ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒಳಗಿನ ಆಂತರಿಕ ಬಂಡಾಯ ಬುಧವಾರ ನಿರ್ಣಾಯಕ ತಿರುವು ಪಡೆದುಕೊಂಡಿದೆ. ಟಿಎಂಸಿಯಿಂದ ಉಚ್ಚಾಟಿತರಾಗಿರುವ ಶಾಸಕ ರಿತಬ್ರತ ಬ್ಯಾನರ್ಜಿ ಅವರಿಗೆ ಪಕ್ಷದ 58 ಭಿನ್ನಮತೀಯ ಶಾಸಕರು ಬೆಂಬಲ ಘೋಷಿಸಿದ್ದು, ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಕುರಿತ ತಮ್ಮ ನಿರ್ಧಾರವನ್ನು ಪತ್ರಕ್ಕೆ ಸಹಿ ಹಾಕುವ ಮೂಲಕ ಪಶ್ಚಿಮ ಬಂಗಾಳ … Continued

ದಂಗೆಯ ಸನಿಹದಲ್ಲಿ ಪಾಕಿಸ್ತಾನ ಸೇನೆ ? : ಪಾಕ್‌ ಸೇನಾ ಮುಖ್ಯಸ್ಥರ ರಾಜೀನಾಮೆಗೆ ಕಿರಿಯ ಅಧಿಕಾರಿಗಳು, ಕರ್ನಲ್‌ಗಳ ಪಟ್ಟು…!

ಪಾಕಿಸ್ತಾನಿ ಸೇನೆಯ ಕಿರಿಯ ಅಧಿಕಾರಿಗಳು, ಕರ್ನಲ್‌ಗಳು, ಮೇಜರ್‌ಗಳು ಮತ್ತು ಮಾಜಿ ಜನರಲ್‌ಗಳು ಪ್ರಸ್ತುತ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ರಾಜೀನಾಮೆ ನೀಡಿ ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದು, ಇದು ಪಾಕಿಸ್ತಾನ್ ಸೇನೆಯ ಆಂತರಿಕ ಅರಾಜಕ ಸ್ಥಿತಿಯನ್ನು ಹೇಳುತ್ತಿರುವಂತೆ ತೋರುತ್ತಿದೆ. ವರದಿಗಳ ಪ್ರಕಾರ, ಮುನೀರ್ ಸೇಡು ತೀರಿಸಿಕೊಳ್ಳುವ ಸಂದರ್ಭದಲ್ಲಿ ಪಾಕಿಸ್ತಾನ ಸೇನೆಯನ್ನು ರಾಜಕೀಯ ದಬ್ಬಾಳಿಕೆಯ … Continued

ಶಿವಮೊಗ್ಗದಲ್ಲಿ ಬಂಡಾಯ : ಈಶ್ವರಪ್ಪಗೆ ಅಮಿತ್ ಶಾ ಕರೆ, ದೆಹಲಿಗೆ ಬುಲಾವ್‌ ; ಈಶ್ವರಪ್ಪ ಮುಂದಿನ ನಡೆ ಏನು..?

ಬೆಂಗಳೂರು : ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿರುವ ಕೆ.ಎಸ್‌. ಈಶ್ವರಪ್ಪ ಅವರಿಗೆ ಕೇಂದ್ರ ಸಚಿವ ಅಮಿತ್ ಶಾ ಅವರು ಕರೆ ಮಾಡಿದ್ದು, ನಾಳೆ (ಏಪ್ರಿಲ್‌ ೩) ಈಶ್ವರಪ್ಪ ಅವರನ್ನು ದೆಹಲಿಗೆ ಬುಲಾವ್‌ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ದೆಹಲಿಗೆ ತೆರಳಲಿದ್ದಾರೆ. ಮಗ ಕಾಂತೇಶ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ … Continued

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸ್ತೇನೆ ಎಂದು ಈಶ್ವರಪ್ಪ ಘೋಷಣೆ : ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ ಬಿಜೆಪಿ ನಾಯಕ

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ( ಮಾರ್ಚ್‌ 15) ಘೋಷಿಸಿದ್ದಾರೆ. ತಮ್ಮ ಪುತ್ರನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಪುತ್ರ ಕಾಂತೇಶ ಅವರಿಗೆ ಟಿಕೆಟ್ ಸಿಗದ … Continued