ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿಯಾದ ಎಂ.ನಾಗರಾಜ್ ಅವಿರೋಧವಾಗಿ ಆಯ್ಕೆಯಾದವರು. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಒಟ್ಟು ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ಪೈಕಿ ರಾಜ್ಯಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಬೋಜಣ್ಣ ಸೋಮಣ್ಣ … Continued

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಕೂಡದು ಎಂದು ಹಲವಾರು ಶಾಸಕರು, ಸಚಿವರ ಒತ್ತಡ ; ಮೌನಕ್ಕೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ  ಗುರುವಾರ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ, ಬುಧವಾರ ಸಿದ್ದರಾಮಯ್ಯ ಅವರ ಆಪ್ತ ಸಚಿವರು ಮತ್ತು ನಿಷ್ಠಾವಂತ ಶಾಸಕರು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ … Continued

ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ ; ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸಿಗುವುದೇ 3ನೇ 2ರಷ್ಟು ಬಹುಮತ ?

ನವದೆಹಲಿ: ಜೂನ್ ಮತ್ತು ಜುಲೈ ತಿಂಗಳಿನಲ್ಲಿ ತೆರವಾಗಲಿರುವ 10 ರಾಜ್ಯಗಳ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಮತದಾನ ಮುಗಿದ ತಕ್ಷಣ ಅಂದೇ ಸಂಜೆ ಮತ ಎಣಿಕೆ ಕಾರ್ಯವೂ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಪ್ರಸಕ್ತ ಸಾಲಿನ ಜೂನ್ 21 ರಿಂದ ಜುಲೈ 19 … Continued

ರಾಜ್ಯಸಭಾ ಚುನಾವಣೆ: ಆರು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

ನವದೆಹಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ವಿವಿಧ ರಾಜ್ಯಗಳಿಂದ ಸ್ಪರ್ಧಿಸಲಿರುವ ಆರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪಕ್ಷ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ತೆಲಂಗಾಣದ ಇಬ್ಬರು ಹಾಗೂ ಛತ್ತೀಸ್‌ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತಮಿಳುನಾಡಿನಿಂದ ತಲಾ ಒಬ್ಬೊಬ್ಬ ಅಭ್ಯರ್ಥಿಗಳು ಸೇರಿದ್ದಾರೆ. ಅಭ್ಯರ್ಥಿಗಳ ವಿವರ: ತೆಲಂಗಾಣ: ಅಭಿಷೇಕ ಮನು ಸಿಂಘ್ವಿ ಮತ್ತು ವೇನ ನರೇಂದರ ರೆಡ್ಡಿ ಛತ್ತೀಸ್‌ಗಢ: ಫುಲೋ … Continued

ಪಾಕ್ ಪರ ಘೋಷಣೆ ಪ್ರಕರಣ: ಸಂಸದ ಸೈಯದ್ ನಾಸಿರ್ ಹುಸೇನಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಪತ್ರ

ಬೆಂಗಳೂರು : ಕಳೆದ ವಾರ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಜಯಗಳಿಸಿದ ನಂತರ ವಿಧಾನಸಭೆಯೊಳಗೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಮೂವರನ್ನು ಬಂಧಿಸಿದ ಕೆಲವು ದಿನಗಳ ನಂತರ, ಈ ಪ್ರಕರಣದಲ್ಲಿ ತನಿಖೆ ಪೂರ್ಣವಾಗುವವರೆಗೂ ಸೈಯದ್ ನಾಸಿರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು … Continued

ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ಎಫ್​ಎಸ್​ಎಲ್​​ ವರದಿಯಲ್ಲಿ ದೃಢ: ಬಿಜೆಪಿ ಟ್ವೀಟ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ಸಿನ ಡಾ ನಾಸಿರ್‌ ಹುಸೇನ್ ಪರ ಬೆಂಬಲಿಗರು ವಿಧಾನಸೌಧ ಆವರಣದಲ್ಲಿ ಸಂಭ್ರಮಾಚರಣೆ ಮಾಡುವ ವೇಳೆ ‘ಪಾಕಿಸ್ತಾನ​ ಜಿಂದಾಬಾದ್​​ ಘೋಷಣೆ’ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ (FSL)​ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ “ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ … Continued

ರಾಜ್ಯಸಭೆ ಚುನಾವಣೆ | ನನಗೆ ಅನಾರೋಗ್ಯ ಇದ್ದ ಕಾರಣ ಮತದಾನ ಮಾಡ್ಲಿಕ್ಕೆ ಆಗ್ಲಿಲ್ಲ ; ಶಿವರಾಮ ಹೆಬ್ಬಾರ

ಯಲ್ಲಾಪುರ: ‘ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆಂದು ದಾಖಲಾಗಿದ್ದೆ, ಮತದಾನ ಮಾಡಲು ಆಗದೇ ಇರುವುದಕ್ಕೆ ನನಗೆ ಬೇಸರವಿದೆ. ಮಂಗಳವಾರ ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಅವರು ಮಧ್ಯಾಹ್ನದ ಒಳಗೆ … Continued

ತನಿಖೆಯಲ್ಲಿ ಪಾಕ್ ಪರ ಘೋಷಣೆ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಂಗಳವಾರ ನೂತನ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್ ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದ್ದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ತೀವ್ರ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ವೀಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ … Continued

ರಾಜ್ಯಸಭಾ ಚುನಾವಣೆ: ಉತ್ತರಪ್ರದೇಶದ 10 ಸ್ಥಾನಗಳಲ್ಲಿ ಬಿಜೆಪಿ 8 ರಲ್ಲಿ, ಸಮಾಜವಾದಿ ಪಕ್ಷ 2 ರಲ್ಲಿ ಗೆಲುವು

ನವದೆಹಲಿ: ಜಯಂತ ಚೌಧರಿ ಅವರ ರಾಷ್ಟ್ರೀಯ ಲೋಕದಳ ಮತ್ತು ಸಮಾಜವಾದಿ ಪಕ್ಷದ ಕೆಲವು ಬಂಡಾಯ ಶಾಸಕರ ಸಹಾಯದಿಂದ ಬಿಜೆಪಿ ಉತ್ತರ ಪ್ರದೇಶದಿಂದ ರಾಜ್ಯಸಭೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಹೆಚ್ಚುವರಿ ಸ್ಥಾನವನ್ನು ಪಡೆದುಕೊಂಡಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆದ್ದ ನಂತರ ಉತ್ತರ ಪ್ರದೇಶದಲ್ಲಿಯೂ ಬೋನಸ್ ಸ್ಥಾನಗಳನ್ನು ಪಡೆಯಲು ಬಿಜೆಪಿ … Continued

ರಾಜ್ಯಸಭೆ ಚುನಾವಣೆ : ಕಾಂಗ್ರೆಸ್‌ ಶಾಸಕರ ಅಡ್ಡಮತದಾನ, ಹಿಮಾಚಲದಲ್ಲಿ ಅಭಿಷೇಕ ಮನು ಸಿಂಘ್ವಿಗೆ ಸೋಲು

ಶಿಮ್ಲಾ: ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಮಂಗಳವಾರ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸೋಲಿಸಿದ್ದಾರೆ..! ಮತ ಎಣಿಕೆಯ ವೇಳೆ ಇಬ್ಬರು ಅಭ್ಯರ್ಥಿಗಳು ತಲಾ 34-34 ಮತಗಳನ್ನು ಪಡೆದ ನಂತರ ಸಮನಾದ ಟಾಸ್‌ ಮಾಡುವ ಮೂಲಕ ವಿಜೇತರನ್ನು ನಿರ್ಧರಿಸಲಾಯಿತು. 68 ಸದಸ್ಯ … Continued