ಮೀಸಲಾತಿಗೆ ಬಡತನವೇ ಮಾನದಂಡವಾಗಲಿ:ಹೊರಟ್ಟಿ ಸಲಹೆ

ಬೆಂಗಳೂರು: ಮೀಸಲಾತಿ ಪಡೆಯಲು ಬಡತನ, ಆರ್ಥಿಕ ಪರಿಸ್ಥಿತಿಯೇ ಮಾನದಂಡವಾಗಬೇಕು. ಬಡವರಿಗೆ ಮೀಸಲಾತಿ ಸಿಗಬೇಕು ಎಂದು ವಿಧಾನಪರಿಷತ್‌ನ ಸಭಾಪತಿ ಬಸವರಾಜಹೊರಟ್ಟಿ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಕುರಿತಾದ ಚರ್ಚೆಗಳು ನಡೆದಿವೆ.ಕರ್ನಾಟಕದಲ್ಲಷ್ಟೇ ಅಲ್ಲ, ದೇಶಾದ್ಯಂತ ನಡೆದಿದೆ. ಎಲ್ಲ ಅರ್ಹ ಬಡವರಿಗೂ ಮೀಸಲಾತಿ ಸಿಗಬೇಕು. ರಾಜ್ಯದಲ್ಲೂ ವಿವಿಧ ಜಾತಿ, ಸಮುದಾಯಗಳು ಮೀಸಲಾತಿಗೆ ಹೋರಾಟ ನಡೆಸಿವೆ. ಆರ್ಥಿಕ ಪರಿಸ್ಥಿತಿ, ಬಡತನವೇ … Continued

೨ಎ ಮೀಸಲಾತಿಗೆ ಸೇರ್ಪಡೆ ಮಾಡಿ: ಬೆಂಗಳೂರು ಸಮಾವೇಶದಲ್ಲಿ ಪಂಚಮಸಾಲಿಗಳ ಹಕ್ಕೊತ್ತಾಯ

ಬೆಂಗಳೂರು: ೨ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಯಿತು. ಸಮಾವೇಶಕ್ಕೆ ವಿಶೇಷವಾಗಿ ಲಿಂಗಾಯತ ಪಂಚಮಸಾಲಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ಕಲಬುರಗಿ, ಬಾಗಲಕೋಟೆ, ವಿಜಯಪುರ,ಯಾದಗಿರಿ, ಬೀದರ್, ರಾಯಚೂರು,ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಮೊದಲಾದ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. … Continued

ಮೀಸಲಾತಿ ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಕಕ್ಕೆ ನಿರ್ಧಾರ

ಬೆಂಗಳೂರು: ಮೀಸಲಾತಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಬೀಸೋ ದೊಣ್ಣೆಯಿಂದ ಇದರಿಂದ ಪಾರಾಗಲು ಉನ್ನತ ಮಟ್ಟದ ಸಮಿತಿ ನೇಮಕ ಮಾಡಲು ಮುಂದಾಗಿದೆ. ವೀರಶೈವ ಲಿಂಗಾಯತರು, ಒಕ್ಕಲಿಗರು, ಪಂಚಮಸಾಲಿಗಳು, ಕುರುಬರು, ವಾಲ್ಮೀಕಿ ಮತ್ತಿತರ ಹಿಂದುಳಿದ ಸಮುದಾಯಗಳು ಮೀಸಲಾತಿಗಾಗಿ ಬಿಗಿಪಟ್ಟು ಹಿಡಿದು ಒತ್ತಡ ಹೇರುತ್ತಿರುವುದರಿಂದ ಎದುರಾಗಿರುವ ಸಂಕಷ್ಟದಿಂದ ಪಾರಾಗಲು ಸರ್ಕಾರ ಉನ್ನತ ಸಮಿತಿ ರಚಿಸಲು ಮುಂದಾಗಿದೆ. ಸಚಿವರುಗಳು, ನಿವೃತ್ತ … Continued

ಮೀಸಲಾತಿ : ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇಟ್ಟಿರುವ ಕುರಿತು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಸಚಿವರು ಸಮುದಾಯಗಳ ಬೇಡಿಕೆ ಕುರಿತಾಗಿ ಅಭಿಪ್ರಾಯಗಳನ್ನು ನನ್ನ ಬಳಿ ಹಂಚಿಕೊಂಡಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಣಯಗಳನ್ನು ಕೈಗೊಳ್ಳುವೆ ಎಂದರು. ವಿವಿಧ ಸಮುದಾಯಗಳಿಗೆ … Continued

ಈಗ ಮೀಸಲಾತಿ ಹೋರಾಟಕ್ಕೆ ಸಜ್ಜಾದ ಒಕ್ಕಲಿಗರು

ಬೆಂಗಳೂರು: ಕುರುಬ, ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೋರಾಟಕ್ಕೆ ಸನ್ನದ್ಧಗೊಂಡಿದೆ. ಒಕ್ಕಲಿಗ ಸಮುದಾಯ ಎಲ್ಲಾ 115 ಉಪ ಪಂಗಡಗಳನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು ಎಂದು ಸಮುದಾಯದ ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರದೇ ಇದ್ದರೆ ಆದಿ … Continued

ಮೀಸಲಾತಿ ಹೋರಾಟ : ಕಾನೂನು ಚೌಕಟ್ಟಿನಲ್ಲಿ ಎಲ್ಲರಿಗೂ ಅವಕಾಶ

ದಾವಣಗೆರೆ:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ನಡೆಸುತ್ತಿರು ಹೋರಾಟ ನ್ಯಾಯಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ರವಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಅವರಿಗೆ ಹೇಗೆ ಮೀಸಲಾತಿ ಕಲ್ಪಿಸಬೇಕು ಎನ್ನುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಅವರು ಭರವಸೆ ನೀಡಿದ್ದಾರೆ. ವೀರಶೈವ- ಲಿಂಗಾಯತ, ವಾಲ್ಮೀಕಿ, ಕುರುಬ ಸಮುದಾಯ ಸೇರಿದಂತೆ ಮೀಸಲಾತಿಗಾಗಿ ಹೋರಾಟ … Continued

ಮೀಸಲಾತಿ ಬೇಡಿಕೆ: ಕಾನೂನು ಚೌಕಟ್ಟಿನೊಳಗೆ ನ್ಯಾಯ ಒದಗಿಸುವ ಭರವಸೆ

ಮೈಸೂರು:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿ ಹೋರಾಟ ಆರಂಭಿಸಿವೆ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ‌ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮೀಸಲಾತಿ ಹೋರಾಟ ಸಂಬಂಧ ತಜ್ಞರ ಜೊತೆ ಚರ್ಚೆಗಳು ನಡೆದಿವೆ. ಎಲ್ಲ ಸಮುದಾಯಗಳಿಗೆ ಕಾನೂನು ಚೌಕಟ್ಟಿನಲ್ಲಿ ಏನೆಲ್ಲ ಸಾಧ್ಯವೂ ಅದನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.. ಮೀಸಲಾತಿಗಾಗಿ ನಾಯಕ, ಕುರುಬ, ವೀರಶೈವ ಪಂಚಮ‌ಸಾಲಿ ಸೇರಿದಂತೆ … Continued

ಹೆಚ್ಚುತ್ತಿರುವ ಮೀಸಲಾತಿ ಪಾದಯಾತ್ರೆ ರೋಗಕ್ಕೆ ಸದ್ಯ ಔಷಧವಿಲ್ಲ: ಹೊರಟ್ಟಿ

ತುಮಕೂರು:ಮೀಸಲಾತಿ ಬಗ್ಗೆ ಮಾತನಾಡುವುದು ಬಹಳ ಕಷ್ಟದ ಕೆಲಸ. ಯಾರಿಗೆ ಏನು ಸೌಲಭ್ಯ ಕೊಡಬೇಕು ಎಂಬ ಬಗ್ಗೆ ಸರ್ಕಾರ ವಿಚಾರ ಮಾಡುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.. ಶುಕ್ರವಾರ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ … Continued

ಮೀಸಲು ಚರ್ಚೆಗೆ ಅವಕಾಶಕ್ಕೆ ಒತ್ತಾಯಿಸಿ ಸದನದಲ್ಲಿ ಧರಣಿ

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸಮುದಾಯವರು ಮೀಸಲಾತಿಗಾಗಿ ನಡೆಸುತ್ತಿರುವ ಪಾದಯಾತ್ರೆ ಕುರತು ಚರ್ಚೆಗೆ ಅವಕಾಶ ನೀಡುವಂತೆ ಹಾಗೂ ಅವರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸುವಂತೆ ಒತ್ತಾಯಿಸಿ ಆಡಳಿತ ಪಕ್ಷದವರು  ಪ್ರತಿಪಕ್ಷ ಸದಸ್ಯರ ಜತೆಗೆ ಧರಣಿಗೆ ನಡೆಸಿರುವುದಕ್ಕೆ ಮಂಗಳವಾರ ಸಾಕ್ಷಿಯಾಯಿತು. ಶೂನ್ಯವೇಳೆಯಲ್ಲಿ ಬಿಜೆಪಿಯ ರೆಬೆಲ್‌ ಶಾಸಕ ಎಂದೇ ಗುರುತಿಸಿಕೊಂಡಿರುವ  ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಪ್ರಸ್ತಾಪಿಸಿದರು. ಪಂಚಮಸಾಲಿಗರನ್ನು 2ಎಗೆ ಸೇರಿಸಬೇಕು … Continued