ಹಾಸಿಗೆ, ದಿಂಬು ಸೇರಿ ಯಾವುದೇ ಸೌಕರ್ಯ ಒದಗಿಸಿಲ್ಲ ; ಮತ್ತೆ ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಜೈಲು ಸೇರಿರುವ ನಟ ದರ್ಶನಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸುತ್ತಿಲ್ಲ ಎಂಬ ವಿಚಾರದ ಕುರಿತು ವಿವರಣೆ ನೀಡುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗೆ ಬೆಂಗಳೂರಿನ ನಗರ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ನಿರ್ದೇಶಿಸಿದೆ. ನ್ಯಾಯಾಲಯದ ಆದೇಶದ ಹೊರತಾಗಿಯೂ ತಮಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಲು … Continued

ಕಾರಾಗೃಹ ಕೈಪಿಡಿ ಅನ್ವಯ ನಟ ದರ್ಶನಗೆ ಸೌಲಭ್ಯ ನೀಡಲು ಕೋರ್ಟ್‌ ಸೂಚನೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ಮಾಡಿದ್ದ ಮನವಿಯನ್ನು ಬೆಂಗಳೂರಿನ ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ. ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲು ಸಕಾರಣಗಳಿಲ್ಲ ಎಂದು ಅದು ತಿಳಿಸಿದೆ ಎಂದು ಬಾರ್‌ & ಬೆಂಚ್‌ ವರದಿ … Continued

ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನನನ್ನು ಮತ್ತೆ ಬಂಧಿಸಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Actor Darshan) ಮತ್ತು ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್‌ ಗುರುವಾರ (ಆಗಸ್ಟ್‌ 14) ರದ್ದುಗೊಳಿಸಿದೆ. ಹೈಕೋರ್ಟ್ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ … Continued

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಇತರ ಐವರಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠವು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್​ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಮತ್ತಿತರರ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಇದೇ ವೇಳೆ, ದರ್ಶನ್​ಗೆ ಚಿಕಿತ್ಸೆ ಪಡೆಯಲು ಮಂಜೂರು ಮಾಡಿದ್ದ ಮಧ್ಯಂತರ ಜಾಮೀನು ಆದೇಶವನ್ನು ವಿಸ್ತರಿಸಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ … Continued

ನಟ ದರ್ಶನಗೆ ಮಧ್ಯಂತರ ಜಾಮೀನು: ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು…?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನಗೆ ಎಂಟು ಷರತ್ತುಗಳನ್ನು ವಿಧಿಸಿ ಕರ್ನಾಟಕ ಹೈಕೋರ್ಟ್‌ ಬುಧವಾರ ಆರು ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಆಮ್‌ ಆದ್ಮಿ ಪಕ್ಷದ ಮುಖಂಡ ಸತ್ಯೇಂದರ್‌ ಕುಮಾರ್‌ ಜೈನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಜನರು ತಮ್ಮ ಖರ್ಚಿನಲ್ಲಿ ತಮ್ಮ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ 45 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನೂ ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ … Continued

ಆರೋಪಿ ನಟ ದರ್ಶನ್ ಸೆಲ್‌ಗೆ ಟಿವಿ ಅಳವಡಿಕೆ

ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನಗೆ ಟಿವಿ ನೀಡಲಾಗಿದೆ. ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.ದರ್ಶನ್ ಅವರ ಬೇಡಿಕೆಯನ್ನು ಜೈಲಧಿಕಾರಿಗಳು ಈಡೇರಿಕೆ ಮಾಡಿದ್ದಾರೆ. ಐದು ದಿನಗಳ ಹಿಂದೆ ಟಿವಿಗೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಕಳೆದ ಮಂಗಳವಾರ ಟಿವಿ ನೀಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಜೈಲು ನಿಯಮದ ಪ್ರಕಾರ ಟಿವಿ ನೀಡಬಹುದು. … Continued

ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್​ ಜೈಲಿಗೆ ನಟ ದರ್ಶನ್​ ಸ್ಥಳಾಂತರ

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವ​ರನ್ನು ಇಂದು, ಗುರುವಾರ ಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಈವರೆಗೆ ದರ್ಶನ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು ಬಿಗಿ ಭದ್ರತೆಯಲ್ಲಿ ಬಳ್ಳಾರಿಯ ಜೈಲಿಗೆ ಪೊಲೀಸ್​ ವಾಹನಗಳು ತೆರಳಿವೆ. ಬೆಳಗ್ಗಿನ ಜಾವ 4:30ಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಹೊರಟ ಪೊಲೀಸ್​ ವಾಹನ ಬೆಳಗ್ಗೆ ‌9:45ರ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಬುಧವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. … Continued