ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಘಟನೆ : ಮೂವರು ಐಪಿಎಸ್‌ ಅಧಿಕಾರಿಗಳಿಗೆ ಕ್ಲೀನ್ ಚಿಟ್

ಬೆಂಗಳೂರು: 2025ರ ಜೂನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ಪ್ರಶಸ್ತಿ ಸಂಭ್ರಮಾಚರಣೆ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಸಂಭವಿಸಿದ್ದ ಭೀಕರ  ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರಿಗೆ ಕ್ಲೀನ್ ಚಿಟ್ ನೀಡಿದೆ. 2025ರ ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು … Continued

ಐಪಿಎಲ್ 2026 ಫೈನಲ್ : ಬೌಲರ್‌ಗಳ ಕರಾಮತ್ತು, ಕೊಹ್ಲಿ ಅಬ್ಬರ; ಸತತ 2ನೇ ಬಾರಿ ಐಪಿಎಲ್ ಚಾಂಪಿಯನ್‌ ಆದ ಆರ್‌ಸಿಬಿ

ಅಹಮದಾಬಾದ್: 18 ವರ್ಷಗಳ ಕಾಯುವಿಕೆಗೆ ಹೋದ ವರ್ಷವಷ್ಟೇ ತೆರೆ ಎಳೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಇದೀಗ ಕೇವಲ 12 ತಿಂಗಳಲ್ಲಿ ತನ್ನ ಎರಡನೇ ಐಪಿಎಲ್ ಮುಕುಟವನ್ನು ಮುಡಿಗೇರಿಸಿಕೊಂಡಿದೆ. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಐಪಿಎಲ್ ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ (GT) ತಂಡವನ್ನು ಸಂಪೂರ್ಣವಾಗಿ ಧೂಳೀಪಟ ಮಾಡಿದ ಆರ್‌ಸಿಬಿ, ಸತತ … Continued

ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಆರ್‌ ಸಿಬಿ ಡೀಲ್‌ ; 16,000 ಕೋಟಿ ರೂ.ಗಳಿಗೆ ಮಾರಾಟವಾದ ಚಾಂಪಿಯನ್ ತಂಡ…!

ಬೆಂಗಳೂರು : ಭಾರತೀಯ ಕ್ರಿಕೆಟ್‌ನ ಮೌಲ್ಯವು ಆಕಾಶಕ್ಕೆ ಏರುತ್ತಿರುವುದನ್ನು ಪುಷ್ಟೀಕರಿಸುವಂತಹ ಒಂದು ಐತಿಹಾಸಿಕ ವಹಿವಾಟಿನಲ್ಲಿ, ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ಹಾಲಿ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರಭಾವಿ ಉದ್ಯಮಿಗಳ ಒಕ್ಕೂಟವೊಂದು 1.78 ಬಿಲಿಯನ್ ಅಮೆರಿಕನ್‌ ಡಾಲರ್ (ಸುಮಾರು 16,000 ಕೋಟಿ ರೂಪಾಯಿ) ಮೊತ್ತಕ್ಕೆ ಸ್ವಾಧೀನಪಡಿಸಿಕೊಂಡಿದೆ. ಈ ಗೆಲುವಿನ ಬಿಡ್ ಅನ್ನು … Continued

ಬೆಂಗಳೂರು ಕಾಲ್ತುಳಿತದ ಪ್ರಕರಣ: ಆರ್​ಸಿಬಿ, ಡಿಎನ್​ಎ ವಿರುದ್ಧ ಕ್ರಿಮಿನಲ್‌ ಪ್ರಕರಣ, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡ ಘಟನೆಯ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮತ್ತು ಡಿಎನ್‌ಎ (DNA) ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್‌ ಸಂಸ್ಥೆಗಳ … Continued

ಬೆಂಗಳೂರು ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ನೀಡಿರುವ ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಜೂನ್ 4 ರಂದು ಐಪಿಎಲ್ 2025 ವಿಜೇತರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡಕ್ಕೆ ಸನ್ಮಾನ ಸಮಾರಂಭದ ವೇಳೆ ಬೆಂಗಳೂರಿನ ಎಂ. … Continued

ಬೆಂಗಳೂರು ಕಾಲ್ತುಳಿತದ ಘಟನೆ : ನೈತಿಕ ಹೊಣೆ ಹೊತ್ತು ಕೆಎಸ್‌ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು :  ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ … Continued

ವಿರಾಟ್ ಕೊಹ್ಲಿಗೆ ಸಂಕಷ್ಟ…? ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು .ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ನಿಂದ ದೊಡ್ಡ ರಿಲೀಫ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಶುಕ್ರವಾರ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕೆಎಸ್‌ಸಿಎ ಪದಾಧಿಕಾರಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಮತ್ತು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಬೇಕು ಎಂದೂ ಹೈಕೋರ್ಟ್‌ ಸೂಚಿಸಿದೆ. … Continued

ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಅಧಿಕಾರಿಗಳು ಸೇರಿ ನಾಲ್ವರ ಬಂಧನ

ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮೊದಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿ 11 ಜನರ ಸಾವಿಗೆ ಕಾರಣವಾಯಿತು. ಪೊಲೀಸರ ಪ್ರಕಾರ, ಆರ್‌ಸಿಬಿಯ ಉನ್ನತ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು. ಅವರನ್ನು ವಿಮಾನ ನಿಲ್ದಾಣಕ್ಕೆ … Continued

ಬೆಂಗಳೂರು ಕಾಲ್ತುಳಿತ ಘಟನೆ ; ಆರ್‌ ಸಿಬಿ, ಕೆಎಸ್‌ಸಿಎ, ಈವೆಂಟ್ ಸಂಸ್ಥೆಯ ಅಧಿಕಾರಿಗಳ ಬಂಧನಕ್ಕೆ ಸಿಎಂ ಸೂಚನೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ (ಈವೆಂಟ್‌ ಮ್ಯಾನೇಜ್‌ಮೆಂಟ್‌) ಎ2, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಎ3 ಆರೋಪವನ್ನು ಹೊತ್ತಿವೆ. ಕಬ್ಬನ್‌ಪಾರ್ಕ್‌ ಪೊಲೀಸ್‌ … Continued