ರೇಣುಕಾಸ್ವಾಮಿ ಕೊಲೆ ಪ್ರಕರಣ : ಮಾಫಿ ಸಾಕ್ಷಿ ಆದೇಶ ರದ್ದತಿ ಕೋರಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ರಾವ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿಹಿಡಿದಿದೆ. ನಟ ದರ್ಶನ್‌ಗೆ ಹೈಕೋರ್ಟ್​ನಲ್ಲಿ ಹಿನ್ನಡೆ ಆಗಿದೆ. ವಿಚಾರಣಾ ನ್ಯಾಯಾಲಯವು 2026ರ ಸೆಪ್ಟೆಂಬರ್‌ 16ರಂದು ಹೊರಡಿಸಿದ ಆದೇಶ ರದ್ದುಪಡಿಸುವಂತೆ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಪವಿತ್ರಾಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ ಶುಕ್ರವಾರ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಮಂದಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿಯನ್ನು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾಗೌಡ ಸೇರಿ ಏಳು ಮಂದಿಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಏಳು ಜನರಿಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರುಮಾಡಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿ ಡಿಸೆಂಬರ್‌ 9ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠವು ಇಂದು, ಶುಕ್ರವಾರ ಪ್ರಕಟಿಸಿದೆ. ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ, ಆರ್‌ … Continued

ನಟ ದರ್ಶನ್‌ ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದ ನಟ ದರ್ಶನ್‌ ನೋವಿನ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದಿದ್ದು, ಬೆನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ನಟ ದರ್ಶನ್‌ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಬಿಜಿಎಸ್ ಗ್ಲೋಬಲ್ … Continued

ನಟ ದರ್ಶನಗೆ ಮಧ್ಯಂತರ ಜಾಮೀನು: ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು…?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನಗೆ ಎಂಟು ಷರತ್ತುಗಳನ್ನು ವಿಧಿಸಿ ಕರ್ನಾಟಕ ಹೈಕೋರ್ಟ್‌ ಬುಧವಾರ ಆರು ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಆಮ್‌ ಆದ್ಮಿ ಪಕ್ಷದ ಮುಖಂಡ ಸತ್ಯೇಂದರ್‌ ಕುಮಾರ್‌ ಜೈನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಜನರು ತಮ್ಮ ಖರ್ಚಿನಲ್ಲಿ ತಮ್ಮ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು … Continued

ದರ್ಶನಗೆ ವೈದ್ಯಕೀಯ ಜಾಮೀನು : ಬುಧವಾರ ಆದೇಶ ಪ್ರಕಟಿಸಲಿರುವ ಹೈಕೋರ್ಟ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಅವರು ಬೆನ್ನುಹುರಿ ಸಮಸ್ಯೆಗಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯಕೀಯ ಜಾಮೀನು ಕೋರಿರುವ ಮಧ್ಯಂತರ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಬುಧವಾರಕ್ಕೆ (ಅಕ್ಟೋಬರ್‌ 30) ಕರ್ನಾಟಕ ಹೈಕೋರ್ಟ್‌ ಕಾಯ್ದಿರಿಸಿದೆ. ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ಅವರು ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣಾಧೀನ ನ್ಯಾಯಾಲಯವು ಸೋಮವಾರ ದರ್ಶನ್‌ಗೆ ಜಾಮೀನು ನಿರಾಕರಿಸಿತ್ತು. ದರ್ಶನ್‌ಗೆ ಜಾಮೀನು ಕೋರಿ ಅವರ ಪರವಾಗಿ ಅರ್ಜಿ ಸಲ್ಲಿಸಿರುವುದಾಗಿ ವಕೀಲ ಎಸ್‌ ಸುನಿಲಕುಮಾರ ತಿಳಿಸಿದ್ದಾರೆ. ದರ್ಶನ್‌ ಅವರು ಪ್ರಭಾವಿಯಾಗಿದ್ದು, ಸಾಮಾಜಿಕವಾಗಿ ಸಾಕಷ್ಟು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್‌ ಅವರಿಗೆ ಬೆಂಗಳೂರಿನ ಸತ್ರ ನ್ಯಾಯಾಲಯವು ಸೋಮವಾರ ಜಾಮೀನು ನಿರಾಕರಿಸಿದೆ. ಅಲ್ಲದೆ, ಪವಿತ್ರಾ ಗೌಡ, ಆರ್‌. ನಾಗರಾಜು, ಎಂ ಲಕ್ಷ್ಮಣಗೂ ಜಾಮೀನು ನಿರಾಕರಿಸಿದೆ. ಇವರ ಕಾಯ್ದಿರಿಸಿದ್ದ ಜಾಮೀನು ಅರ್ಜಿಗಳ ಆದೇಶವನ್ನು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶ ಜೈಶಂಕರ … Continued

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಆರೋಪಪಟ್ಟಿಯ ರಹಸ್ಯ ಮಾಹಿತಿ ಮುದ್ರಣ, ಹಂಚಿಕೆ, ಪ್ರಸಾರಕ್ಕೆ ಹೈಕೋರ್ಟ್‌ ನಿರ್ಬಂಧ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ ಕುರಿತು ಆರೋಪಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಧ್ಯಮಗಳಿಗೆ ಹೈಕೋರ್ಟ್ ಮಂಗಳವಾರ ನಿರ್ಬಂಧ ವಿಧಿಸಿದೆ. ತಮ್ಮ ವಿರುದ್ಧದ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌-ಸಹಚರರ ಕ್ರೌರ್ಯ ಅನಾವರಣ ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್

ಬೆಂಗಳೂರು : ನಟ ದರ್ಶನ್ ತೂಗುದೀಪ ಅವರ ಆಜ್ಞೆಯ ಮೇರೆಗೆ ಕೊಲೆಯಾದ 33 ವರ್ಷದ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಸಾಯುವ ಕೆಲವೇ ಕ್ಷಣಗಳ ಮೊದಲಿನ ಹೊಸ ಫೋಟೋಗಳು ಹೊರಬಂದಿವೆ. ಹೊರಬಂದ ಎರಡು ಫೋಟೊಗಳ ಪೈಕಿ ಒಂದರಲ್ಲಿ ರೇಣುಕಾಸ್ವಾಮಿ ಪ್ರಾಣಭಯದಿಂದ ಬೇಡಿಕೊಳ್ಳುತ್ತಿರುವುದು ಕಾಣುತ್ತದೆ. ಎರಡೂ ಚಿತ್ರಗಳಲ್ಲಿ ರೇಣುಕಾಸ್ವಾಮಿ ಶರ್ಟ್ ಧರಿಸಿಲ್ಲ, ಹಿನ್ನಲೆಯಲ್ಲಿ ಟ್ರಕ್‌ಗಳು ನಿಂತಿವೆ. ಅವರ ದೇಹದ ಮೇಲೆ … Continued