ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮೂವರು ಟಿಎಂಸಿ ಮಾಜಿ ಸಂಸದರಿಗೆ ರಾಜ್ಯಸಭೆ ಟಿಕೆಟ್ ನೀಡಿದ ಬಿಜೆಪಿ

ನವದೆಹಲಿ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ಗುರುವಾರ ಸಂಜೆ (ಜುಲೈ 9) ಬಿಜೆಪಿ ಸೇರ್ಪಡೆಯಾದ ಬೆನ್ನಿಗೇ ರಾಜ್ಯಸಭೆ ಮೂವರು ಮಾಜಿ ಸದಸ್ಯರಾದ ಸುಖೇಂದು ಶೇಖರ ರಾಯ್, ಸುಷ್ಮಿತಾ ದೇವ್ ಹಾಗೂ ಪ್ರಕಾಶ ಚಿಕ್ ಬರಾಯಿಕ್ ಅವರಿಗೆ ಜುಲೈ 24ರಂದು ನಡೆಯಲಿರುವ ರಾಜ್ಯಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ಪಕ್ಷಾಂತರಕ್ಕೂ ಮುನ್ನವೇ ಈ ಮೂವರು … Continued

ಜಾರ್ಖಂಡದಲ್ಲಿ ಲೆಕ್ಕಾಚಾರ ಉಲ್ಟಾ ; ಕಾಂಗ್ರೆಸ್‌ಗೆ ಭಾರಿ ಮುಖಭಂಗ : ಎನ್‌ಡಿಎ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಗೆಲುವು

ರಾಂಚಿ: ಜಾರ್ಖಂಡ್‌ ವಿಧಾನಸಭೆಯಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಅಭ್ಯರ್ಥಿ ಬೈದ್ಯನಾಥ ರಾಮ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ ನತ್ವಾನಿ ಜಯಗಳಿಸಿದ್ದಾರೆ. ಈ ಫಲಿತಾಂಶವು ಇಂಡಿಯಾ ಮೈತ್ರಿಕೂಟದ ಒಳಗಿನ ಬಿರುಕುಗಳನ್ನು  ಬಹಿರಂಗಪಡಿಸಿತು. ಮಿಜೋರಾಂನಲ್ಲಿ ಝಡ್‌ಪಿಎಂ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. … Continued

ಮೀನಾಕ್ಷಿ ನಟರಾಜನ್ ನಾಮಪತ್ರ ವಿವಾದ ನಡುವೆಯೇ ಬಿಜೆಪಿಯ ಮೂರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.  ಬಿಜೆಪಿಯ ರಜನೀಶ್ ಅಗರ್ವಾಲ್, ತರುಣ ಚುಗ್ ಮತ್ತು ಮಹೇಶ ಕೇವತ್ ಅವರ ಅವಿರೋಧ ಆಯ್ಕೆಯನ್ನು ದೃಢೀಕರಿಸಿ ಚುನಾವಣಾ ಆಯೋಗವು (EC) ಪ್ರಮಾಣಪತ್ರಗಳನ್ನು ವಿತರಿಸಿದೆ. ಕಾಂಗ್ರೆಸ್ ಪಕ್ಷವು ಈ ಚುನಾವಣಾ ಫಲಿತಾಂಶವನ್ನು ತಡೆಯಲು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ತೀವ್ರ ಪ್ರಯತ್ನಗಳನ್ನು ನಡೆಸಿತಾದರೂ ಅಂತಿಮವಾಗಿ … Continued

ಮಮತಾಗೆ ಮತ್ತೊಂದು ಆಘಾತ : ಟಿಎಂಸಿಗೆ ಮತ್ತೊಬ್ಬ ರಾಜ್ಯಸಭಾ ಸದಸ್ಯ ರಾಜೀನಾಮೆ…!

ನವದೆಹಲಿ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಗುರುವಾರ ರಾಜ್ಯಸಭಾ ಸದಸ್ಯ ಪ್ರಕಾಶ ಬಾರೈಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮಮತಾ ಬ್ಯಾನರ್ಜಿಗೆ ಮತ್ತೊಂದು ಭಾರಿ ಆಘಾತ ನೀಡಿದ್ದಾರೆ. ಇವರು ಒಂದು ವಾರದೊಳಗೆ ಟಿಎಂಸಿ ತೊರೆದ ಮೂರನೇ ರಾಜ್ಯಸಭಾ ಸಂಸದರಾಗಿದ್ದಾರೆ. ಇದಕ್ಕೂ ಮುನ್ನ … Continued

“ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ” : ಕಾಂಗ್ರೆಸ್‌ ಹೈಕಮಾಂಡ್‌ನ ʼರಾಜ್ಯಸಭಾʼ ಆಫರ್ ತಿರಸ್ಕರಿಸಿದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ರಾಜಕಾರಣದ ಪ್ರಭಾವಿ ನಾಯಕ ಸಿದ್ದರಾಮಯ್ಯಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ನೀಡಿದ್ದ ಆಫರ್‌ ಅನ್ನು ನಿರಾಕರಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮುಖ್ಯಮಂತ್ರಿಯಾಗಲು ದಾರಿ ಮಾಡಿಕೊಟ್ಟ ಗಂಟೆಗಳ ಒಳಗಾಗಿ, ತಾವು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವುದಿಲ್ಲ ಮತ್ತು ರಾಜ್ಯ ರಾಜಕಾರಣದಲ್ಲೇ ಸಕ್ರಿಯವಾಗಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ … Continued

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ ರಾಜೀನಾಮೆ ಸಾಧ್ಯತೆ : ಪುತ್ರನ ರಾಜಕೀಯ ಪ್ರವೇಶಕ್ಕೆ ತಯಾರಿ, ನಿಶಾಂತಗೆ ಉಪಮುಖ್ಯಮಂತ್ರಿ ಪಟ್ಟ ?

ನವದೆಹಲಿ: ಕಳೆದ ವರ್ಷ ಹತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಿತೀಶಕುಮಾರ್ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ ಎಂದು ವರದಿಯಾಗಿದೆ. ನಿತೀಶ ಅವರು ತಮ್ಮ ಮಗ ನಿಶಾಂತ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ನಡೆಯ ಭಾಗ ಇದು ಎಂದು ಹೇಳಲಾಗುತ್ತಿದೆ. ನಿತೀಶ ಅವರು ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಗೆ ಹಸ್ತಾಂತರಿಸಿ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ವರದಿಯಾಗಿದೆ. ನಿಶಾಂತ ಅವರ … Continued

ರಾಜ್ಯಸಭಾ ಚುನಾವಣೆ: ಬಿಜೆಪಿ ಅಧ್ಯಕ್ಷ ನಿತಿನ್ ನವೀನ ಸೇರಿ 9 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮಾರ್ಚ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ 9 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಬಿಹಾರದಿಂದ ಕಣಕ್ಕಿಳಿಯಲಿದ್ದಾರೆ. ರಾಜ್ಯವಾರು ಅಭ್ಯರ್ಥಿಗಳ ವಿವರ ಹೀಗಿದೆ: ಬಿಹಾರ : ನಿತಿನ್ ನವೀನ (ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ) ಮತ್ತು ಶಿವೇಶಕುಮಾರ ಅಸ್ಸಾಂ : ತೇರಾಶ್ ಗೋವಾಲಾ … Continued

2022ರ ನಂತರ ಮೊದಲ ಬಾರಿಗೆ 100 ದಾಟಿದ ಬಿಜೆಪಿ ರಾಜ್ಯಸಭಾ ಸದಸ್ಯರ ಸಂಖ್ಯೆ

ನವದೆಹಲಿ: ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಗೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ, ಏಪ್ರಿಲ್ 2022ರ ನಂತರ ಮೊದಲ ಬಾರಿಗೆ ಪಕ್ಷವು ರಾಜ್ಯಸಭೆಯಲ್ಲಿ 100 ರ ಗಡಿ ದಾಟಿದೆ. ಮೂವರು ನಾಮನಿರ್ದೇಶಿತ ಸದಸ್ಯರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಳೆದ ತಿಂಗಳು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಖ್ಯಾತ ವಕೀಲ ಉಜ್ವಲ … Continued

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಖ್ಯೆಗಳ ಲೆಕ್ಕಾಚಾರ ಎನ್‌ಡಿಎಗೆ ಹೇಗೆ ಅನುಕೂಲಕರ..?

ನವದೆಹಲಿ: ಸೋಮವಾರ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಅನಿವಾರ್ಯವಾದ ಮುಂದಿನ ಉಪರಾಷ್ಟ್ರಪತಿಗಳ ಹುದ್ದೆಗೆ ನಡೆವ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ಸಂಖ್ಯಾಬಲವನ್ನು ಹೊಂದಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ. ಅಲ್ಲಿ ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ತಮ್ಮ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. 543 ಸದಸ್ಯರ ಲೋಕಸಭೆಯಲ್ಲಿ ಒಂದು … Continued

ವಕ್ಫ್‌ ತಿದ್ದುಪಡಿ ಮಸೂದೆ-2025ರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್, ಅಸಾದುದ್ದೀನ್ ಓವೈಸಿ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯ ಅಂಗೀಕಾರದ ವಿರುದ್ಧ ವಿಪಕ್ಷಗಳ ಇಬ್ಬರು ಸಂಸದರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಸ್ತಾವಿತ ಕಾನೂನು “ಮುಸ್ಲಿಮರ ಬಗ್ಗೆ ತಾರತಮ್ಯ”ದ ಕಾನೂನು ಎಂದು ಕರೆದಿದ್ದಾರೆ. ವಿವಾದಾತ್ಮಕ ಮಸೂದೆಯ ಅಂಗೀಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದರು, ನಿಬಂಧನೆಗಳು “ಮುಸ್ಲಿಮರ ಮೂಲಭೂತ … Continued