ಕಾಂಗ್ರೆಸ್‌ ವಿದೇಶಾಂಗ ವ್ಯವಹಾರಗಳ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ನಾಯಕ ಆನಂದ ಶರ್ಮಾ ರಾಜೀನಾಮೆ

ನವದೆಹಲಿ: ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆನಂದ ಶರ್ಮಾ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುಮಾರು ಒಂದು ದಶಕದ ಕಾಲ ಅವರು ನಿರ್ವಹಿಸಿದ್ದ ಹುದ್ದೆಯಿಂದ ಕೆಳಗಿಳಿದಿದ್ದರೂ, ಶರ್ಮಾ ಅವರು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ … Continued

ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆಗೆ ಚುನಾವಣಾ ಆಯೋಗ ಶುಕ್ರವಾರ ದಿನಾಂಕ ನಿಗದಿ ಮಾಡಿದೆ. ಜಗದೀಪ ಧನಕರ ಅವರ ಹಠಾತ್ ರಾಜೀನಾಮೆಯ ನಂತರ ತೆರವಾದ ಸ್ಥಾನಕ್ಕೆ ಆಯ್ಕೆ ಮಾಡಲು ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಆಗಸ್ಟ್ 7 ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಮತ್ತು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 21 ಆಗಿದೆ. … Continued

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಖ್ಯೆಗಳ ಲೆಕ್ಕಾಚಾರ ಎನ್‌ಡಿಎಗೆ ಹೇಗೆ ಅನುಕೂಲಕರ..?

ನವದೆಹಲಿ: ಸೋಮವಾರ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಅನಿವಾರ್ಯವಾದ ಮುಂದಿನ ಉಪರಾಷ್ಟ್ರಪತಿಗಳ ಹುದ್ದೆಗೆ ನಡೆವ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ಸಂಖ್ಯಾಬಲವನ್ನು ಹೊಂದಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ. ಅಲ್ಲಿ ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ತಮ್ಮ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. 543 ಸದಸ್ಯರ ಲೋಕಸಭೆಯಲ್ಲಿ ಒಂದು … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅನಿರೀಕ್ಷಿತ ರಾಜೀನಾಮೆ ನಂತರದ ವದಂತಿಗಳು

ನವದೆಹಲಿ : ಸೋಮವಾರದ ಅಚ್ಚರಿಯ ನಡೆಯಲ್ಲಿ, 74 ವರ್ಷ ವಯಸ್ಸಿನ ಉಪರಾಷ್ಟ್ರಪತಿ ಜಗದೀಪ ಧನಕರ ಆರೋಗ್ಯದ ಕಾಳಜಿಯನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರು ನೀಡಿದ ಈ ಕಾರಣವನ್ನು ಒಪ್ಪುವವರು ಕಡಿಮೆ. ಇದರ ಹಿಂದೆ ಇದಕ್ಕೂ ಮಿಗಿಲಾದ ಕಾರಣಗಳಿವೆ ಎಂದು ಅನೇಕರು ಭಾವಿಸುತ್ತಾರೆ. ಧನಕರ ಅವರ ಅಧಿಕಾರಾವಧಿಯಲ್ಲಿ ಆಗಾಗ್ಗೆ ಅವರ ಜೊತೆ ಘರ್ಷಣೆ … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ರಾಜೀನಾಮೆ

ನವದೆಹಲಿ: ಆರೋಗ್ಯದ ಕಾಳಜಿ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ಉಲ್ಲೇಖಿಸಿ ಜಗದೀಪ ಧನಕರ ಅವರು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ, ಧನಕರ ಅವರು ತಮ್ಮ ರಾಜೀನಾಮೆಯನ್ನು ಭಾರತದ ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿರುವುದಾಗಿ ತಿಳಿಸಿದ್ದಾರೆ. 2022 ರಿಂದ ಉಪರಾಷ್ಟ್ರಪತಿಗಳಾಗಿರುವ 74 … Continued

ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ

ಮಂಗಳೂರು : ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಕರ್ನಾಟಕ ಬ್ಯಾಂಕ್‌ನ ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಕಾರ್ಯಕಾರಿ ನಿರ್ದೇಶಕ ಶೇಖರ ರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಬ್ಯಾಂಕಿನ ಆಡಳಿತ ಮಂಡಳಿಯು ಈ ಸ್ಥಾನಗಳಿಗೆ ಹೊಸಬರನ್ನು ನೇಮಿಸಲು ಶೋಧನಾ ಸಮಿತಿಯನ್ನು ರಚಿಸಿದೆ. ಕರ್ಣಾಟಕ ಬ್ಯಾಂಕ್‌ ಎಂಡಿ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ … Continued

ಬೆಂಗಳೂರು ಕಾಲ್ತುಳಿತದ ಘಟನೆ : ನೈತಿಕ ಹೊಣೆ ಹೊತ್ತು ಕೆಎಸ್‌ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು :  ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ … Continued

ಯತ್ನಾಳ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ : ಆದರೆ…

ಬೆಂಗಳೂರು: ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರ ಸವಾಲು ಸ್ವೀಕರಿಸಿರುವ ಶಿವಾನಂದ ಪಾಟೀಲ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದು, ಯತ್ನಾಳ ವಿರುದ್ಧ ತಾನು ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ. ಆದರೆ ಅದರಲ್ಲಿ ಒಂದು ಟ್ವಿಸ್ಟ್‌ ಇದೆ. … Continued

ಸರಪಂಚ ಹತ್ಯೆ ಪ್ರಕರಣ ; ಆಪ್ತ ಸಹಾಯಕನ ಬಂಧನದ ನಂತರ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ

ಮುಂಬೈ: ಮಹಾರಾಷ್ಟ್ರದ ಬೀಡ್‌ನ ಸರಪಂಚ ಸಂತೋಷ ದೇಶಮುಖ್‌ ಅವರ ಹತ್ಯೆ ಪ್ರಕರಣದಲ್ಲಿ ಎನ್‌ಸಿಪಿ ನಾಯಕ ಹಾಗೂ ಸಚಿವ ಧನಂಜಯ ಮುಂಡೆ ಅವರ ಆಪ್ತ ಸಹಾಯಕ ವಾಲ್ಮಿಕ ಕರಾಡ್‌ ನನ್ನು ಆರೋಪಿ ಎಂದು ಪೊಲೀಸರು ಉಲ್ಲೇಖಿಸಿದ ನಂತರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಮಂಗಳವಾರ ಹೇಳಿದ್ದಾರೆ. ಫಡ್ನವೀಸ್ … Continued

ಬಿರೇನ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ನವದೆಹಲಿ: ಎನ್ ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡಿದ ಮೂರು ದಿನಗಳ ನಂತರವೂ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒಮ್ಮತ ಮೂಡದ ಕಾರಣ ಮಣಿಪುರವನ್ನು ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲಾಗಿದೆ. ರಾಜ್ಯ ವಿಧಾನಸಭೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿ ಇಡಲಾಗಿದೆ. ಭಾನುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರದಿಂದ ಆರಂಭವಾಗಬೇಕಿದ್ದ ಬಜೆಟ್ ಅಧಿವೇಶನವನ್ನು ರಾಜ್ಯಪಾಲ … Continued