ಟಿಎಂಸಿಗೆ ಆಘಾತ | ಮಮತಾ ಸರ್ಕಾರ ಕೋಲ್ಕತ್ತಾ ಪ್ರತಿಭಟನೆ ನಿಭಾಯಿಸಿದ ರೀತಿಗೆ ಅಸಮಾಧಾನ ; ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ : ಟಿಎಂಸಿ ರಾಜ್ಯಸಭಾ ಸಂಸದ ಜವಾಹರ ಸರ್ಕಾರ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಮಮತಾ ಸರ್ಕಾರವು ಪ್ರತಿಭಟನೆಗಳನ್ನು ನಿಭಾಯಿಸಿದ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಿರುವ ರಾಜೀನಾಮೆ … Continued

12 ರಾಜ್ಯಸಭಾ ಸದಸ್ಯರ ಅವಿರೋಧ ಆಯ್ಕೆ; ಮೇಲ್ಮನೆಯಲ್ಲಿ ಬಹುಮತದ ಗಡಿಮುಟ್ಟಿದ ಎನ್‌ಡಿಎ

ನವದೆಹಲಿ : ಮೇಲ್ಮನೆಗೆ ನಡೆದ ಉಪಚುನಾವಣೆಯಲ್ಲಿ ಒಂಬತ್ತು ಬಿಜೆಪಿ ಸದಸ್ಯರು ಮತ್ತು ಇಬ್ಬರು ಮಿತ್ರಪಕ್ಷಗಳಿಂದ ಅವಿರೋಧವಾಗಿ ಆಯ್ಕೆಯಾದ ಕಾರಣ ಆಡಳಿತಾರೂಢ ಎನ್‌ಡಿಎ ರಾಜ್ಯಸಭೆಯಲ್ಲಿ ಬಹುಮತದ ಗಡಿ ತಲುಪಿದೆ. ಒಂಬತ್ತು ಸದಸ್ಯರ ಗೆಲುವಿನಿಂದಾಗಿ ಬಿಜೆಪಿಯ ಬಲ 96ಕ್ಕೆ ತಲುಪಿದ್ದು, ಮೇಲ್ಮನೆಯಲ್ಲಿ ಎನ್‌ಡಿಎ 112ಕ್ಕೆ ತಲುಪಿದೆ. ಅವಿರೋಧವಾಗಿ ಆಯ್ಕೆಯಾದ ಇತರ ಮೂವರು ಸದಸ್ಯರಲ್ಲಿ ಎನ್‌ಡಿಎ ಮಿತ್ರಪಕ್ಷಗಳಾದ ಅಜಿತ್ ಪವಾರ್ … Continued

ಸೆಪ್ಟೆಂಬರ್​ 3ರಂದು ರಾಜ್ಯಸಭೆಗೆ ಉಪಚುನಾವಣೆ: ಮೇಲ್ಮನೆಯಲ್ಲಿ ಬಹುಮತದ ಮೇಲೆ ಕಣ್ಣಿಟ್ಟ ಎನ್​ಡಿಎ

ನವದೆಹಲಿ : ಮುಂದಿನ ತಿಂಗಳು ರಾಜ್ಯಸಭೆಯ 12 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯಸಭೆಯಲ್ಲಿ ಸ್ಪಷ್ಟ ಬಹುಮತವನ್ನು ಸಾಧಿಸುವ ನಿರೀಕ್ಷೆಯಿದೆ. ಇದು ವಕ್ಫ್ (ತಿದ್ದುಪಡಿ) ಮಸೂದೆಯಂತಹ ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ಪಡೆಯಲು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡುತ್ತದೆ. ಹೀಗಾಗಿ ಮೇಲ್ಮನೆಯಾದ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬಹುಮತ ಪಡೆಯುವುದು ಮುಖ್ಯವಾಗಿದೆ. ರಾಜ್ಯಸಭೆಯ ಪ್ರಸ್ತುತ ಸಂಖ್ಯಾಬಲ 229 … Continued

ವಕ್ಫ್ ತಿದ್ದುಪಡಿ ಮಸೂದೆ | 31 ಸದಸ್ಯರ ಜಂಟಿ ಸಂಸದೀಯ ಸಮಿತಿ ರಚನೆ : ಅವರಲ್ಲಿ 21 ಲೋಕಸಭಾ ಸದಸ್ಯರು; ಪಟ್ಟಿ ಇಲ್ಲಿದೆ..

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ 2024ಕ್ಕೆ ಹಲವು ವಿರೋಧ ಪಕ್ಷದ ಸದಸ್ಯರು ಕಳವಳ ವ್ಯಕ್ತಪಡಿಸಿದ ನಂತರ ಜಂಟಿ ಸಂಸದೀಯ ಸಮಿತಿಗೆ ಉಲ್ಲೇಖಿಸಲಾಗಿದ್ದು, ಅದರ ಒಂದು ದಿನದ ನಂತರ, ಲೋಕಸಭೆಯು ಶುಕ್ರವಾರ ಪ್ರಸ್ತಾವಿತ ಶಾಸನವನ್ನು ಪರಿಶೀಲಿಸಲು ಸಮಿತಿಗೆ 31 ಸದಸ್ಯರನ್ನು ನೇಮಕ ಮಾಡುವ ಪ್ರಸ್ತಾಪವನ್ನು ಅಂಗೀಕರಿಸಿತು. ಸ್ಪೀಕರ್ ಓಂ ಬಿರ್ಲಾ(Om Birla) ಅವರು ಶುಕ್ರವಾರ 31 ಸದಸ್ಯರ … Continued

ರಾಜ್ಯಸಭೆ ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ ; ಆಸ್ಪತ್ರೆಗೆ ದಾಖಲು

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಅವಕಾಶ ನೀಡದ ರಾಜ್ಯಸಭಾ ಚೇರ್ಮನ್‌ ನಿರ್ಧಾರದ ವಿರುದ್ಧ ಪ್ರತಿಭಟಿಸುತ್ತಿರುವಾಗ ಕಾಂಗ್ರೆಸ್ ಸದಸ್ಯರೊಬ್ಬರು ಸದನದ ಬಾವಿಯಲ್ಲಿ ಮೂರ್ಛೆ ಹೋದ ಘಟನೆ ಶುಕ್ರವಾರ (ಜೂನ್ 28)ರಂದು ರಾಜ್ಯಸಭೆಯಲ್ಲಿ ನಡೆಯಿತು. ನೆಲದ ಮೇಲೆ ಬಿದ್ದಿದ್ದ ನೇತಾಮ್‌ ಅವರನ್ನು ತಕ್ಷಣವೇ ಆಂಬುಲೆನ್ಸ್‌ ನಲ್ಲಿ ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಅವರ … Continued

ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಜೆಪಿ ನಡ್ಡಾ ನೇಮಕ

ನವದೆಹಲಿ: ಉತ್ತರ ಮುಂಬೈ ಕ್ಷೇತ್ರದಿಂದ 18ನೇ ಲೋಕಸಭೆಗೆ ಪ್ರವೇಶಿಸಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಬದಲಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರನ್ನಾಗಿ ನೇಮಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದ 41 ಅಭ್ಯರ್ಥಿಗಳಲ್ಲಿ ಜೆ.ಪಿ. ನಡ್ಡಾ ಕೂಡ ಒಬ್ಬರು. ಗೋಯಲ್ ಅವರು ಜುಲೈ 5, … Continued

ಲೋಕಸಭೆ ಚುನಾವಣೆ ನಂತರದ ಮೊದಲ ಸಂಸತ್ ಅಧಿವೇಶನ ಜೂನ್ 24ರಿಂದ ಆರಂಭ

ನವದೆಹಲಿ : 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಬುಧವಾರ ತಿಳಿಸಿದ್ದಾರೆ. ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸದನದ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತಾರೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ. ರಾಷ್ಟ್ರಪತಿ ದ್ರೌಪದಿ … Continued

‘ಯುಗಾಂತ್ಯ’ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ ; ಮಲ್ಲಿಕಾರ್ಜುನ ಖರ್ಗೆ ಪತ್ರ

ನವದೆಹಲಿ: 33 ವರ್ಷಗಳ ಸುದೀರ್ಘ ಸಂಸದೀಯ ಪಯಣಕ್ಕೆ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರು ಮಂಗಳವಾರ ಅಂತ್ಯ ಹಾಡಿದ್ದಾರೆ. ರಾಜ್ಯಸಭೆಯಿಂದ ಬುಧವಾರ (ಏಪ್ರಿಲ್‌ 3) ನಿವೃತ್ತರಾಗಲಿರುವ ಭಾರತದ ಮಾಜಿ ಪ್ರಧಾನಿ ಮತ್ತು ಪಕ್ಷದ ಹಿರಿಯ ನಾಯಕ ಮನಮೋಹನ ಸಿಂಗ್ ಅವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸಿಂಗ್ ನಿವೃತ್ತಿಯನ್ನು ‘ಯುಗಾಂತ್ಯ’ ಎಂದು ಖರ್ಗೆ … Continued

ವೀಡಿಯೊ…| ರಾಜ್ಯಸಭಾ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾಮೂರ್ತಿ..: ವೀಕ್ಷಿಸಿ

ನವದೆಹಲಿ: ಲೇಖಕಿ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾ ಮೂರ್ತಿ ಗುರುವಾರ (ಮಾರ್ಚ್ 14) ರಾಜ್ಯಸಭೆಯ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆ ಚೇರ್ಮನ್‌ ಜಗದೀಪ ಧನಕರ್‌ ಅವರ ಚೇಂಬರ್‌ನಲ್ಲಿ ನಡೆದ ಸಮಾರಂಭದಲ್ಲಿ ಜಗದೀಪ್‌ ಧನಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ಸುಧಾಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೇಂದ್ರ ಸಚಿವ ಪೀಯೂಷ್‌ ಗೋಯಲ್‌, … Continued

ರಾಜ್ಯಸಭೆಗೆ ಇನ್ಫೊಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ನಾಮನಿರ್ದೇಶನ

ಬೆಂಗಳೂರು: ಇನ್ಫೊಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿ … Continued