ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು : ಕತಾರ್​ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತದ ನೌಕಾಪಡೆ 8 ಮಾಜಿ ಅಧಿಕಾರಿಗಳ ಬಿಡುಗಡೆ

ನವದೆಹಲಿ: ಭಾರತಕ್ಕೆ ಪ್ರಮುಖ ರಾಜತಾಂತ್ರಿಕ ಗೆಲುವಿನಲ್ಲಿ, ಗೂಢಚರ್ಯೆಯ ಆರೋಪದ ಪ್ರಕರಣದಲ್ಲಿ ಕತಾರ್‌ ದೇಶದಲ್ಲಿ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಸೋಮವಾರ ಮುಂಜಾನೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), ಬೆಳವಣಿಗೆಯನ್ನು ಸ್ವಾಗತಿಸಿದೆ ಮತ್ತು ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುವ ಭಾರತೀಯ ನೌಕಾಪಡೆಯ … Continued

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ ; ಭರ್ಜರಿ ಸ್ವಾಗತ

ಹುಬ್ಬಳ್ಳಿ: ಮೂವತ್ತು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿ ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ 31 ವರ್ಷಗಳ ನಂತರ ಬಂಧನಕ್ಕೊಳಗಾಗಿದ್ದ ಶ್ರೀಕಾಂತ ಪೂಜಾರಿ ಅವರು ಕೋರ್ಟ್‌ ನಿಂದ ಜಾಮೀನು ದೊರೆತ ಮೇಲೆ 9 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 31 ವರ್ಷಗಳ ಹಿಂದಿನ ರಾಮಜನ್ಮಭೂಮಿ ಹೋರಾಟದ ಗಲಭೆ ಪ್ರಕರಣದಲ್ಲಿ … Continued

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರು ಬಿಡುಗಡೆ

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಗುರುವಾರ ಬಿಡುಗಡೆಯಾಗಿದ್ದಾರೆ. ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ‌ ಸಂಬಂಧಚಿತ್ರದುರ್ಗದ ಎರಡನೇ ಹೆಚ್ಚುವರಿ‌ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ … Continued

ಚೆಕ್ ಬೌನ್ಸ್ ಪ್ರಕರಣ ; ನಟ ನೀನಾಸಂ ಅಶ್ವತ್ಥ ಬಂಧನ-ಬಿಡುಗಡೆ

ಚೆಕ್​ ಬೌನ್ಸ್​ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ ಅವರನ್ನು ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸಿದರು. ಅವರು ನ್ಯಾಯಾಧೀಸರ ಎದುರು ತಪ್ಪೊಪ್ಪಿಕೊಂಡರು ಹಾಗೂ ಚೆಕ್‌ನ ಶೇ. 25ರಷ್ಟು ಹಣವನ್ನು ಪಾವತಿ ಮಾಡಿದರು. ನಂತರ ನ್ಯಾಯಾಲಯ ನೀನಾಸಂ ಅಶ್ವತ್ಥ​ ಅವರಿಗೆ ಜಾಮೀನು … Continued