ರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ಮೂವರು ಸೇರಿ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್

ನವದೆಹಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಗುರುವಾರ (ಜೂನ್ 4) ತನ್ನ 7 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು  ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕದಿಂದ ಮತ್ತೊಮ್ಮೆ ಕಣಕ್ಕಿಳಿಸಲಾಗಿದ್ದು, ಅವರೊಂದಿಗೆ ಪಕ್ಷದ ಪ್ರಮುಖ ನಾಯಕರಾದ ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಅವರಿಗೂ ಕರ್ನಾಟಕದಿಂದಲೇ ಟಿಕೆಟ್ ನೀಡಲಾಗಿದೆ. ಎಐಸಿಸಿ … Continued

ಅಡ್ಡಮತದಾನ ಮಾಡಿದ ಐವರು ಶಾಸಕರು ಕಾಂಗ್ರೆಸ್ಸಿನಿಂದ ಅಮಾನತು

ಗುರುಗ್ರಾಮ: ಮಾರ್ಚ್ 16ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ (Cross-voting) ಮಾಡಿದ ಆರೋಪದ ಮೇಲೆ ಹರಿಯಾಣದ ಐವರು ಕಾಂಗ್ರೆಸ್ ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಗುರುವಾರ ಅಮಾನತುಗೊಳಿಸಲಾಗಿದೆ. ಈ ಅಡ್ಡಮತದಾನದಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಕರಮವೀರ ಬೌಧ್ ಅವರ ಗೆಲುವು ಬಹುತೇಕ ಕೈತಪ್ಪುವ ಹಂತಕ್ಕೆ ತಲುಪಿತ್ತು. ಪಕ್ಷದ ಶಿಸ್ತು ಉಲ್ಲಂಘನೆಗಾಗಿ ಶೆಲ್ಲಿ ಚೌಧರಿ (ನಾರಾಯಣಗಢ), ರೇಣು ಬಾಲಾ … Continued

ರಾಜ್ಯಸಭಾ ಚುನಾವಣೆ: ಬಿಜೆಪಿ ಅಧ್ಯಕ್ಷ ನಿತಿನ್ ನವೀನ ಸೇರಿ 9 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮಾರ್ಚ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ 9 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಬಿಹಾರದಿಂದ ಕಣಕ್ಕಿಳಿಯಲಿದ್ದಾರೆ. ರಾಜ್ಯವಾರು ಅಭ್ಯರ್ಥಿಗಳ ವಿವರ ಹೀಗಿದೆ: ಬಿಹಾರ : ನಿತಿನ್ ನವೀನ (ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ) ಮತ್ತು ಶಿವೇಶಕುಮಾರ ಅಸ್ಸಾಂ : ತೇರಾಶ್ ಗೋವಾಲಾ … Continued

ಜಮ್ಮು-ಕಾಶ್ಮೀರ ರಾಜ್ಯಸಭೆ ಚುನಾವಣೆ ; ನ್ಯಾಷನಲ್ ಕಾನ್ಫರೆನ್ಸ್ 3, ಬಿಜೆಪಿ 1ರಲ್ಲಿ ಗೆಲುವು

ನವದೆಹಲಿ : 2019ರಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ರಾಜ್ಯಸಭಾ ಚುನಾವಣೆಯಲ್ಲಿ, ನಾಲ್ಕು ಸ್ಥಾನಗಳಲ್ಲಿ ಒಮರ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಶುಕ್ರವಾರ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ವಿಪಕ್ಷ ಬಿಜೆಪಿ ಒಂದನ್ನು ಗೆದ್ದುಕೊಂಡಿದೆ. ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ತನ್ನ ಅಭ್ಯರ್ಥಿ ಚೌಧರಿ ಮೊಹಮ್ಮದ್ ರಂಜಾನ್ ಮೊದಲ ರಾಜ್ಯಸಭಾ … Continued

ರಾಜ್ಯಸಭಾ ಚುನಾವಣೆ : ಮತದಾನಕ್ಕೆ ಗೈರಾದ ಬಿಜೆಪಿ ಶಾಸಕ ಹೆಬ್ಬಾರ..!

ಬೆಂಗಳೂರು : ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಂದು (ಫೆಬ್ರವರಿ 27) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ವಿಧಾನಸೌಧದಲ್ಲಿ ನಡೆದಿದ್ದ ಮತದಾನ ಅಂತ್ಯವಾಗಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ. ಒಟ್ಟು … Continued

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ…!

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಐದನೇ ಅಭ್ಯರ್ಥಿಗೆ ಬಿಜೆಪಿ ಶಾಸಕ ಎಸ್‌. ಟಿ. ಸೋಮಶೇಖರ ಕಾಂಗ್ರೆಸ್‌ ಅಡ್ಡ ಮತದಾನ ಮಾಡುವ ಮೂಲಕ ಶಾಕ್‌ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ ಎಂಬುದನ್ನು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ. ಮತದಾನ ಮಾಡಿದ ನಂತರ ಮಾಧ್ಯಮಗಳ … Continued

ಲೋಕಸಭೆ ಚುನಾವಣೆ ಸ್ಪರ್ಧಾ ಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ..? ಮಗಳಿಗಾಗಿ ರಾಯ್ಬರೇಲಿ ಕ್ಷೇತ್ರ ಬಿಟ್ಕೊಟ್ಟು ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ..?!

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ, ಅವರು ರಾಯ್‌ಬರೇಲಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ಸಾಧ್ಯತೆಯಿರುವ ಇತರ ನಾಯಕರಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು … Continued

15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ

ನವದೆಹಲಿ: ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯನ್ನು ಘೋಷಿಸಿದ್ದು, ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದ್ದು, ಫೆಬ್ರವರಿ 27 ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅಧಿಕೃತ ಟಿಪ್ಪಣಿಯ ಪ್ರಕಾರ, 15 ರಾಜ್ಯಗಳಿಂದ ಚುನಾಯಿತರಾದ 56 … Continued

ರಾಜ್ಯಸಭೆ ಚುನಾವಣೆ: ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ಸಿನನ ಜೈರಾಂ ರಮೇಶ್ ನಿಶ್ಚಿತ-ಅಧಿಕೃತ ಘೋಷಣೆ ಬಾಕಿ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜೈರಾಂ ರಮೇಶ್ ಅವರಿಗೆ ಮೊದಲ ಸುತ್ತಿನ ಪ್ರಾಶಸ್ತ್ಯ ಮತಗಳಲ್ಲಿ ಗೆಲುವು ನಿಶ್ಚಿತ ಎಂದು ಹೇಳಲಾಗಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಸುತ್ತಿನ 46 … Continued

ರಾಜ್ಯಸಭೆ ಚುನಾವಣೆ: ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ..!

ಬೆಂಗಳೂರು: ರಾಜ್ಯಸಭೆ ಚುನಾವಣೆ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ ಶಾಸಕರುಗಳಿಗೆ ಸುದೀರ್ಘ ಪತ್ರ ಬರೆದಿದ್ದಾರೆ..! ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್‍ಗೆ ಬೆಂಬಲ ನೀಡುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ದೇಶ ಅತ್ಯಂತ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವುದು ನಮ್ಮೆಲ್ಲರ ಅರಿವಿನಲ್ಲಿದೆ. ಸಾಮಾಜಿಕ ನ್ಯಾಯ, ಸಮಾನತೆ, ಭಾತೃತ್ವ, ಜಾತ್ಯತೀತತೆ ಮೊದಲಾದ ಸಂವಿಧಾನದ ಆಶಯಗಳ ಮೇಲೆ ಪ್ರಭುತ್ವವೇ … Continued