ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ | ರಾಜಕೀಯ ವಿವಾದಕ್ಕೆ ಕಾರಣವಾದ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಆಸನ ವ್ಯವಸ್ಥೆ

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ “ಐದನೇ ಸಾಲಿನಲ್ಲಿ ಆಸನ ವ್ಯವಸ್ಥೆ” ಮಾಡಿರುವುದು ರಾಜಕೀಯ ವಿವಾದಕ್ಕ ಕಾರಣವಾಗಿದೆ. ಹಾಗೂ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಸರ್ಕಾರ ಗೌರವ ಕೊಡುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಐದನೇ … Continued

ಜಾತ್ಯತೀತ ನಾಗರಿಕ ಸಂಹಿತೆ ಕಾಲದ ಅಗತ್ಯ : ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಬಲವಾಗಿ ಪ್ರತಿಪಾದಿಸಿದ ಪ್ರಧಾನಿ ಮೋದಿ

ನವದೆಹಲಿ : ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ ಅಗತ್ಯದ ಬಗ್ಗೆ ಬಲವಾಗಿ ಪ್ರತಿಪಾದನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶವನ್ನು ವಿಭಜಿಸುವ ಕಾನೂನುಗಳಿಗೆ ಆಧುನಿಕ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅದನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. “ಸುಪ್ರೀಂಕೋರ್ಟ್ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪದೇ ಪದೇ ಚರ್ಚೆಗಳನ್ನು ನಡೆಸಿದೆ, ಆದೇಶಗಳನ್ನು ನೀಡಿದೆ, … Continued