ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ : ಅಯೋಧ್ಯೆಯ ರಾಮಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆ ಹಣದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಸಮ್ಮತ ಹಾಗೂ ನಿಗದಿತ ಅವಧಿಯೊಳಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸೋಮವಾರ (ಜುಲೈ 13) ನೋಟಿಸ್ ಜಾರಿಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ … Continued

ರಾಮ ಮಂದಿರ ಟ್ರಸ್ಟ್‌ನಿಂದ ಚಂಪತ್ ರಾಯ್‌ ರಾಜೀನಾಮೆ ಅಂಗೀಕಾರ; ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ ನೇಮಕ

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ರಾಮ ಮಂದಿರದ ದೇಣಿಗೆ ದುರುಪಯೋಗ ಆರೋಪಗಳ ನಡುವೆ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌ ಹಾಗೂ ಟ್ರಸ್ಟಿ ಡಾ. ಅನಿಲ ಮಿಶ್ರಾ ಅವರ ರಾಜೀನಾಮೆಯನ್ನು ಟ್ರಸ್ಟ್ ಅಂಗೀಕರಿಸಿದೆ ಎಂದು ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದದೇವ ಗಿರಿ ಮಹಾರಾಜ ಸೋಮವಾರ ತಿಳಿಸಿದ್ದಾರೆ. ಚಂಪತ್ … Continued

ರಾಮ ಮಂದಿರ ಕಾಣಿಕೆ ಕಳವು ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆರ್‌ಎಸ್‌ಎಸ್ ಒತ್ತಾಯ, ಎಸ್‌ಐಟಿ ತನಿಖೆಗೆ ಬೆಂಬಲ

ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮಲಲ್ಲಾ ಮಂದಿರದ ಕಾಣಿಕೆ ಹುಂಡಿಗಳಿಂದ ಹಣ ಕಳವು ನಡೆದಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಯಾರೆಂದು ತನಿಖೆಯಲ್ಲಿ ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಗ್ರಹಿಸಿದೆ. ಇದೇ ವೇಳೆ, ಈ ವಿವಾದವನ್ನು “ಹಿಂದೂ ವಿರೋಧಿ ಹಾಗೂ ರಾಷ್ಟ್ರವಿರೋಧಿ ಶಕ್ತಿಗಳು” ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿವೆ … Continued

ಸಿಸಿಟಿವಿ ಮುಚ್ಚುತ್ತಿದ್ದರು….ಶೌಚಾಲಯದಲ್ಲಿ ಹಣ ಅಡಗಿಸಿಡುತ್ತಿದ್ದರು…..: ರಾಮಮಂದಿರ ದೇಣಿಗೆ ಕಳ್ಳತನದ ಬೆಚ್ಚಿಬೀಳಿಸುವ ಕಥೆ

ಅಯೋಧ್ಯೆ: ರಾಮಮಂದಿರದ ಹುಂಡಿಗಳಲ್ಲಿ ಭಕ್ತರು ಸಮರ್ಪಿಸಿದ್ದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ಎಣಿಕೆ ಮಾಡುವ ಸಿಬ್ಬಂದಿಯೇ ವ್ಯವಸ್ಥಿತವಾಗಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ಹೊಸ ಸಂಗತಿಗಳು ಬೆಳಕಿಗೆ ಬಂದಿವೆ. ಸಿಸಿಟಿವಿ ಕ್ಯಾಮೆರಾವನ್ನು ಉದ್ದೇಶಪೂರ್ವಕವಾಗಿ ಮುಚ್ಚಿ, ಮತ್ತೊಬ್ಬ ಸಿಬ್ಬಂದಿ ನಗದು ಹಣವನ್ನು ಬಟ್ಟೆಯೊಳಗೆ ಅಡಗಿಸಿಕೊಳ್ಳುತ್ತಿದ್ದ ವಿಧಾನ ಸೇರಿದಂತೆ ಹಣ ದೋಚಲು ಅನುಸರಿಸಿದ್ದ ಹಲವು ತಂತ್ರಗಳು ವಿಶೇಷ … Continued

ಅಯೋಧ್ಯೆ ರಾಮ ಮಂದಿರ ಕಾಣಿಕೆ ಹಣ ಕಳುವು ಪ್ರಕರಣ : 8 ಆರೋಪಿಗಳ ಬಂಧನ

ಅಯೋಧ್ಯಾ : ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ಅರ್ಪಿಸಿದ ಕಾಣಿಕೆ ಹಣವನ್ನು ಕಳುವು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ, ಈ ಪ್ರಕರಣದಲ್ಲಿ ಎಂಟು ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ಇವರಲ್ಲಿ ಆರು ಮಂದಿ ದೇವಸ್ಥಾನದ ನಗದು ಎಣಿಕೆ ವಿಭಾಗದ ಉದ್ಯೋಗಿಗಳಾಗಿದ್ದಾರೆ. ಆರೋಪಿಗಳು … Continued

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ : ಸಿಎಂ ಯೋಗಿ ಆದಿತ್ಯನಾಥಗೆ ತನಿಖಾ ವರದಿ ಹಸ್ತಾಂತರಿಸಿದ ಎಸ್‌ಐಟಿ

 ಲಕ್ನೋ/ಅಯೋಧ್ಯೆ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆ ಹರಿದುಬರುತ್ತಿರುವ ಬೆನ್ನಲ್ಲೇ, ಕಾಣಿಕೆ ಹಣ ಮತ್ತು ಆಭರಣಗಳ ನಿರ್ವಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT)ವು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು … Continued

ವೀಡಿಯೊ | ರಾಮನವಮಿಯಂದು ಅಯೋಧ್ಯೆ ರಾಮಂದಿರದಲ್ಲಿ ರಾಮಲಲ್ಲಾನ ಹಣೆಗೆ ಸ್ಪರ್ಷಿಸಿದ ʼಸೂರ್ಯ ತಿಲಕʼ : ವೀಕ್ಷಿಸಿ

ಅಯೋಧ್ಯಾ : ಇಂದು ರಾಮನವಮಿಯ ಶುಭ ಸಂದರ್ಭದಲ್ಲಿ, ಉತ್ತರ ಪ್ರದೇಶದ ಪವಿತ್ರ ನಗರವಾದ ಅಯೋಧ್ಯೆ ರಾಮಮಂದಿರವು ರಾಮ ಲಲ್ಲಾ ವಿಗ್ರಹದ ಹಣೆಯ ಮೇಲೆ ಸೂರ್ಯನ ಕಿರಣವು ನೇರವಾಗಿ ಬೀಳುವ ‘ಸೂರ್ಯ ತಿಲಕ’ ಎಂದು ಕರೆಯಲ್ಪಡುವ ವಿದ್ಯಮಾನದ ಒಂದು ದೈವಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಇದು ಸಾಂಕೇತಿಕವಾಗಿ ಭಗವಾನ್ ರಾಮನ ಜನ್ಮವನ್ನು ಆಚರಿಸಿತು. ಅಯೋಧ್ಯೆಯ ರಾಮಮಂದಿರದಲ್ಲಿ ಪುರೋಹಿತರು ರಾಮಲಲ್ಲಾನಿಗೆ … Continued

5 ವರ್ಷಗಳಲ್ಲಿ 400 ಕೋಟಿ ರೂ ತೆರಿಗೆ ಪಾವತಿ ; ದೇವಸ್ಥಾನ ಟ್ರಸ್ಟ್

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಳೆದ ಐದು ವರ್ಷಗಳಲ್ಲಿ ಸುಮಾರು 400 ಕೋಟಿ ರೂಪಾಯಿ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ, ಧಾರ್ಮಿಕ ಪ್ರವಾಸೋದ್ಯಮದಲ್ಲಿ ಏರಿಕೆಯಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್‌ ಭಾನುವಾರ ತಿಳಿಸಿದ್ದಾರೆ. ಈ ಮೊತ್ತವನ್ನು ಫೆಬ್ರವರಿ 5, 2020 ಮತ್ತು ಫೆಬ್ರವರಿ 5, 2025 ರ ನಡುವೆ ಪಾವತಿಸಲಾಗಿದೆ ಎಂದು ಟ್ರಸ್ಟ್ … Continued

ಅಯೋಧ್ಯೆ : ಮಳೆಗೆ ಗುಂಡಿ ಬಿದ್ದ ರಾಮಪಥ ; 6 ಅಧಿಕಾರಿಗಳು ಅಮಾನತು

ಅಯೋಧ್ಯೆ: ಹೊಸದಾಗಿ ನಿರ್ಮಿಸಲಾದ ರಾಮಪಥದಲ್ಲಿ ಮೊದಲನೇ ಮಳೆಗೆ ಗುಂಡಿ ಬಿದ್ದ ಹಾಗೂ ಅಯೋಧ್ಯೆ ಜಲಾವೃತಗೊಂಡ ಪ್ರಕರಣಕ್ಕೆ ಸಂಬಂಧ ಪಾಲಿಕೆಯ ಆರು ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ಜೂನ್ 23 ಹಾಗೂ 26ರಂದು ಸುರಿದ ಮಳೆಗೆ ರಾಮಪಥವು ಜಲಾವೃತಗೊಂಡಿತ್ತು. ಹಾಗೂ ನೀರು ಅಕ್ಕಪಕ್ಕದ ಮನೆಗಳಿಗೂ ನುಗ್ಗಿತ್ತು. ರಾಮ ಮಂದಿರಕ್ಕೆ ಸಂ‍ಪರ್ಕ ಕಲ್ಪಿಸುವ 14 ಕಿಮೀ ಉದ್ದದ … Continued

ವೀಡಿಯೊ…| ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿ ರಾಮಲಲ್ಲಾ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಅಯೋಧ್ಯೆ: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿ ಭಗವಾನ್‌ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಅವರು ದೇವಾಲಯವನ್ನು ‘ಶಾಂತಿಯ ಸ್ಥಳ’ ಎಂದು ಕರೆದರು. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕೇರಳ ರಾಜಭವನವು ರಾಜ್ಯಪಾಲರು ರಾಮ ಮಂದಿರಕ್ಕೆ ಭೇಟಿ ನೀಡಿದ್ದರು ಎಂದು ಹೇಳಿದೆ. ರಾಮಲಲ್ಲಾ ವಿಗ್ರಹದ … Continued