ಸಿಎಂ ಸಿದ್ದರಾಮಯ್ಯಗೆ ದಂಡ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರಿಂ ಕೋರ್ಟ್‌

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ್ಯಯ ಮತ್ತು ಇತರ ನಾಯಕರಿಗೆ ತಲಾ ₹10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಹಾಗೂ ಮಾರ್ಚ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಕರ್ನಾಟಕ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಎಂ.ಬಿ.ಪಾಟೀಲ, ಹಾಗೂ ಮತ್ತು ಕರ್ನಾಟಕ ಕಾಂಗ್ರೆಸ್‌ … Continued

ಹಿರೇಮಗಳೂರು ಕಣ್ಣನ್‌ಗೆ ನೋಟಿಸ್: ಹಿಂಪಡೆಯಲು ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು : ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್‌ ಹಿಂಪಡೆಯಲು ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಾಗೂ ಸಾಹಿತಿ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಮಾಡಬೇಕು ಎಂದು ರಾಜ್ಯ ಸರ್ಕಾರ ಅವರಿಗೆ ನೋಟಿಸ್ ನೀಡಿತ್ತು. ನೋಟೀಸ್‌ ನೀಡಿದ್ದರ … Continued

ಸಾರಿಗೆ ಸಂಸ್ಥೆಗೆ 13 ಸಾವಿರ ಸಿಬ್ಬಂದಿ ನೇಮಕ, 4 ಸಾವಿರ ಬಸ್‌ಗಳ ಖರೀದಿ : ಸಚಿವ ರಾಮಲಿಂಗಾರೆಡ್ಡಿ

ಮೈಸೂರು: ಕೆಎಸ್‌ಆರ್‌ಟಿಸಿ ಹಾಗೂ ಇತರೆ ನಿಗಮಗಳಿಗೆ 13 ಸಾವಿರ ಸಿಬ್ಬಂದಿ ನೇಮಕ ಮಾಡಲಾಗುವುದು ಹಾಗೂ 4 ಸಾವಿರ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕೆಎಸ್‌ಆರ್‌ಟಿಸಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶನಿವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಎಲ್ಲಾ … Continued

ಎನ್‌ಡಬ್ಲ್ಯು ಕೆಆರ್‌ಟಿಸಿಯಲ್ಲಿ ಟಿಕೆಟಿಗೆ ಹಣ ಪಾವತಿಸಲು ಯುಪಿಐ ವ್ಯವಸ್ಥೆ…!

ಹುಬ್ಬಳ್ಳಿ : ಸಾರಿಗೆ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಸಾರಿಗೆ ಇಲಾಖೆಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಇನ್ನುಮುಂದೆ ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು UPI ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆಯನ್ನು ಪ್ರಾರಂಭ ಮಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು , ವಾಯುವ್ಯ ಕರ್ನಾಟಕ ರಸ್ತೆ … Continued

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಶೀಘ್ರವೇ 13 ಸಾವಿರ ಸಾರಿಗೆ ಸಿಬ್ಬಂದಿ ನೇಮಕ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿಸುದ್ದಿ ನೀಡಿದ್ದಾರೆ. ಶೀಘ್ರವೇ 13 ಸಾವಿರ ಸಾರಿಗೆ ಸಿಬ್ಬಂದಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿ ಮುಂಭಾಗ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ನಿಗಮದಲ್ಲಿ ಸುಮಾರು 8 ವರ್ಷಗಳಿಂದ ನೇಮಕಾತಿಯೇ ಮಾಡಿಲ್ಲ. 2016 ರಲ್ಲಿ ಸಿಬ್ಬಂದಿ … Continued

ಕಾಂಗ್ರೆಸ್‌ನಲ್ಲಿ ಮೂವರು ಸಿಎಂ ರೇಸ್‌ನಲ್ಲಿದ್ದಾರೆ: ರಾಮಲಿಂಗಾರೆಡ್ಡಿ

ಬಾಗಲಕೋಟೆ: ಮೂವರು ಕಾಂಗ್ರೆಸ್‌ ಮುಖಂಡರು ಸಿಎಂ ಹುದ್ದೆಯ ರೇಸ್‌ನಲ್ಲಿದ್ದು, ಪಕ್ಷ ಅಧಿಕಾರಕ್ಕೆ ಬಂದ ನಂತರ ಎಲ್ಲ ಸೇರಿ ತೀರ್ಮಾನ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದರು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರಕ್ಕೆ ಬಂದ ಮೇಲೆ ನಾವೆಲ್ಲಾ ತೀರ್ಮಾನಿಸುತ್ತೇವೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ … Continued