ಮತ್ತೆ ಸಂಘರ್ಷ ನಡೆದರೆ ನಾವು ಕೋಲ್ಕತ್ತಾ ಮೇಲೆ ದಾಳಿ ಮಾಡ್ತೇವೆ…’: ಭಾರತಕ್ಕೆ ಬೆದರಿಕೆ ಹಾಕಿದ ಪಾಕ್ ರಕ್ಷಣಾ ಸಚಿವ

ಸಿಯಾಲ್ಕೋಟ್: ಭಾರತದೊಂದಿಗೆ ಭವಿಷ್ಯದಲ್ಲಿ ಯಾವುದೇ ರೀತಿಯಸಂಘರ್ಷ ಉಂಟಾದಲ್ಲಿ, ಪಾಕಿಸ್ತಾನ ಈ ಬಾರಿ ಕೋಲ್ಕತ್ತಾವನ್ನು ಟಾರ್ಗೆಟ್‌ ಮಾಡಲಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಸಿಯಾಲ್ಕೋಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತವು ಈ ಬಾರಿಯೂ ಯಾವುದೇ ‘ಫಾಲ್ಸ್ ಫ್ಲಾಗ್ ಆಪರೇಷನ್’ (ನಕಲಿ ಕಾರ್ಯಾಚರಣೆ) ನಡೆಸಲು ಪ್ರಯತ್ನಿಸಿದರೆ, ನಾವು ಅದನ್ನು ಕೋಲ್ಕತ್ತಾದವರೆಗೂ … Continued

ಭಾರತದ ಸೇನೆಗೆ ₹ 79,000 ಕೋಟಿ ಮೌಲ್ಯದ ಉಪಕರಣಗಳ ಖರೀದಿಗೆ ಅನುಮೋದನೆ

ನವದೆಹಲಿ: ಭಾರತೀಯ ಸೇನೆಯ ಮೂರು ಪಡೆಗಳಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಯುದ್ಧ ಸಾಮರ್ಥ್ಯ ಮತ್ತು ಬಲವನ್ನು ಹೆಚ್ಚಿಸಲು ₹ 79,000 ಕೋಟಿ ಮೌಲ್ಯದ ಮಿಲಿಟರಿ ಶಸ್ತ್ರಾಸ್ತ್ರ ಮತ್ತು ಉಪಕರಣಗಳನ್ನು (ಮಿಲಿಟರಿ ಹಾರ್ಡ್‌ವೇರ್) ಖರೀದಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ (ಅಕ್ಟೋಬರ್‌ 23, 2025) ನಡೆದ ರಕ್ಷಣಾ … Continued

ವೀಡಿಯೊ | ರೈಲಿನಲ್ಲಿ ಮೊಬೈಲ್ ಲಾಂಚರಿನಿಂದ ಅಗ್ನಿ ಪ್ರೈಮ್ ಕ್ಷಿಪಣಿ ಹಾರಿಸಿದ ಭಾರತ ; ಇದರಿಂದ 2000 ಕಿಮೀ ದೂರದ ಟಾರ್ಗೆಟ್‌ ನಾಶ ಸಾಧ್ಯ

ನವದೆಹಲಿ : ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಮಧ್ಯಂತರ ಶ್ರೇಣಿಯ ಅಗ್ನಿ-ಪ್ರೈಮ್ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾಯಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಪ್ರಕಟಿಸಿದ್ದಾರೆ. X ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ರಕ್ಷಣಾ ಸಚಿವರು, ಮುಂದಿನ ಪೀಳಿಗೆಯ ಕ್ಷಿಪಣಿಯು 2000 ಕಿ.ಮೀ. ವ್ಯಾಪ್ತಿಯನ್ನು ಕ್ರಮಿಸಲು ವಿನ್ಯಾಸಗೊಳಿಸಲಾಗಿದೆ ಮತ್ತು ಈ ಕ್ಷಿಪಣಿಯು … Continued

ಭಾರತದ ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಂನ ಮೊದಲ ಹಾರಾಟ ಪರೀಕ್ಷೆ ಯಶಸ್ವಿಯಾಗಿ ನಡೆಸಿದ ಡಿಆರ್‌ ಡಿಒ | ವೀಕ್ಷಿಸಿ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಒಡಿಶಾ ಕರಾವಳಿಯಲ್ಲಿ ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಮ್ (IADWS)ನ ಮೊದಲ ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿತು. ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ನಡೆದ ಮೂರುವರೆ ತಿಂಗಳ ನಂತರ ಈ ಹೊಸ ವಾಯು ರಕ್ಷಣಾ ವ್ಯವಸ್ಥೆಯ ಹಾರಾಟ ಪರೀಕ್ಷೆಗಳು ನಡೆದವು. … Continued

ಪಹಲ್ಗಾಮ್‌ ದಾಳಿ; ಸೇನೆಯ ಸಿಡಿಎಸ್‌ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಹತ್ವದ ಮಾತುಕತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಭಾನುವಾರ (ಏ. 27) ಭಾರತೀಯ ಸೇನೆಯ ಚೀಫ್‌ ಆಫ್‌ ಜನರಲ್ ಸ್ಟಾಫ್ (CDS) ಜನರಲ್ ಅನಿಲ್ ಚೌಹಾಣ ಅವರೊಂದಿಗೆ ಸಭೆ ನಡೆಸಿದರು. ಏ. 22ರಂದು ಪಾಕಿಸ್ತಾನದ ಉಗ್ರರು … Continued

ಮೋದಿ ನಂತರ ಪ್ರಧಾನಿ ಅಭ್ಯರ್ಥಿಯಾಗಲು ಬಿಜೆಪಿಯಲ್ಲಿ ಯಾರು ಸೂಕ್ತ ? ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆ ಹೇಳಿದ್ದೇನು..?

ನವದೆಹಲಿ: ನರೇಂದ್ರ ಮೋದಿ ನಂತರ ಪ್ರಧಾನಿ ಹುದ್ದೆಗೆ ಬಿಜೆಪಿಯಲ್ಲಿ ಸೂಕ್ತ ವ್ಯಕ್ತಿ ಯಾರು? ಮೋದಿ ಅವರ ಬಳಿಕ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಜೆಪಿ ಯಾರನ್ನು ಆಯ್ಕೆ ಮಾಡಬಹುದು? ಇಂಡಿಯಾ ಟುಡೆ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆಯ ಆಗಸ್ಟ್ ಆವೃತ್ತಿಯಲ್ಲಿ ಮೋದಿ ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಯಾರು ಎಂಬ ಬಗ್ಗೆ ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. … Continued

ರಕ್ಷಣಾ ಸಚಿವ ರಾಜನಾಥ ಸಿಂಗ್ ದೆಹಲಿ ಏಮ್ಸ್ ಗೆ ದಾಖಲು

ನವದೆಹಲಿ: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಗುರುವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿದೆ. ಬುಧವಾರ ತಡರಾತ್ರಿ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಹಳೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಯಿತು. ನರಶಸ್ತ್ರಚಿಕಿತ್ಸಾ ವಿಭಾಗದ ನಿಗಾದಲ್ಲಿದ್ದು, ಆವರ ಆರೋಗ್ಯ ಸ್ಥಿರವಾಗಿದೆ. ಶುಕ್ರವಾರ ಡಿಸ್ಚಾರ್ಜ್ ಆಗಬಹುದು ಎಂದು ದೆಹಲಿಯ ಏಮ್ಸ್ ತಿಳಿಸಿದೆ. ಗುರುವಾರ … Continued

ತಾಯಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲೂ ನನ್ನನ್ನು ಬಿಡಲಿಲ್ಲ : ಕಾಂಗ್ರೆಸ್ಸಿನ ‘ಸರ್ವಾಧಿಕಾರಿ’ ಆರೋಪಕ್ಕೆ ತುರ್ತು ಪರಿಸ್ಥಿತಿ ಕರಾಳತೆ ನೆನಪಿಸಿದ ರಾಜನಾಥ ಸಿಂಗ್‌

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಪ್ರತಿಪಕ್ಷಗಳ ಮೇಲೆ ಭಾವನಾತ್ಮಕ ವಾಗ್ದಾಳಿ ನಡೆಸಿದರು. ಆಡಳಿತಾರೂಢ ಭಾರತೀಯ ಜನತಾ ಪಕ್ಷವು “ಅಘೋಷಿತ ತುರ್ತು ಪರಿಸ್ಥಿತಿ” ಅನ್ನು ಹೇರಿದೆ ಎಂದು ಆಗಾಗ್ಗೆ ಆರೋಪಿಸಿದೆ. ಆದರೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಜೈಲಿನಲ್ಲಿದ್ದಾಗ ತನ್ನ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸದಂತೆ ತನಗೆ ನಿರ್ಬಂಧಿಸಲಾಗಿತ್ತು ಎಂದು … Continued

ಅಡ್ವಾಣಿ ನಿವಾಸದಲ್ಲೇ ಅವರಿಗೆ ʼಭಾರತ ರತ್ನʼ ಪುರಸ್ಕಾರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ : ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಅವರು ಪ್ರದಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ … Continued

ಲೋಕಸಭೆ ಚುನಾವಣೆ | 27 ಸದಸ್ಯರ ಪ್ರಣಾಳಿಕೆ ಸಮಿತಿ ಪ್ರಕಟಿಸಿದ ಬಿಜೆಪಿ ;ರಾಜನಾಥ ಸಿಂಗ್ ಚೇರ್ಮನ್‌ : ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿದ್ದಾರೆ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ. ಅಲ್ಲದೆ, ಪ್ರಣಾಳಿಕೆ ಸಮಿತಿಗೆ 24 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಅರ್ಜುನ ಮುಂಡಾ, ಭೂಪೇಂದ್ರ ಯಾದವ, ಅರ್ಜುನರಾಮ ಮೇಘವಾಲ್, … Continued