ನನ್ನ ಸಿಡಿ ತಯಾರಿಸಿದ ಮಹಾನಾಯಕನ ತಂಡವೇ ಸಂತೋಷ ಪಾಟೀಲ ಪ್ರಕರಣದ ಹಿಂದೆಯೂ ಇದೆ: ಹೊಸ ಬಾಂಬ್‌ ಸಿಡಿಸಿದ ರಮೇಶ ಜಾರಕಿಹೊಳಿ

posted in: ರಾಜ್ಯ | 0

ಬೆಳಗಾವಿ: ನನ್ನ ಸಿ.ಡಿ. ತಯಾರಿಸಿದ ಮಹಾನಾಯಕನ ತಂಡವೇ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಹಿಂದಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ. ಬಡಸ ಗ್ರಾಮದಲ್ಲಿನ ಮೃತ ಸಂತೋಷ ಪಾಟೀಲ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರ ಜೊತೆ ಜೊತೆ ಮಾತನಾಡಿದ ಅವರು, ಮಹಾನಾಯಕ ಮತ್ತು … Continued

ಡಿಕೆಶಿಗೆ ಕಠೋರವಾಗಿಯೇ ಉತ್ತರ ಕೊಡ್ತೇನೆ, ಸಿದ್ದರಾಮಯ್ಯ ವೇಸ್ಟ್ ಬಾಡಿ: ರಮೇಶ್ ಜಾರಕಿಹೊಳಿ

posted in: ರಾಜ್ಯ | 0

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸೋತಿದ್ದರಿಂದ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಸಾಹುಕಾರ್ ಸೋದರರು ಇದ್ದರೂ ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣದ ಚಿತ್ರಣ ಬದಲಾಯಿತು. ಕಾಂಗ್ರೆಸ್‌ ಹಾಗೂ ಪಕ್ಷೇತರ ಲಖನ್‌ ಜಾರಕಿಹೊಳಿ ಗೆದ್ದರು., ಆದರೆ ಗೆಲ್ಲುವ ಕುದುರೆಯಾಗಿದ್ದ ಬಿಜೆಪಿ ಸೋಲನುಭವಿಸಿತು. ಈ ಚರ್ಚೆಗಳ ನಡುವೆ ಪಕ್ಷದ ಸೋಲಿನ … Continued

ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ :ಮುಂಬೈನಲ್ಲಿ ತೀರ್ಮಾನ ಎಂದ ರಮೇಶ್‌ ಜಾರಕಿಹೊಳಿ

posted in: ರಾಜ್ಯ | 0

ಮೈಸೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಂಬೈನಲ್ಲಿ ತೀರ್ಮಾನ ಆಗಲಿದೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೈಸೂರಿಗೆ ಬಂದಿರುವುದು ಸುತ್ತೂರು ಶ್ರೀಗಳನ್ನು ಭೇಟಿ ಮಾಡಲು. ಮುಖ್ಯಮಂತ್ರಿಗಳ ಭೇಟಿ ವಿಚಾರ ನನಗೆ ಗೊತ್ತಿಲ್ಲ. ನಾನು ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ದೈವಾಧೀನರಾದ ಕಾರಣ … Continued

ರಮೇಶ ಜಾರಕಿಹೊಳಿ ಆಸ್ಪತ್ರೆಯಿಂದ ಬಿಡುಗಡೆ, ಮನೆಯಲ್ಲಿಯೇ ಕ್ವಾರಂಟೈನ್‌

posted in: ರಾಜ್ಯ | 0

ಬೆಳಗಾವಿ : ಸಿಡಿ ಪ್ರಕರಣದಿಂದ ಸುದ್ದಿಯಾಗಿರುವ ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಾಜಿ ರಮೇಶ್ ಜಾರಕಿಹೊಳಿ ಏಪ್ರಿಲ್ 4ರಂದು ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಬೆಳಗಾವಿಯ ಗೋಕಾಕ್ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಏಪ್ರಿಲ್ 1ರಂದು ಕೊರೋನಾ ಸೋಂಕು ದೃಢಪಟ್ಟಿತ್ತು … Continued

ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ:ಗೋಕಾಕ ಟಿಎಚ್ಒ‌

posted in: ರಾಜ್ಯ | 0

ಗೋಕಾಕ್ : ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೂ ಏಪ್ರಿಲ್ 1ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಭಾನುವಾರ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂಬುದಾಗಿ ಗೋಕಾಕ್ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಏಪ್ರಿಲ್ … Continued

ಸಿಡಿ ಪ್ರಕರಣ; ಆರೋಪಿ ತಲೆಮರೆಸಿಕೊಳ್ಳಲು ಸರ್ಕಾರವೇ ಸಹಕರಿಸುತ್ತಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ

posted in: ರಾಜ್ಯ | 0

ಬೆಂಗಳೂರು: ಆರೋಪಿ ತಲೆ ಮರೆಸಿಕೊಳ್ಳಲು ಸಹಕರಿಸುದು ಕಾನೂನಿನ ಪ್ರಕಾರ ಅಪರಾಧ. ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ತಲೆಮರೆಸಿಕೊಂಡು ಅಜ್ಞಾತವಾಸದಲ್ಲಿದ್ದಾರೆ. ಅವರಿಗೆ ಸರ್ಕಾರವೇ ಸಹಕರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿದೆ. ಆರೋಪಿ ಬಂಧಿಸುವುದನ್ನು ಬಿಟ್ಟು ರಕ್ಷಣೆ ನೀಡುತ್ತಿರುವುದು ಕಾನೂನಿನ ಪ್ರಕಾರ ಅಪರಾಧ. ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು ಎಂದು … Continued

ಸಿಡಿ ಯುವತಿ ಉಳಿದುಕೊಂಡಿದ್ದ ಪಿಜಿ ಸ್ಥಳ ಮಹಜರು

posted in: ರಾಜ್ಯ | 0

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತ ಯುವತಿಯನ್ನು ತನಿಖಾಧಿಕಾರಿ ಮತ್ತು ಅವರ ತಂಡ ಆರ್‌.ಟಿ.ನಗರಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ದೂರು ನೀಡಿರುವ ಯುವತಿ ಆರ್‍ಟಿನಗರದ ಪಿಜಿಯಲ್ಲಿ ವಾಸ್ತವ್ಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ತನಿಖಾಧಿಕಾರಿಗಳು ಅವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದರು. ಯುವತಿ ದೂರಿನಲ್ಲಿ … Continued

ಬಿಜೆಪಿ ಸರಕಾರ ರಚನೆಗೆ ಕಾರಣರಾದ ನಾವೆಲ್ಲ ರಮೇಶ ಜಾರಕಿಹೊಳಿ ಬೆನ್ನಿಗೆ ನಿಲ್ಲುತ್ತೇವೆ: ಸಚಿವ ಗೋಪಾಲಯ್ಯ

posted in: ರಾಜ್ಯ | 0

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾವೆಲ್ಲರೂ ಒಗ್ಗಟ್ಟಾಗಿದ್ದು, ರಮೇಶ್ ಜಾರಕಿಹೊಳಿ ಅವರ ಬೆನ್ನಿಗೆ ನಿಲ್ಲುತ್ತೇವೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತನಾಡಿದ ಅವರು, ಸದ್ಯ ಎಸ್ ಐಟಿ ತನಿಖೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ. ನಮ್ಮಲ್ಲಿ ಯಾವುದೇ ಒಡಕ್ಕಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದು, ರಮೇಶ್ … Continued

ಕೊಲ್ಲಾಪುರ ಮಹಾಲಕ್ಷ್ಮೀ ಮೊರೆ ಹೋದ ರಮೇಶ ಜಾರಕಿಹೊಳಿ

posted in: ರಾಜ್ಯ | 0

ಬೆಂಗಳೂರು: ಇತ್ತ ಸಿಡಿ ಪ್ರಕರಣ ಯುವತಿ ಬೆಂಗಳೂರಿನಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸುತ್ತಿದ್ದರೆ ಈ ಪ್ರಕರಣದ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ (ಮಾರ್ಚ್ 30) ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮೀ ದೇಗುಲಕ್ಕೆ ತೆರಳಿದ್ದರು. ದೇವರ ದರ್ಶನ ಪಡೆದು ರಮೇಶ್ ಜಾರಕಿಹೊಳಿ ವಾಪಸ್ ಹೊರಟಿದ್ದಾರೆ. ಅರ್ಧ ಗಂಟೆಗಳ ಕಾಲ ದೇವಿಯ ಸನ್ನಿಧಾನದಲ್ಲಿದ್ದು ವಿಶೇಷ ಪೂಜೆ ಸಲ್ಲಿಸಿದ … Continued

ಸಿಡಿ ಪ್ರಕರಣ: ವಿಚಾರಣೆಗೆ ರಮೇಶ ಜಾರಕಿಹೊಳಿ ಹಾಜರು

posted in: ರಾಜ್ಯ | 0

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್‌ಐಟಿ ವಿಚಾರಣೆಗೆ ಸೋಮವಾರ ಹಾಜರಾಗಿದ್ದಾರೆ. ವಿಚಾರಣೆ ಆರಂಭವಾಗಬೇಕಿದೆ. ಈ ಸಿಡಿ ಪ್ರಕರಣ ಎಸ್‌ಐಟಿಗೆ ವರ್ಗಾವಣೆಯಾಗಬೇಕಿದ್ದು, ಕಬ್ಬನ್‌ಪಾರ್ಕ್ ಠಾಣೆಯಲ್ಲೇ ಪ್ರಕರಣವಿರುವ ಕಾರಣ, ಟೆಕ್ನಿಕಲ್ ವಿಂಗ್‌ಗೆ ಕಬ್ಬನ್ ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ ವಿಚಾರಣೆ ನಡೆಸಲಿದ್ದಾರೆ. ಕೇಂದ್ರ ವಲಯ ಡಿಸಿಪಿ ಅನುಚಿತ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಅಶ್ಲೀಲ … Continued