ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಮಾನನಷ್ಟ ಮೊಕದ್ದಮೆಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ಉಲ್ಲೇಖಿಸಿದೆ. ನಿರಂತರ ಕಾನೂನು ಹೋರಾಟದಿಂದ ಇಬ್ಬರೂ ಅಧಿಕಾರಿಗಳು ಪರಸ್ಪರರ ವೃತ್ತಿ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ವಿವಾದವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ. … Continued

ಪರಿಸರ ಸ್ನೇಹಿ ಕೈಚೀಲ ಖರೀದಿ ಪ್ರಕರಣ : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ

ಬೆಂಗಳೂರು: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ (bag purchase) ಆರೋಪಿತ ಹಗರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತನಿಖೆ ಕೋರಿ ಮೈಸೂರಿನ ವಕೀಲ ಎನ್.ಆರ್.ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠವು, ಮೈಸೂರು ಜಿಲ್ಲೆಯ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ … Continued

ಬಡ್ತಿ ಕೋರಿಕೆ: ಎರಡು ತಿಂಗಳಲ್ಲಿ ಐಪಿಎಸ್‌ ಅಧಿಕಾರಿ ರೂಪಾ ಮನವಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹೊಸದಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಹಿರಿಯ ಪೊಲೀಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದ್ದು, ಎರಡು ತಿಂಗಳಲ್ಲಿ ಮೌದ್ಗಿಲ್‌ ಮನವಿಯನ್ನು ಕಾನೂನಿನ ಅನ್ವಯ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶಿಸಿದೆ. ಐಎಎಸ್‌ ಅಧಿಕಾರಿ ರೋಹಿಣಿ … Continued

ʼಒನ್ ಮಿನಿಟ್ ಅಪಾಲಜಿʼ ಪುಸ್ತಕವನ್ನು ಓದಿ ; ಡಿ.ರೂಪಾ, ರೋಹಿಣಿ ಸಿಂಧೂರಿಗೆ ನ್ಯಾಯಾಲಯ ಸಲಹೆ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ ಎಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಬುಧವಾರ ಅಭಿಪ್ರಾಯಪಟ್ಟಿದೆ. ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ … Continued

ರೂಪಾ ವಿರುದ್ಧದ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಒಪ್ಪಲ್ಲ ; ಸುಪ್ರೀಂ ಕೋರ್ಟ್‌ಗೆ ತಿಳಿಸಿದ ರೋಹಿಣಿ ಸಿಂಧೂರಿ

ನವದೆಹಲಿ: ಕರ್ನಾಟಕದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಮನವಿ ಹಿಂಪಡೆಯುವುದಕ್ಕೆ ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. ಪ್ರಕರಣ ಇತ್ಯರ್ಥಗೊಳಿಸಲು ಎರಡೂ ಕಡೆಯವರಿಗೆ ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಮತ್ತು ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಮುಂದಾಗುವುದಾಗಿ … Continued

ಜಮೀನು ಒತ್ತುವರಿ ಆರೋಪ ; ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಖ್ಯಾತ ಬಾಲಿವುಡ್ ಗಾಯಕ

ಬೆಂಗಳೂರು: ಭೂಮಿ ಒತ್ತುವರಿ ಮಾಡಿದ ಆರೋಪದಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ವಿರುದ್ಧ ಬಾಲಿವುಡ್ ಗಾಯಕ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಲಹಂಕ ನ್ಯೂಟೌನ್​ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ ಹಾಗು ಪತಿ ಸುಧೀರ ರೆಡ್ಡಿ ಸೇರಿದಂತೆ ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ, ಸರ್ವೇಯರ್ … Continued

ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣ: ಡಿ.ರೂಪಾಗೆ ಜಾಮೀನು ನೀಡಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ

ಬೆಂಗಳೂರು : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮಾನಹಾನಿ ಪ್ರಕರಣದ ಸಂಬಂಧ ರೂಪಾ ಅವರಿಗೆ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿತ್ತು. ವಿಚಾರಣೆಯನ್ನು 24ನೇ … Continued