ಲೋಕಸಭೆ ಚುನಾವಣೆ ಸನಿಹದಲ್ಲಿ ಜೆಡಿಎಸ್‌ ಗೆ ಶಾಕ್‌ : ವಿಧಾನ ಪರಿಷತ್ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

ಹುಬ್ಬಳ್ಳಿ: ವಿಧಾನ ಪರಿಷತ್ತಿನ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಗುರುವಾರ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕರಿಸಿದ್ದಾರೆ. ಮರಿತಿಬ್ಬೇಗೌಡರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ” ಎಂದು ಸಭಾಪತಿ ಹೊರಟ್ಟಿ ತಿಳಿಸಿದ್ದಾರೆ. ರಾಜೀನಾಮೆ … Continued

ಬಿಜೆಪಿಗೆ ರಾಜೀನಾಮೆ ನೀಡಿದ ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡ (BN Bachegowda) ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ, ʻʻನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಈ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ತಿಳಿಸಿದ್ದಾರೆ. 2008ರಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಶಾಸಕನಾಗಿ … Continued

ತೆಲಂಗಾಣ ರಾಜ್ಯಪಾಲರ ಹುದ್ದೆಗೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್‌ : ಲೋಕಸಭೆ ಚುನಾವಣೆಗೆ ಮುನ್ನ ತೆಲಂಗಾಣ ರಾಜ್ಯಪಾಲ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ತಮಿಳಿಸೈ ಸೌಂದರರಾಜನ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯನ್ನು ಪುದುಚೇರಿ ರಾಜಭವನ ಖಚಿತಪಡಿಸಿದೆ. ವರದಿಗಳ ಪ್ರಕಾರ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. “ತೆಲಂಗಾಣದ ಗೌರವಾನ್ವಿತ ರಾಜ್ಯಪಾಲರು ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ ತಮಿಳಿಸೈ ಸೌಂದರರಾಜನ್ … Continued

ಮಿತ್ರ ಪಕ್ಷಗಳಲ್ಲಿ ಬಿರುಕು : ಹರಿಯಾಣ ಸಿಎಂ ಮನೋಹರಲಾಲ ಖಟ್ಟರ್‌-ಸಚಿವರ ದಿಢೀರ್‌ ರಾಜೀನಾಮೆ…!

ನವದೆಹಲಿ: ಹರ್ಯಾಣದ ಬಿಜೆಪಿ ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಊಹಾಪೋಹಗಳ ನಡುವೆ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಹರ್ಯಾಣದಲ್ಲಿ ಈ ಬೆಳವಣಿಗೆ ನಡೆದಿದೆ. ಖಟ್ಟರ್ ಹಾಗೂ ಅವರ ಸಂಪುಟದ ಸಚಿವರು ರಾಜಭವನಕ್ಕೆ ತೆರಳಿ ರಾಜ್ಯಪಾಲ … Continued

ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ : ಬಿಜೆಪಿ ಸೇರುವೆ ಎಂದ ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ ಗಂಗೋಪಾಧ್ಯಾಯ

ನವದೆಹಲಿ: ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ ಗಂಗೋಪಾಧ್ಯಾಯ ಅವರು ಕೆಲವೇ ಗಂಟೆಗಳ ಹಿಂದೆ ರಾಜೀನಾಮೆ ನೀಡಿರುವುದನ್ನು ದೃಢಪಡಿಸಿದ್ದು, ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ. ಮಾರ್ಚ್ 7 ರಂದು ಮಧ್ಯಾಹ್ನದ ವೇಳೆಗೆ ಬಹುಶಃ ನಾನು ಬಿಜೆಪಿಗೆ ಸೇರುವ ಕಾರ್ಯಕ್ರಮವಿದೆ ಎಂದು ಅವರು ಹೇಳಿದರು. ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು … Continued

ಬಿಎಸ್‌ಪಿಗೆ ರಾಜೀನಾಮೆ ನೀಡಿದ ಸಂಸದ : ಬಿಜೆಪಿಗೆ ಸೇರ್ಪಡೆ

ನವದೆಹಲಿ: ಸಾರ್ವತ್ರಿಕ ಚುನಾವಣೆಗೆ ಮುನ್ನ ಮತ್ತೊಂದು ದೊಡ್ಡ ಪಕ್ಷಾಂತರದಲ್ಲಿ ಲೋಕಸಭೆ ಸಂಸದ ರಿತೇಶ ಪಾಂಡೆ ಅವರು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 42 ವರ್ಷದ ರಿತೇಶ ಪಾಂಡೆ ಅವರು ಉತ್ತರ ಪ್ರದೇಶದ ಅಂಬೇಡ್ಕರ ನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ತಂದೆ ರಾಕೇಶ ಪಾಂಡೆ ಉತ್ತರ ಪ್ರದೇಶ ವಿಧಾನಸಭೆಯಲ್ಲಿ … Continued

ಅಖಿಲೇಶ ಯಾದವ ಸಮಾಜವಾದಿ ಪಕ್ಷ ತೊರೆದ ಸ್ವಾಮಿ ಪ್ರಸಾದ ಮೌರ್ಯ

ಲಕ್ನೋ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಒಂದು ವಾರದ ನಂತರ, ಸ್ವಾಮಿ ಪ್ರಸಾದ ಮೌರ್ಯ ಮಂಗಳವಾರ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಉತ್ತರ ಪ್ರದೇಶ ವಿಧಾನ ಪರಿಷತ್ತಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. “ನನಗೆ ನಿಮ್ಮೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಆದರೆ ಫೆಬ್ರವರಿ 12 ರಂದು … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಲಾಲಬಹದ್ದೂರ ಶಾಸ್ತ್ರೀ ಮೊಮ್ಮಗ..

ನವದೆಹಲಿ: ಮಾಜಿ ಪ್ರಧಾನಿ ಲಾಲಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಮತ್ತೊಂದು ದೊಡ್ಡ ಹೊಡೆತವಾಗಿ, ಶಾಸ್ತ್ರಿ ಇಂದು, ಬುಧವಾರ ಮುಂಜಾನೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ತೊರೆದ ಕೆಲವು ಗಂಟೆಗಳ ನಂತರ ಅವರು ಭಾರತೀಯ ಜನತಾ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ: ಪಕ್ಷಕ್ಕೆ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ ಚವಾಣ ರಾಜೀನಾಮೆ ; 10-12 ಶಾಸಕರೊಂದಿಗೆ ಬಿಜೆಪಿ ಸೇರುವ ಸಾಧ್ಯತೆ

ಮುಂಬೈ: ಲೋಕಸಭೆ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವನೆಗೆ ತಿಂಗಳುಗಳ ಮೊದಲು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಸಂಸದ ಅಶೋಕ ಚವಾಣ ಅವರು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳ ನಡುವೆ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, ಮೂಲಗಳ … Continued

ನಿವೃತ್ತಿಗೂ ಎರಡು ತಿಂಗಳು ಮೊದಲೇ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ದಿಢೀರ್‌ ರಾಜೀನಾಮೆ

ಬೆಂಗಳೂರು : ಕರ್ನಾಟಕದ ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ಅವರು ನಿವೃತ್ತಿಗೂ ಎರಡು ತಿಂಗಳು ಮೊದಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರತಾಪ ರೆಡ್ಡಿ ಅವರು ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ವರ್ಷ ಮೇ ತಿಂಗಳಲ್ಲಿ ಅವರು ನಿವೃತ್ತರಾಗುತ್ತಿದ್ದರು. ಆದರೆ, ವೈಯಕ್ತಿಕ ಕಾರಣ ನೀಡಿ … Continued