ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣ | ಪ್ರೋಟೋಕಾಲ್ ದುರ್ಬಳಕೆ ; ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ದುರ್ಬಳಕೆ ಮಾಡಿಕೊಂಡ ಬಗ್ಗೆ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ವರದಿ  ತಿಳಿಸಿದೆ. ಅಲ್ಲದೆ, ರನ್ಯಾ ರಾವ್‌ ಮಲತಂದೆ ಡಿಜಿಪಿ ರಾಮಚಂದ್ರ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ರನ್ಯಾ ರಾವ್‌ ಗೆ ಮಾರ್ಚ್‌ 24ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು : ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಅಲಿಯಾಸ್‌ ಹರ್ಷವರ್ದಿನಿ ರನ್ಯಾ ಅವರನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಸೋಮವಾರ 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಮೂರು ದಿನಗಳ ಕಸ್ಟಡಿ ಅವಧಿಯು ಸೋಮವಾರ ಮುಗಿದ ಹಿನ್ನೆಲೆಯಲ್ಲಿ ಆಕೆಯನ್ನು … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ : ನಟಿ ರನ್ಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈಗ ಸಿಬಿಐ ಪ್ರಕರಣ ದಾಖಲಿಸಿದೆ. ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ.ಚಿನ್ನ ಕಳ್ಳ ಸಾಗಣೆಯ ಸಿಂಡಿಕೇಟ್‌ ಪತ್ತೆಗೆ ಮುಂದಾಗಿರುವ ಸಿಬಿಐ ದೆಹಲಿ, … Continued

ಚಿನ್ನದ ಕಳ್ಳಸಾಗಣೆ ಆರೋಪ ; ಬಂಧನದ ನಂತರ ಹೊರಬಿದ್ದ ನಟಿ ರನ್ಯಾ ರಾವ್ ಮೊದಲ ಫೋಟೋ

ಬೆಂಗಳೂರು : ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದ್ದು, ಈಕೆ ಬಂಧನಕ್ಕೊಳಗಾದ ನಂತರದ ಫೋಟೋ ಹೊರಹೊಮ್ಮಿದೆ. ಸೋಮವಾರ ರಾತ್ರಿ ದುಬೈನಿಂದ ಆಗಮಿಸಿದ ಈಕೆ 12 ಕೋಟಿ ರೂ.ಮೌಲ್ಯದ 14.8 ಕೆಜಿ ಚಿನ್ನಾಭರಣದೊಂದಿಗೆ ಸಿಕ್ಕಿಬಿದ್ದಿದ್ದಾಳೆ. ರನ್ಯಾ ರಾವ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಆರ್ಥಿಕ ಅಪರಾಧಗಳ ನ್ಯಾಯಾಲಯ … Continued

ಮಗಳ ಕಳ್ಳ ಸಾಗಣೆ ದಂಧೆ ಬಗ್ಗೆ ಗೊತ್ತಿರಲಿಲ್ಲ, ಬಂಧನ ಆಘಾತ ತಂದಿದೆ : ನಟಿ ರನ್ಯಾ ಬಂಧನದ ಬಗ್ಗೆ ಡಿಜಿಪಿ ರಾಮಚಂದ್ರ ರಾವ್

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ತಮ್ಮ ಮಲಮಗಳಾದ ನಟಿ ರನ್ಯಾ ರಾವ್ ಅವರ ಬಂಧನವಾಗಿರುವುದು ತಮಗೆ ಆಘಾತ ತಂದಿದೆ ಎಂದು ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಪೊಲೀಸ್ ಮಹಾನಿರ್ದೇಶಕರಾದ (ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ) ಡಾ. ಕೆ ರಾಮಚಂದ್ರ ರಾವ್ ಹೇಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.8 ಕಿಲೋಗ್ರಾಂಗಳಷ್ಟು ಚಿನ್ನವನ್ನು ಕಂದಾಯ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ | 15 ದಿನದಲ್ಲಿ ದುಬೈಗೆ 4 ಸಲ ಭೇಟಿ ; ಅದೇ ಬಟ್ಟೆ ಧರಿಸಿದ್ದ ನಟಿ ; ರನ್ಯಾ ರಾವ್ ಸಿಕ್ಕಿಬಿದ್ದಿದ್ದು ಹೇಗೆ…?

 ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 14.8 ಕೆಜಿ ಚಿನ್ನಾಭರಣವನ್ನು ಪತ್ತೆ ಮಾಡಿದ ನಂತರ ನಟಿ ಮತ್ತು ಹಿರಿಯ ಐಪಿಎಸ್ ಅಧಿಕಾರಿಯ ಮಲ ಪುತ್ರಿ ರನ್ಯಾ ರಾವ್ ಅವಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು ಬಂಧಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತಿದೊಡ್ಡ ಪ್ರಮಾಣದ ಚಿನ್ನಾಭರಣದ ಪ್ರಮುಖ ಕಳ್ಳಸಾಗಣೆ ದಂಧೆಯನ್ನು ಡಿಆರ್‌ಐ ಭೇದಿಸಿದ್ದಾರೆ. … Continued

ದುಬೈನಿಂದ ಚಿನ್ನ ಕಳ್ಳ ಸಾಗಾಟ ಪ್ರಕರಣ ; ಕನ್ನಡ ನಟಿ ರನ್ಯಾ ರಾವ್ ಬಂಧನ

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನತಂದ ಆರೋಪದಲ್ಲಿ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರನ್ಯಾ ಅವರು ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ಮಧ್ಯರಾತ್ರಿ ಆಗಮಿಸಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಮಾರ್ಚ್‌4ರಂದು ರಾತ್ರಿ ನಟಿ ರನ್ಯಾ ಅವರನ್ನು ವಶಕ್ಕೆ … Continued