ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ಬಿಜೆಪಿ ನಾಯಕಿ- ನಟಿ ಖುಷ್ಬು ರಾಜೀನಾಮೆ

ಚೆನ್ನೈ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಖ್ಯಾತ ನಟಿ ಖುಷ್ಬು ಸುಂದರ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಜೂನ್ 28 ರಿಂದ ಜಾರಿಗೆ ಬರುವಂತೆ ನಟಿ ಖುಷ್ಬು ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಇದು ಹಠಾತ್ ನಿರ್ಧಾರವಲ್ಲ. ನಾನು ಅದರ ಬಗ್ಗೆ ಸ್ವಲ್ಪ ಸಮಯ … Continued

ಬಾಂಗ್ಲಾದೇಶ ಬಿಕ್ಕಟ್ಟು | ಸುಪ್ರೀಂ ಕೋರ್ಟಿಗೆ ಮುತ್ತಿಗೆ ; ನ್ಯಾಯಾಂಗಕ್ಕೂ ಬೆದರಿಕೆ ; ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಢಾಕಾ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಬಾಂಗ್ಲಾದೇಶದ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಅವರು ಶನಿವಾರ (ಆಗಸ್ಟ್‌ 10) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಲು ಪ್ರತಿಭಟನಾಕಾರರು ಗಡುವು ನೀಡಿದ ನಂತರ “ತಾತ್ವಿಕವಾಗಿ” ರಾಜೀನಾಮೆ ನೀಡಲು ಹಸನ್ ಅವರು ಒಪ್ಪಿಕೊಂಡರು. ಅವರು ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. … Continued

ಯುಪಿಎಸ್‌ಸಿ ಅಧ್ಯಕ್ಷ ಮನೋಜ ಸೋನಿ ರಾಜೀನಾಮೆ

ನವದೆಹಲಿ; ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಧ್ಯಕ್ಷ ಮನೋಜ ಸೋನಿ ಅವರು ಮೇ 2029 ರಲ್ಲಿ ತಮ್ಮ ಅಧಿಕಾರಾವಧಿಯು ಮುಕ್ತಾಯಗೊಳ್ಳುವ ಮೊದಲು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರಸುತ್ತಲಿನ ವಿವಾದಗಳು ಮತ್ತು ಆರೋಪಗಳಿಗೂ ಅವರ ರಾಜೀನಾಮೆಗೂ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ ಎಂದು … Continued

ಚುನಾವಣೆ ವೇಳೆ ಮಾಡಿದ್ದ ವಾಗ್ದಾನದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಜಸ್ಥಾನದ ಸಚಿವ ಕಿರೋಡಿ ಲಾಲ ಮೀನಾ

ಜೈಪುರ: ಬಿಜೆಪಿ ನಾಯಕ ಕಿರೋಡಿ ಲಾಲ ಮೀನಾ ಅವರು ರಾಜಸ್ಥಾನದ ತಮ್ಮ ಸಚಿವ ರಾಜೀನಾಮೆ ನೀಡಿರುವುದಾಗಿ ಗುರುವಾರ ಹೇಳಿದ್ದಾರೆ. ಬಿಜೆಪಿ ಪಕ್ಷವು ತನ್ನ ಉಸ್ತುವಾರಿಯಲ್ಲಿರುವ ಏಳು ಲೋಕಸಭಾ ಸ್ಥಾನಗಳಲ್ಲಿ ಯಾವುದಾದರು ಒಂದು ಸ್ಥಾನ ಕಳೆದುಕೊಂಡರೆ ರಾಜೀನಾಮೆ ನೀಡುವುದಾಗಿ ಾವರು ಹೇಳಿದ್ದರು. ಅದರಂತೆ ಅವರು ರಾಜೀನಾಮೆ ನೀಡಿದ್ದಾರೆ ಎಂದು ಅವರ ಸಹಾಯಕ ಗುರುವಾರ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ … Continued

ಶಾಸಕ ಸ್ಥಾನಕ್ಕೆ ಎಚ್‌.ಡಿ.ಕುಮಾರಸ್ವಾಮಿ, ಇ.ತುಕಾರಾಂ ರಾಜೀನಾಮೆ

ಬೆಂಗಳೂರು : ಕೇಂದ್ರದ ಎನ್​​ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಜೆಡಿಎಸ್ ನಾಯಕ ಎಚ್.​ಡಿ. ಕುಮಾರಸ್ವಾಮಿ ಹಾಗೂ ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌‍ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿ ಅಧಿಕಾರ … Continued

ಪ್ರಜ್ವಲ್‌ ರೇವಣ್ಣ ಪ್ರಕರಣ: ಹೆಚ್ಚುವರಿ ಎಸ್‌ಪಿಪಿ ಹುದ್ದೆಗೆ ಹಿರಿಯ ವಕೀಲೆ ಜಯ್ನಾ ಕೊಠಾರಿ ರಾಜೀನಾಮೆ

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಹಾಗೂ ಈ ಸಂಬಂಧ ವಿಶೇಷ ತನಿಖಾ ದಳವು (ಎಸ್‌ಐಟಿ) ನಡೆಸುತ್ತಿರುವ ಪ್ರಕರಣಗಳಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸಲು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕವಾಗಿದ್ದ ಹಿರಿಯ ವಕೀಲೆ ಜಯ್ನಾ ಕೊಠಾರಿ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಗೃಹ ಇಲಾಖೆಯ ಉಪಕಾರ್ಯದರ್ಶಿಗೆ ಜಯನಾ … Continued

ಪ್ರಧಾನಿ ಮೋದಿ ಸಂಪುಟಕ್ಕೆ ಸುರೇಶ ಗೋಪಿ ರಾಜೀನಾಮೆ? ಕೇರಳ ಸಂಸದ ಹೇಳಿದ್ದೇನು..?

ನವದೆಹಲಿ: ಕೇಂದ್ರ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ ಗೋಪಿ ಅವರು ತಾನು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾಧ್ಯಮ ವರದಿಯಾಗಿದ್ದನ್ನು ತಳ್ಳಿಹಾಕಿದ್ದಾರೆ ಹಾಗೂ ಅದು ತಪ್ಪು ಸುದ್ದಿ ಎಂದು ಹೇಳಿದ್ದಾರೆ. ಕೆಲ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ತಳ್ಳಿಹಾಕಿರುವ ಸುರೇಶ ಗೋಪಿ, ಸೋಮವಾರ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, … Continued

ವಾಲ್ಮೀಕಿ ನಿಗಮ ಹಗರಣ; ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ನಾಗೇಂದ್ರ

ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ. ತಾನು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ಆರೋಪದ … Continued

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ..?

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಗುರುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಸೂಚಿಸಿದ್ದರಿಂದ ಇಂದೇ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ವಾಲ್ಮೀಕಿ … Continued

ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

ರಾಯ್ಪುರ: ಕಾಂಗ್ರೆಸ್ಸಿನ ಛತ್ತೀಸ್‌ಗಢದ ರಾಜ್ಯ ಘಟಕದಲ್ಲಿ ತನಗೆ ಮೌಖಿಕ ನಿಂದನೆ, ಅವಮಾನ ಮತ್ತು ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೆಲವು ದಿನಗಳ ನಂತರ, ಕಾಂಗ್ರೆಸ್ ನಾಯಕಿ ಹಾಗೂ ರಾಷ್ಟ್ರೀಯ ಮಾಧ್ಯಮ ಸಂಯೋಜಕಿ ರಾಧಿಕಾ ಖೇರಾ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು … Continued