ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ

ಮುಂಬೈ: ಶನಿವಾರ ಪ್ರಕಟವಾದ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ ಭಾರೀ ಸೋಲು ಕಂಡ ನಂತರ ಮಹಾರಾಷ್ಟ್ರದಲ್ಲಿ ವಿಪಕ್ಷಗಳ ವಲಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿದ್ದ 103 ಸ್ಥಾನಗಳಲ್ಲಿ ಕೇವಲ 16 ಸ್ಥಾನಗಳನ್ನು ಗೆದ್ದ ನಂತರ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. … Continued

ಆಮ್‌ ಆದ್ಮಿ ಪಕ್ಷಕ್ಕೆ ಆಘಾತ ; ದೆಹಲಿ ಸಚಿವ ಸ್ಥಾನಕ್ಕೆ, ಎಎಪಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಕೈಲಾಶ ಗೆಹ್ಲೋಟ್‌

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಭಾರಿ ಆಘಾತಕಾರಿ ಬೆಳವಣಿಗೆಯಲ್ಲಿ ಹಿರಿಯ ನಾಯಕ ಹಾಗೂ ದೆಹಲಿಯ ಸರ್ಕಾರದಲ್ಲಿ ಸಚಿವರಾಗಿದ್ದ ಕೈಲಾಶ ಗಹ್ಲೋಟ್ ಅವರು ಭಾನುವಾರ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಜೀನಾಮೆ ನೀಡಿದ್ದಾರೆ. “ಮುಜುಗರದ ಮತ್ತು ವಿಚಿತ್ರವಾದ ವಿವಾದಗಳು” ಮತ್ತು ನಾಗರಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಅರವಿಂದ ಕೇಜ್ರಿವಾಲ್ ಮತ್ತು ಅತಿಶಿ ಸರ್ಕಾರದ … Continued

ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

ಚಂಡೀಗಢ: ಅಕಾಲ್ ತಖ್ತ್‌ನಿಂದ ‘ತಂಖೈಯಾ’ (ಧಾರ್ಮಿಕ ದುರ್ನಡತೆ ಅಪರಾಧಿ) ಎಂದು ಘೋಷಿಸಲ್ಪಟ್ಟ ಸುಖಬೀರ್ ಸಿಂಗ್ ಬಾದಲ್ ಅವರು ಶಿರೋಮಣಿ ಅಕಾಲಿದಳದ (ಎಸ್‌ಎಡಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ದಲ್ಜಿತ್ ಸಿಂಗ್ ಚೀಮಾ ಶನಿವಾರ ಹೇಳಿದ್ದಾರೆ. ಅವರ ರಾಜೀನಾಮೆಯು ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆಗೆ ದಾರಿ ಮಾಡಿಕೊಟ್ಟಿದೆ. ಬಾದಲ್ ಅವರು ಪಕ್ಷದ … Continued

ಸ್ವಪಕ್ಷದ ಸಂಸದರಿಂದಲೇ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆಗೆ ಒತ್ತಾಯ ; ಅಕ್ಟೋಬರ್ 28ರ ವರೆಗೆ ಗಡುವು

ಒಟ್ಟಾವಾ: ಸಿಬಿಸಿ ನ್ಯೂಸ್‌ನ ವರದಿಯ ಪ್ರಕಾರ, ಸಂಸತ್ತಿನ ಹಿಲ್‌ನಲ್ಲಿ ಸಭೆ ನಡೆಸಿದ್ದ ಲಿಬರಲ್ ಪಕ್ಷದ ಸಂಸದರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಸಭೆಯ ಸಮಯದಲ್ಲಿ, ಭಿನ್ನಮತೀಯ ಸಂಸದರು ಟ್ರುಡೊಗೆ ತಮ್ಮ ಆಕ್ಷೇಪಗಳನ್ನು ತಿಳಿಸಿದ್ದಾರೆ. ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಇದು ಟ್ರುಡೊ ಪಕ್ಷದೊಳಗೆ ಅವರ ಬಗ್ಗೆ ಹೆಚ್ಚುತ್ತಿರುವ ಅಸಮಾಧಾನವನ್ನು … Continued

ವಿಧಾನ ಪರಿಷತ್‌ ಸ್ಥಾನಕ್ಕೆ ಬಿಜೆಪಿಯ ಸಿ.ಪಿ.ಯೋಗೇಶ್ವರ ರಾಜೀನಾಮೆ…!

ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ. ಯೋಗೇಶ್ವರ ಅವರು ಸೋಮವಾರ ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು, ಸೋಮವಾರ ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು … Continued

ಸಿದ್ದರಾಮಯ್ಯ ಕುಟುಂಬದ ಸೈಟ್‌ ವಿವಾದದ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರಿಗೌಡ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಇತರ ಸದಸ್ಯರ ಮೇಲಿನ ಮುಡಾ ಭೂ ಹಗರಣದ ಆರೋಪಗಳ ಕುರಿತು ಲೋಕಾಯುಕ್ತ ತನಿಖೆ ನಡೆಯುತ್ತಿರುವ ಮಧ್ಯೆಯೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದ ಅಧ್ಯಕ್ಷ ಕೆ. ಮರಿಗೌಡ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌ … Continued

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ದಿಢೀರ್‌ ರಾಜೀನಾಮೆ

ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕಿನ 14 ನಿರ್ದೇಶಕರು ರಮೇಶ ಕತ್ತಿ ಕರೆದ ಸಭೆಗೆ ಗೈರಾಗಿ ಪ್ರತ್ಯೇಕವಾಗಿ ಸಭೆ ನಡೆಸಿ ರಮೇಶ ಕತ್ತಿ ವಿರುದ್ಧ ಅವಿಶ್ವಾಸಕ್ಕೆ ಮುಂದಾಗಿದ್ದ ಹಿನ್ನೆಲೆಯಲ್ಲಿ ರಮೇಶ ಕತ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನ ಬ್ಯಾಂಕ್ ವ್ಯವಸ್ಥಾಪಕರಿಗೆ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ಎಎಪಿ ನಾಯಕಿ ಅತಿಶಿ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ: ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ನೂತನ ಮುಖ್ಯಮಂತ್ರಿ ಹುದ್ದೆಗೆ ಸಚಿವೆ ಆತಿಶಿ ಹೆಸರನ್ನು ಪ್ರಸ್ತಾಪಿಸಿದ್ದು, ಪಕ್ಷವು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರು ಜಾಮೀನು ಪಡೆದು ಹೊರಬಂದ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ದೆಹಲಿ ಜನತೆ ತಮ್ಮನ್ನು … Continued

ದೆಹಲಿ ಸಿಎಂ ಸ್ಥಾನಕ್ಕೆ ಮಂಗಳವಾರ ಅರವಿಂದ ಕೇಜ್ರಿವಾಲ್ ರಾಜೀನಾಮೆ ಸಾಧ್ಯತೆ ; ಮುಂದಿನ ಸಿಎಂ ಆಯ್ಕೆಗಾಗಿ ಸರಣಿ ಸಭೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆಪ್ಟೆಂಬರ್ 17) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಶಾಸಕ ಸೌರಭ ಭಾರದ್ವಾಜ ಹೇಳಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ಈ ವೇಳೆ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ. … Continued