ವಸತಿ ಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರ

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ ತಾಲೂಕಿನ ಜಪತಲಾಯಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಶಂಕಿತ ಹಾವು ಕಡಿತದ ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ 14 ವಿದ್ಯಾರ್ಥಿನಿಯರನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ ಎಂದು ಹೇಳಲಾಗಿದೆ. ಜಪತಲಾಯಿ ಗ್ರಾಮದ ಕುಪರ್ಲಿಂಗೋ ಎಜುಕೇಷನಲ್ ಆ್ಯಂಡ್ ಕಲ್ಚರಲ್ ಡೆವಲಪ್‌ಮೆಂಟ್ … Continued

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿಷೇಧ ಆದೇಶ ವಾಪಸ್…

ಬೆಂಗಳೂರು: ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ನಂತಹ ಯಾವುದೇ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು  ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹೊರಡಿಸಿದ್ದ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈಗ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. … Continued