ವೀಡಿಯೊ…| ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ : ಒಂದರ ಮೇಲೆ ಏರಿ ನಿಂತ ಮತ್ತೊಂದು ಕಾರು…!

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಸಿನಿಮೀಯ ರೀತಿಯಲ್ಲಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ನಡೆದಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕ ಬ್ಯಾರಿಕೇಡ್ ಗಮನಿಸಲಿಲ್ಲ. ಕೊನೆ ಕ್ಷಣದಲ್ಲಿ ಒಮ್ಮೆಲೇ ಬ್ರೇಕ್ … Continued

ಬೆಳಗಾವಿ | ಮಕ್ಕಳ ಮಾರಾಟ ಜಾಲ ಪತ್ತೆ ; 4.50 ಲಕ್ಷ ರೂ.ಗಳಿಗೆ ಮಾರಾಟವಾಗಿದ್ದ ಮಗುವಿನ ರಕ್ಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಸುಮಾರು ಒಂದು ವರ್ಷ 10 ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ದಂಪತಿ ಗೋವಾ ಮೂಲದ ವ್ಯಕ್ತಿಗೆ ಮಗುವನ್ನು ಸುಮಾರು 4.50 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು ಎಂದು  ಹೇಳಲಾಗಿದ್ದು, ಬೆಳಗಾವಿಯ ಮಕ್ಕಳ ರಕ್ಷಣಾ ಸಹಾಯವಾಣಿಗೆ ಬಂದ ಕರೆ ಬಂದ ನಂತರ ಪ್ರಕರಣ ಬೆಳಕಿಗೆ … Continued

ಬೆಚ್ಚಿ ಬೀಳಿಸಿದ ಘಟನೆ | ಆಸ್ಪತ್ರೆಯ ಟಾಯ್ಲೆಟ್‌ ಕಮೋಡದಲ್ಲಿ ನವಜಾತ ಶಿಶು ಹಾಕಿ ಫ್ಲಶ್‌ ಮಾಡಿದರು…!

ರಾಮನಗರ: ಆಘಾತಕಾರಿ ಘಟನೆಯೊಂದರಲ್ಲಿ ರಾಜ್ಯದ ರಾಮನಗರ ಜಿಲ್ಲೆಯ ಹಾರೋಹಳ್ಳಿ (Harohalli) ಸಮೀಪದ ಆಸ್ಪತ್ರೆಯೊಂದರ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಬಗ್ಗೆ ವರದಿಯಾಗಿದೆ. ನವಜಾತ ಶಿಶುವನ್ನು ಆಸ್ಪತ್ರೆಯ ಟಾಯ್ಲೆಟ್‌ನಲ್ಲಿ ಹಾಕಿ ಫ್ಲಶ್ ಮಾಡಲಾಗಿದೆ ಎಂದು ಹೇಳಲಾಗಿದೆ. ಸ್ವಚ್ಛತೆ ಸಂಬಂಧ ಆಸ್ಪತ್ರೆಯಲ್ಲಿ ಟಾಯ್ಲೆಟ್ ಪರಿಶೀಲನೆ ಮಾಡುವ ವೇಳೆ ಈ ನವಜಾತ ಶಿಶುವಿನ ದೇಹ ಪತ್ತೆಯಾಗಿದೆ. ಆಸ್ಪತ್ರೆಯ … Continued

ಮಾಗಡಿ | ಮರಕ್ಕೆ ಡಿಕ್ಕಿ ಹೊಡೆದ ಕಾರು ; ಒಂದೇ ಕುಟುಂಬದ ಐವರು ಸಾವು

ರಾಮನಗರ:  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಸಾವಿಗೀಡಾದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಮಂಗಳವಾರ (ಸೆ.17) ನಡೆದಿದೆ ಎಂದು ವರದಿಯಾಗಿದೆ. ಮಾಗಡಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಮಾಗಡಿ … Continued

ರಾಮನಗರಕ್ಕೆ ʼಬೆಂಗಳೂರು ದಕ್ಷಿಣ ಜಿಲ್ಲೆʼ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಮನಗರ ಜಿಲ್ಲೆಯನ್ನು ʼಬೆಂಗಳೂರು ದಕ್ಷಿಣ ಜಿಲ್ಲೆʼ ಯನ್ನಾಗಿ ಮರುನಾಮಕರಣ ಮಾಡುವ ಕುರಿತ ಮಹತ್ವದ ನಿರ್ಧಾರವನ್ನು ಇಂದು, ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್ ಅವರು, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಬದಲಾಯಿಸಲು … Continued

ಗೀಸರ್‌ ಗ್ಯಾಸ್‌ ಸೋರಿಕೆ ; ತಾಯಿ-ಮಗ ಸಾವು

ರಾಮನಗರ : ಬಿಸಿ ನೀರು ಕಾಯಿಸುವ ಅನಿಲ ಗೀಸರ್‌ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ತಾಯಿ ಮತ್ತು ಮಗ ಮೃತಪಟ್ಟ ಘಟನೆ ಜಿಲ್ಲೆಯ ಮಾಗಡಿ ಪಟ್ಟಣದ ಜ್ಯೋತಿನಗರದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶೋಭಾ(40) ಹಾಗೂ ಅವರ ಪುತ್ರ ದಿಲೀಪ (17) ಎಂದು ಗುರುತಿಸಲಾಗಿದೆ. ರಾತ್ರಿ ಏಳು ಗಂಟೆ ಸುಮಾರಿಗೆ ದಿಲೀಪ ಸ್ನಾನದ … Continued

ಜೊಯಿಡಾ : ರಾಮನಗರ ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾರವಾರ: ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾಸ್ಕರ್ ಬೋಂಡೆಲ್ಕರ (36) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯದ ಅಮಲಿನಲ್ಲಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಆದರೆ … Continued

ರಾಮನಗರ : ತೋಟದ ಮನೆಯಲ್ಲಿ ಮಾನವನ ಬುರುಡೆಗಳು ಪತ್ತೆ…!

ರಾಮನಗರ: ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 20ಕ್ಕೂ ಹೆಚ್ಚು ಮನುಷ್ಯರ ತಲೆ ಬುರುಡೆಗಳು ಸೋಮವಾರ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮನುಷ್ಯನ ತಲೆ ಬುರುಡೆಗಳನ್ನು ಸಂಗ್ರಹಿಸಿರುವ ಆರೋಪದ ಮೇಲೆ ಬಲರಾಮ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ಈತ ಮಾಟ-ಮಂತ್ರ ಮಾಡುವ ಜೊತೆಗೆ, ರಾತ್ರಿ ಸ್ಮಶಾನದಲ್ಲಿ … Continued

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು : ಶಾಸಕ ಬಾಲಕೃಷ್ಣ

ರಾಮನಗರ : ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಕೊಟ್ಟಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬಹುದು ಎಂದು ಮಾಗಡಿ ಶಾಸಕ ಎಚ್.ಡಿ. ಬಾಲಕೃಷ್ಣ ಹೇಳಿದ್ದಾರೆ. ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರ … Continued

ಅಮಾಯಕ ಸೈನಿಕರ ಬಲಿ ಪಡೆದ ಕೀರ್ತಿ ಮೋದಿಗೆ ಸಲ್ಲುತ್ತದೆ : ಬಾಲಕೃಷ್ಣ ವಾಗ್ದಾಳಿ

ರಾಮನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ ಬಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಗಡಿ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಸೈನಿಕರನ್ನು ಬಲಿ ಪಡೆದ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ವಿವಾದಾತ್ಮಕ ಹೇಳೀಕೆ ನೀಡಿದ್ದಾರೆ. ಬಿಜೆಪಿಯವರು ಬ್ರಿಟಿಷರಿದ್ದಂತೆ. ಜನರ ಮಧ್ಯೆ ಎತ್ತಿಕಟ್ಟುವ … Continued