ವೀಡಿಯೊ…| ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ : ಒಂದರ ಮೇಲೆ ಏರಿ ನಿಂತ ಮತ್ತೊಂದು ಕಾರು…!

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಸಿನಿಮೀಯ ರೀತಿಯಲ್ಲಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ನಡೆದಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕ ಬ್ಯಾರಿಕೇಡ್ ಗಮನಿಸಲಿಲ್ಲ. ಕೊನೆ ಕ್ಷಣದಲ್ಲಿ ಒಮ್ಮೆಲೇ ಬ್ರೇಕ್ … Continued

ರಾಮನಗರ ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಭೂಮಿ ದಾನ ಮಾಡಿ ಸನ್ಯಾಸ ಸ್ವೀಕರಿಸಲು ನಿರ್ಧರಿಸಿದ ರಾಜಸ್ಥಾನ ಗಣಿ ಉದ್ಯಮಿ

ರಾಮನಗರ : ರಾಜಸ್ಥಾನದ 78 ವರ್ಷದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್‌ ಅವರು ಸಾವಿರಾರು ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿ ಹಾಗೂ 3 ಸಾವಿರ ಎಕರೆಯ ಭೂಮಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪಾಲನಹಳ್ಳಿಯ ಶ್ರೀ ಶನೈಶ್ಚರ ಮಠಕ್ಕೆ ದಾನ ಮಾಡಿದ್ದು, ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಓಸ್ವಾಲ್‌ ಜೈನ್‌ ಅವರು … Continued

ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಪ್ರಕರಣದ ನಂತರ ಬಿಜೆಪಿ ಶಾಸಕ ಮುನಿರತ್ನಗೆ ಈಗ ಮತ್ತೊಂದು ಕಂಟಕ ಎದುರಾಗಿದೆ. ಬೆಂಗಳೂರು ಮೂಲದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಶಾಸಕ … Continued

ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಶಿಕ್ಷಕರು…!

ರಾಮನಗರ: ಶಾಲೆಯ ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಶಾಲೆಯ ಮುಂದೆ ಪೋಷಕರು ಗಲಾಟೆ ನಡೆಸಿದ್ದಾರೆ. ಶಾಲೆಗೆ ಬರುವಾಗ ಎರಡು ಜಡೆಗಳನ್ನು ಹಾಕಿಲ್ಲ ಎಂಬ ಕಾರಣಕ್ಕೆ ಶಾಲಾ ಶಿಕ್ಷಕರು ಎಂಟನೇ ತರಗತಿಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಜಡೆಗಳನ್ನು ಕತ್ತರಿಸಿದ್ದಾರೆ … Continued

ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ : ಐಜೂರು ಠಾಣೆಯ ಪಿಎಸ್ಐ ಅಮಾನತು

ಬೆಂಗಳೂರು : ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಐಜೂರು ಠಾಣಾ ಪಿಎಸ್ ಐ ತನ್ವೀರ್ ಹುಸೇನ್ ಅಮಾನತು ಮಾಡುವುದಾಗಿ ಗೃಹ ಸಚಿವ ಡಾ.ಪರಮೇಶ್ವರ ಅವರು ವಿಧಾನಸಭೆಗೆ ತಿಳಿಸಿದ್ದಾರೆ. ವಿಧಾನಸಭಾ ಅಧಿವೇಶನದ ಬುಧವಾರದ ಕಾರ್ಯಕಲಾಪ ಆರಂಭವಾದ ಬಳಿಕ ಐಜೂರು ಪೊಲೀಸ್ ಇನ್ಸ್ ಪೆಕ್ಟರ್ ತನ್ವೀರ್ ಹುಸ್ಸೇನ್ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗೃಹ ಸಚಿವ … Continued

ರಾಮನಗರ: ಗದ್ದೆಗೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ; ಆಸ್ಪತ್ರೆಗೆ ದಾಖಲು

ರಾಮನಗರ: ತಂದೆ ಜೊತೆ ಕಬ್ಬಿನ ಗದ್ದೆಗೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೋರೇಗೌಡನದೊಡ್ಡಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗೌತಮ​(14) ಚಿರತೆ ದಾಳಿಗೊಳದಾಗ ಬಾಲಕ ಎಂದು ಗುರುತಿಸಲಾಗಿದೆ. ತಂದೆಯೊಂದಿಗೆ ಕಬ್ಬಿನ ಗದ್ದೆಗೆ ತೆರಳಿದ್ದ ವೇಳೆ ಬಾಲಕ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಬಾಲಕನ ಚೀರಾಟ ಕೇಳಿ … Continued