ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ್ರೆ ಶೇ. 50ರಷ್ಟು ಇರುವ ಮೀಸಲಾತಿ ಮಿತಿ ತೆಗೆದುಹಾಕ್ತೇವೆ : ರಾಹುಲ್ ಗಾಂಧಿ

ರಾಂಚಿ : ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಿದರೆ, ರಾಷ್ಟ್ರವ್ಯಾಪಿ ಜಾತಿ ಗಣತಿ ಮತ್ತು ಮೀಸಲಾತಿ ಮೇಲಿನ ಶೇಕಡಾ 50 ಮಿತಿಯನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಜಾತಿ ಗಣತಿಗೆ ಬೇಡಿಕೆ ಬಂದಾಗ ಮತ್ತು … Continued

ಜಾತಿ ಆಧಾರಿತ ಮೀಸಲಾತಿ ಶೇ.65ಕ್ಕೆ ಹೆಚ್ಚಿಸುವ ಮಸೂದೆಗೆ ಬಿಹಾರ ವಿಧಾನಸಭೆ ಅಂಗೀಕಾರ

ಪಾಟ್ನಾ : ಬಿಹಾರದಲ್ಲಿ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಹೆಚ್ಚಿಸುವ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಗುರುವಾರ (ನವೆಂಬರ್‌ 9) ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕೋಟಾಗಳನ್ನು ಹೆಚ್ಚಿಸುವ ಪ್ರಸ್ತಾವನೆಗೆ ಬಿಹಾರ ಸಚಿವ ಸಂಪುಟ ಮಂಗಳವಾರ ಒಪ್ಪಿಗೆ ನೀಡಿದೆ. ನಿತೀಶಕುಮಾರ ಅವರ ಅನುಪಸ್ಥಿತಿಯಲ್ಲಿ … Continued

56 ನಗರ ಸ್ಥಳೀಯ ಸಂಸ್ಥೆಗಳಿಗೆ 2 ತಿಂಗಳಲ್ಲಿ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಿ: ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಎರಡು ತಿಂಗಳ ಒಳಗೆ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಆದೇಶಿಸಿದೆ. ಅವಧಿ ಪೂರ್ಣಗೊಂಡಿರುವ ರಾಜ್ಯದ ಕೆಲ ನಗರ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ … Continued

ಉದ್ಯೋಗ-ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳ ವರೆಗೆ ಮೀಸಲಾತಿ ಮುಂದುವರಿಯುತ್ತದೆ: ಸುಪ್ರೀಂ ಕೋರ್ಟ್‌

ನವ ದೆಹಲಿ: ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳ ವರೆಗೆ ಮೀಸಲಾತಿ ಮುಂದುವರೆಯುತ್ತದೆ ಎಂದು ಸುಪ್ರೀಂಕೋರ್ಟ್ ಕೇಳಿದೆ. ಶುಕ್ರವಾರ ಮರಾಠಾ ಮೀಸಲಾತಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಒಟ್ಟಾರೆ ಶೇಕಡ 50 ರಷ್ಟು ಮೀಸಲಾತಿ ಮಿತಿಯನ್ನು ತೆಗೆದುಹಾಕಿದರೆ ಉದ್ಬವಿಸಬಹುದಾದ ಅಸಮಾನತೆಯ ಬಗ್ಗೆಯೂ ತನ್ನ ಕಳವಳ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ … Continued

ಸದನದಲ್ಲಿ ಸಿಎಂ ಭರವಸೆ: ಪಂಚಮಸಾಲಿ ಮೀಸಲು ಹೋರಾಟ ತಾತ್ಕಾಲಿಕ ಕೈಬಿಟ್ಟ ಸ್ವಾಮೀಜಿ

ಬೆಂಗಳೂರು: ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೋರಿ ಕೂಡಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಇದನ್ನು ಖಚಿತ ಪಡಿಸಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸರ್ಕಾರ ಈ ನಿಟ್ಟಿನಲ್ಲಿ ಪ್ರಯತ್ನಿಸುವ ಸ್ಪಷ್ಟ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಪಂಚಮಸಾಲಿ ಮೀಸಲಾತಿ ಹೋರಾಟವನ್ನ ತಾತ್ಕಾಲಿಕವಾಗಿ ಕೈಬಿಡುತ್ತಿದ್ದೇವೆ ಎಂದರು. ವಿಜಯಪುರ … Continued

ಮೀಸಲಾತಿ ಬಗ್ಗೆ ಕೂಲಂಕುಷವಾಗಿ ಪರಾಮರ್ಶಿಸಿ ಸುಪ್ರೀಂ ಕೋರ್ಟಿಗೆ ವರದಿ:ಸಚಿವ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಸ್ ಸಿ/ಎಸ್ ಟಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಸಂವಿಧಾನಾತ್ಮಕವಾಗಿ  ರಕ್ಷಣೆ ಮಾಡುವ ಕುರಿತು ಕೂಲಂಕುಷವಾಗಿ ಪರಾಮರ್ಶೆ ನಡೆಸಿ ಸುಪ್ರೀಂಕೋರ್ಟಿಗೆ ವರದಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ. ೫೦ಕ್ಕಿಂತಲೂ ಹೆಚ್ಚು ಮಾಡಿದೆ. ಸುಪ್ರೀಂಕೋರ್ಟ್ ಈ  ಪ್ರಕರಣದ … Continued

ಸಂವಿಧಾನಾತ್ಮಕವಾಗಿ ಕಾನೂನಿನ ಚೌಕಟ್ಟಿನಲ್ಲಿ ಮೀಸಲಾತಿಗೆ ಕ್ರಮ: ಸಚಿವ ಬಸವರಾಜ ಬೊಮ್ಮಾಯಿ

posted in: ರಾಜ್ಯ | 0

ಬೆಂಗಳೂರು: ಎಸ್ ಸಿ, ಎಸ್ ಟಿ, ಲಿಂಗಾಯತ ಪಂಚಮಸಾಲಿ, ಕುರುಬ, ಒಕ್ಕಲಿಗ ಸೇರಿದಂತೆ ಮೀಸಲಾತಿಗೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಹಲವು ಸಮುದಾಯಗಳ ಆಶೋತ್ತರಗಳಿಗೆ ಪೂರಕವಾಗಿ ಕಾನೂನಿನ ಚೌಕಟ್ಟಿನಲ್ಲಿ ಸಂವಿಧಾನಾತ್ಮಕವಾಗಿ ಮೀಸಲಾತಿಯನ್ನು ಕಲ್ಪಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ವಿಧಾನಸಭೆಯಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ನಡೆದ ಪ್ರಸ್ತಾವನೆಗೆ … Continued

ಮೀಸಲಾತಿ‌ ಬೇಡಿಕೆ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ‌ ಬೇಡಿಕೆ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಪಂಚಮಸಾಲಿ ಸಮುದಾಯ ಪ್ರವರ್ಗ 2 ಎ ಮೀಸಲಾತಿ, ಕುರುಬ … Continued

ಮೀಸಲಾತಿ ಹಕ್ಕೊತ್ತಾಯಕ್ಕೆ ಬೆಂಗಳೂರಿನಲ್ಲಿ ಒಕ್ಕಲಿಗರ ಸಭೆ

ಬೆಂಗಳೂರು: ಒಕ್ಕಲಿಗ ಮೀಸಲಾತಿ ಹೋರಾಟವನ್ನು ತೀವ್ರಗೊಳಿಸುವ ಕುರಿತು ಮಹತ್ವದ ಸಭೆ ನಗರದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆಯಿತು.ಒಕ್ಕಲಿಗ ಸಮುದಾಯದ ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಮುಖಂಡರು, ಸಮುದಾಯದ ಹಿರಿಯರು ಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಹಿಂದೆ ನಮಗೆ 14 ಪರ್ಸೆಂಟ್೧೪% ಮೀಸಲಾತಿ ನೀಡಲಾಗಿತ್ತು. ಆದರೆ ಅದನ್ನು ಈಗ ೪% ಇಳಿಸಲಾಗಿದೆ. ರಾಜ್ಯದಲ್ಲಿರುವ ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ … Continued

ಕೇಳಿದವರಿಗೆಲ್ಲ ಮೀಸಲಾತಿ ಭರವಸೆ ಹಾಸ್ಯಾಸ್ಪದ

ಮೈಸೂರು: ರಾಜಕಾರಣಿಗಳು ಕೇಳಿದವರಿಗೆಲ್ಲ ಮೀಸಲಾತಿಯ ಭರವಸೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಸಂಸದ ಶ್ರೀನಿವಾಸ ಪ್ರಸಾದ ಅಭಿಪ್ರಾಯಪಟ್ಟಿದ್ದಾರೆ. ಮೀಸಲಾತಿ ಕುರಿತು ಸರ್ವೋಚ್ಚ ನ್ಯಾಯಲಯ ಏನು ನಿರ್ಧಾರ ತೆಗೆದುಕೊಂಡಿದೆ. ಕೇಂದ್ರದ ಅಧಿಕಾರವೇನು? ರಾಜ್ಯ ಸರಕಾರ ಏನು ಮಾಡಬೇಕೆಂಬ ಬಗ್ಗೆ ಯೋಚಿಸದೇ ಮೀಸಲಾತಿ ನೀಡುವ ಭರವಸೆ ನೀಡುತ್ತಿದ್ದಾರೆ ಎಂದರು. ಕರ್ನಾಟಕದಲ್ಲಿ ಮೀಸಲು ವಿವಾದ ಭುಗಿಲೆದ್ದಿದ್ದು, ಹಾದಿ ಬೀದಿಯಲ್ಲಿ ಮೀಸಲಾತಿ ಕುರಿತು … Continued