್ತು ನಗದು ಜೊತೆ ಪರಾರಿಯಾಗಿದ್ದಕ್ಕಾಗಿ ‘ಲೂಟಿಕೋರ ವಧು’ ಎಂದೇ ಕುಖ್ಯಾತಿ ಪಡೆದಿದ್ದ ಅನುರಾಧಾ ಪಾಸ್ವಾನ್ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆಕೆ ಹೊಸ ಹೆಸರು ಇಟ್ಟುಕೊಂಡು, ಅನೇಕ ಶಹರ ಮತ್ತು ಗುರುತನ್ನು ಬದಲಿಸಿಕೊಂಡು ಅನೇಕ ಬಾರಿ ಮದುವೆಯಾಗಿ ಆಭರಣ ಮತ್ತು ನಗದು ಜೊತೆ … Continued

ಗಣಿಗಾರಿಕೆ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೆ ಕೇಳದೇ ಇರಲು 20 ಲಕ್ಷ ರೂ. ಲಂಚ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಾಸಕ…!

ಜೈಪುರ: ರಾಜಸ್ತಾನ ವಿಧಾನಸಭೆಯಲ್ಲಿ ಮೂರು ಪ್ರಶ್ನೆಗಳನ್ನು ಕೇಳುವುದನ್ನು ಕೈಬಿಡಲು 20 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಭಾರತ್ ಆದಿವಾಸಿ ಪಕ್ಷದ ಶಾಸಕ ಜೈಕೃಷ್ಣ ಪಟೇಲ್ ಅವರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ACB) ಭಾನುವಾರ ಬಂಧಿಸಿದೆ ಎಂದು ಹಿರಿಯ ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಸ್ಥಾನದ ಎಸಿಬಿ (ACB) ಇತಿಹಾಸದಲ್ಲಿ ಶಾಸಕರೊಬ್ಬರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ … Continued

ದಂಪತಿ ಮಧ್ಯೆ ನಡೆದ ಜಗಳ ವಿಕೋಪಕ್ಕೆ ; ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡತಿ…!

ಆಘಾತಕಾರಿ ಘಟನೆಯೊಂದರಲ್ಲಿ ಗಂಡ-ಹೆಂಡಿರ ಮಧ್ಯೆ ನಡೆದ ಜಗಳದಲ್ಲಿ ಪತ್ನಿ ತನ್ನ ಪತಿಯ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಜಲಾವರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ 23 ವರ್ಷದ ರವಿನಾ ಸೈನ್ ಎಂಬ ಮಹಿಳೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು … Continued

ಪ್ರಧಾನಿ ಮೋದಿ ನನ್ನ ನೆಚ್ಚಿನ ನಟ ಎಂದು ಹೇಳಿಕೆ ನೀಡಿ ಬಿಜೆಪಿಯನ್ನೇ ಪೇಚಿಗೆ ಸಿಲುಕಿಸಿದ ರಾಜಸ್ಥಾನ ಸಿಎಂ…!

ಜೈಪುರ: ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಭಜನಲಾಲ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ನೆಚ್ಚಿನ ನಟ ಎಂದು ಹೇಳಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜಸ್ಥಾನ ಮುಖ್ಯಮಂತ್ರಿಗಳ ಈ ಹೇಳಿಕೆಗೆ ವಿಪಕ್ಷಗಳು ಬಿಜೆಪಿಯನ್ನು ಅಪಹಾಸ್ಯ ಮಾಡಿವೆ. ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ … Continued

ಮದುವೆ ಆಮಂತ್ರಣ ಕಾರ್ಡ್‌ ನಲ್ಲಿ ವಧು-ವರರ ಜನ್ಮ ದಿನಾಂಕ ಮುದ್ರಿಸುವುದನ್ನು ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ…! ಯಾಕೆಂದರೆ…

ಜೈಪುರ: ಬಾಲ್ಯವಿವಾಹಗಳನ್ನು ತಡೆಗಟ್ಟುವ ಸಲುವಾಗಿ ರಾಜಸ್ಥಾನ ಸರ್ಕಾರವು ವಧು-ವರರ ವಯಸ್ಸಿನ ಪುರಾವೆಗಳನ್ನು ಸಂಬಂಧಪಟ್ಟ ಕುಟುಂಬಗಳಿಂದ ಪಡೆಯುವಂತೆ ಮತ್ತು ಆಮಂತ್ರಣ ಪತ್ರಿಕೆಯಲ್ಲಿ ವಧು-ವರ ಇಬ್ಬರ ಜನ್ಮದಿನಾಂಕವನ್ನು ಮುದ್ರಿಸುವಂತೆ ಮುದ್ರಣಾಲಯಗಳಿಗೆ ಸೂಚಿಸಿದೆ. ಅಲ್ಲದೆ, ಬಾಲ್ಯ ವಿವಾಹಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಪ್ರಚಲಿತ ಕಾನೂನಿನ ವಿರುದ್ಧ ಜಾಗೃತಿ ಮೂಡಿಸಲು ಹಲ್ವಾಯಿಗಳು, ಪಂಡಿತರು, ಟೆಂಟ್ ಹೌಸ್‌ಗಳು, ಬ್ಯಾಂಡ್ ಟ್ರೂಪ್‌ಗಳು, … Continued

ರಾಜಸ್ಥಾನದ ಬಿಜೆಪಿ ಅಧ್ಯಕ್ಷರ ಎದುರೇ ಹೊಡೆದಾಡಿಕೊಂಡ ಇಬ್ಬರು ಬಿಜೆಪಿ ನಾಯಕರು ; ವೀಡಿಯೊ ವೈರಲ್‌

ಜೈಪುರ: ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ಅವರ ಸಮ್ಮುಖದಲ್ಲಿ ಬಿಜೆಪಿಯ ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದು, ಪರಸ್ಪರ ಕಪಾಳಮೋಕ್ಷ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುರುವಾರ ನಡೆದಿದೆ. ಬಿಜೆಪಿ ಅಲ್ಪಸಂಖ್ಯಾತ ಘಟಕದ ಸಭೆಯಲ್ಲಿ ಇಬ್ಬರು ಬಿಜೆಪಿ ನಾಯಕರ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಇಬ್ಬರು ನಾಯಕರು ಪರಸ್ಪರ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಜಗಳ ನಡೆಯುತ್ತಿದ್ದಂತೆ … Continued

ಇದು ಪೈಸೆ ವಾಲಿ ಕಾರ್‌ | ಒಂದು ರೂಪಾಯಿ ನಾಣ್ಯದಿಂದಲೇ ಕಾರನ್ನು ಅಲಂಕರಿಸಿದ ವ್ಯಕ್ತಿ ; ವೀಡಿಯೊ ವೈರಲ್

ಈಗಿನ ಕಾಲಘಟ್ಟದಲ್ಲಿ ಜನರು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲು ಏನಾದರೂ ವಿಚಿತ್ರವಾದದ್ದನ್ನು ಮಾಡಲು ಯೋಚಿಸುತ್ತಾರೆ. ಈಗ ಇದೇ ತರಹ ಕಾರಿಗೆ ಸಂಬಂಧಿಸಿದ ವಿಡಿಯೋವೊಂದು ಹೊರಬಿದ್ದಿದೆ. ಈ ವೀಡಿಯೊದಲ್ಲಿ ವ್ಯಕ್ತಿಯೊಬ್ಬರು ಸಂಪೂರ್ಣ ಕಾರನ್ನು ಒಂದು ರೂ. ನಾಣ್ಯಗಳಿಂದ ಅಲಂಕರಿಸಿದ್ದಾರೆ. ಒಂದು ರೂಪಾಯಿ ನಾಣ್ಯದಿಂದ ಅಲಂಕರಿಸಲಾದ ಈ ಕಾರಿನ ವಿನ್ಯಾಸವನ್ನು ನೋಡಿದ ಜನರು ಅಚ್ಚರಿಪಟ್ಟಿದ್ದಾರೆ, ಇದಕ್ಕೆ ಕಾರಣ ನಾಣ್ಯಗಳನ್ನು … Continued

ವೀಡಿಯೊ…| 10 ರೂ.ಗಳ ವಿಷಯಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಬಸ್ ಕಂಡಕ್ಟರ್…!

ಜೈಪುರ : 75 ವರ್ಷದ ನಿವೃತ್ತ ಐಎಎಸ್‌ (IAS) ಅಧಿಕಾರಿಯೊಬ್ಬರು ಜೈಪುರದಲ್ಲಿ ಬಸ್ ಕಂಡಕ್ಟರ್‌ ಗೆ 10 ರೂಪಾಯಿ ಹೆಚ್ಚುವರಿ ಹಣ ನೀಡಲು ನಿರಾಕರಿಸಿದ ಆರೋಪದ ಮೇಲೆ ಅವರ ಮೇಲೆ ನಿರ್ವಾಹಕ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಘಟನೆಯ ವೀಡಿಯೊ ವೈರಲ್ ಆಗಿದೆ. ಘಟನೆ ಶುಕ್ರವಾರ ನಡೆದಿದ್ದು, ನಿವೃತ್ತ ಐಎಎಸ್‌ (IAS) … Continued

ಬೈಕ್ ಕಳ್ಳತನದ ಶಂಕೆ : ವ್ಯಕ್ತಿಯನ್ನು ತಲೆಕೆಳಗಾಗಿ ನೇತುಹಾಕಿ ಥಳಿಸಿದ ಗುಂಪು

ಬಾರ್ಮರ್ : ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಬೈಕ್ ಕಳ್ಳತನದ ಶಂಕೆಯ ಮೇಲೆ ಜನರ ಗುಂಪೊಂದು ವ್ಯಕ್ತಿಯೊಬ್ಬನನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಕ್ರೂರವಾಗಿ ಥಳಿಸಿದ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಗುಢಾ ಮಲಾನಿ ಪ್ರದೇಶದ ಭಖರ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರವಣಕುಮಾರ ಎಂಬಾತ ಪ್ರತ್ಯೇಕ ಕಳ್ಳತನ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. … Continued

ವೀಡಿಯೊ…| 700 ಅಡಿ ಬೋರ್‌ವೆಲ್‌ ಗೆ ಬಿದ್ದ 10 ದಿನಗಳ ನಂತರ 3 ವರ್ಷದ ಬಾಲಕಿಯ ರಕ್ಷಣೆ ; ಆದರೆ…

ನವದೆಹಲಿ: 10 ದಿನಗಳ ಹಿಂದೆ ರಾಜಸ್ಥಾನದ ಕೋಟ್‌ಪುಟ್ಲಿಯಲ್ಲಿ ಬೋರ್‌ವೆಲ್‌ ಒಳಗೆ ಬಿದ್ದ ಮೂರು ವರ್ಷದ ಮಗುವನ್ನು ಐದಕ್ಕೂ ಹೆಚ್ಚು ನಡೆದ ಪ್ರಯತ್ನಗಳು ವಿಫಲವಾದ ನಂತರವೂ ಅಂತಿಮವಾಗಿ ರಕ್ಷಿಸಲಾಯಿತು.. ಆದರೆ ಆಸ್ಪತ್ರೆಗೆ ಸೇರಿಸಿದ ಗಂಟೆಗಳ ನಂತರ ಅವಳು ಮೃತಪಟ್ಟಿದ್ದಾಳೆ ಎಂದು ಪ್ರಕಟಿಸಲಾಯಿತು. ತಕ್ಷಣವೇ ಮಗುವನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಆಸ್ಪತ್ರೆಗೆ ಕೊಂಡೊಯ್ದರೂ ಆಕೆ … Continued