ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ರಣದೀಪ ಸುರ್ಜೇವಾಲಾ

ಬೆಂಗಳೂರು : ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಕ್ಕಟ್ಟು ಶಮನಗೊಂಡಿದೆ. ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ಸಿನ ಕರ್ನಾಟಕ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಪ್ರಕಟಿಸಿದ್ದಾರೆ. ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ನಡೆಸಿದ ಉನ್ನತ ಮಟ್ಟದ ಸುದೀರ್ಘ ಚರ್ಚೆಗಳ ನಂತರ ಈ ಮಹತ್ವದ ಬೆಳವಣಿಗೆ … Continued

ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮನವೊಲಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಹೈಕಮಾಂಡ್ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು, ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರುವುದಾಗಿ ಅವರು ಹೇಳಿದ್ದಾರೆ. ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾರೆಡ್ಡಿ ಅವರು ತಾವು … Continued

ಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !

ಬೆಂಗಳೂರು: ಬೆಂಗಳೂರು: ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತಾದ ಅಸಮಾಧಾನ ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಪ್ರಮುಖ ಖಾತೆ ಸಿಗದ ಕಾರಣಕ್ಕೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಘಾತ ಮೂಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ತಮಗೆ ನೀಡಿರುವ ಇಲಾಖೆಯ … Continued

ಶಿವಕುಮಾರ ಸರ್ಕಾರಕ್ಕೆ ಆರಂಭದಲ್ಲೇ ಶಾಕ್ : ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ ಹಂಚಿಕೆಯಾಗಿರುವ ಖಾತೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ. ಖಾತೆ ಹಂಚಿಕೆಯಾದ ಮರುದಿನ ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮಲಿಂಗಾರೆಡ್ಡಿ, “ನಾನು ಯಾರ ಮೇಲೂ … Continued

ಆಗಸ್ಟ್‌ 15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಯಿಂದ ಮುಕ್ತಗೊಳಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ದೇವಸ್ಥಾನಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸೋಮವಾರ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ (ಮುಜರಾಯಿ) … Continued

ಸಚಿವ ರಾಮಲಿಂಗಾ ರೆಡ್ಡಿ ಸಂಧಾನ ಯಶಸ್ವಿ; ಲಾರಿ ಮುಷ್ಕರ ವಾಪಸ್‌

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್‌ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ. ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಲಾರಿ ಮಾಲೀಕರ ಬೇಡಿಕೆ ಈಡೇರಿಸಲು ಮುಂದಾಗುವುದಾಗಿ … Continued

ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ರೋಡ್-ಕಮ್-ರೈಲು ಮಾರ್ಗದ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ಲೋಕಾರ್ಪಣೆ

ಬೆಂಗಳೂರು : ಬೆಂಗಳೂರಿನ ರಾಗಿಗುಡ್ಡದಲ್ಲಿ ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆಯನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಲೋಕಾರ್ಪಣೆ ಮಾಡಿದರು. 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ನ್ನು ನಿರ್ಮಾಣ ಮಾಡಲಾಗಿದ್ದು, ಇದು ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್‌ವರೆಗೆ ನಿರ್ಮಾಣವಾಗಿದೆ. ಡಬ್ಬಲ್ ಡೆಕ್ಕರ್‌ ಮೊದಲ ಫ್ಲೈ ಓವರ್‌ ಎರಡೂ ಬದಿಗಳಲ್ಲಿ ಎರಡು … Continued

ವಾಹನಗಳಿಗೆ ಎಚ್​​​ ಎಸ್​ ಆರ್​ ಪಿ ನಂಬರ್​ ಪ್ಲೇಟ್​​ ಅವಳಡಿಸುವ ಗಡುವು ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (High Security Registration Number Plate- HSRP)    ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಸಮೀಪ ಬಂದ ನಂತರ … Continued

ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು : ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಸಾರಿಗೆ … Continued

ಬಸ್‌ನಲ್ಲಿ ಪ್ರಯಾಣಿಸುವರು ಮಾಸ್ಕ್‌ ಧರಿಸಬೇಕು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್‌ 1 ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾಮಾನ್ಯವಾಗಿ ಹೆಚ್ಚು ಜನ ಸೇರುವಲ್ಲಿ ವೈರಾಣುಗಳು ಬಹುಬೇಗ ಹರಡುತ್ತವೆ. ಹೀಗಾಗಿ ಬಸ್‌ಗಳಲ್ಲಿ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಬಸ್‌ ಪ್ರಯಾಣಿಕರೆಲ್ಲರೂ ಮಾಸ್ಕ್‌ ಧರಿಸಿ ಸಂಚಾರ ಮಾಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. … Continued