ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ಬೆಂಗಳೂರು : ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶವನ್ನು ಶುಕ್ರವಾರ ರದ್ದುಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ (ಟ್ಯಾಕ್ಸಿ) ಬಳಸಲು ಅಗತ್ಯ ಷರತ್ತುಗಳನ್ನು ವಿಧಿಸಿ ಸರ್ಕಾರ ಅನುಮತಿ ನೀಡಬಹುದು ಎಂದು ಆದೇಶಿಸಿದೆ. ಮೋಟಾರು ವಾಹನಗಳ ಕಾಯಿದೆ 1988ರ ಅನ್ವಯ ಮಾರ್ಗಸೂಚಿ ಮತ್ತು … Continued

ವೀಡಿಯೊ..| ಬೆಂಗಳೂರು : ವೇಗವಾಗಿ ಚಾಲನೆ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕೆ ಮಹಿಳೆ ಕೆನ್ನೆಗೆ ಬಲವಾಗಿ ಹೊಡೆದ ರ‍್ಯಾಪಿಡೋ ಚಾಲಕ ; ಕೆಳಕ್ಕೆ ಬಿದ್ದ ಮಹಿಳೆ

ಬೆಂಗಳೂರು : ಮೂರು ದಿನಗಳ ಹಿಂದೆ ನಡೆದ ಘಟನೆಯಲ್ಲಿ ಬೆಂಗಳೂರಿನ ಜಯನಗರ ಪ್ರದೇಶದ ಪಾದರಕ್ಷೆಗಳ ಶೋರೂಂ ಬಳಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕ ಅತಿವೇಗದ ಚಾಲನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಾಗ್ವಾದ ಪ್ರಾರಂಭವಾಯಿತು ಎಂದು ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, … Continued

6 ವಾರಗಳಲ್ಲಿ ಓಲಾ, ಉಬರ್, ರ‍್ಯಾಪಿಡೊ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು : ಓಲಾ, ಉಬರ್‌ ಮತ್ತು ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸೇವೆಯನ್ನು ಸಂಬಂಧಿತ ಸಂಸ್ಥೆಗಳು ಆರು ವಾರಗಳಲ್ಲಿ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಆದೇಶ ಮಾಡಿದೆ. ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಅನುಮತಿಗೆ ನಿರ್ದೇಶನ ಕೋರಿ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್‌, ರೊಪ್ಪೆನ್‌ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಪ್ರೈವೇಟ್‌ ಲಿಮಿಟೆಡ್‌ ಮತ್ತು ಎಎನ್‌ಐ ಟೆಕ್ನಾಲಜೀಸ್‌ … Continued