ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು

ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Sacred Thread) ತೆಗೆಸಿದ ಪ್ರಕರಣ ರಾಜ್ಯದಲಲಿ ಹಸಿರಾಗಿರುವಾಗಲೇ ನೀಟ್ ಪರೀಕ್ಷೆಯಲ್ಲೂ (NEET Exam) ಅಧಿಕಾರಿಗಳು ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ … Continued

ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ

ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ (Railway Recruitment Board) ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ (RRB Exam) ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರೈಲ್ವೆ ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು (Mangalsutra) ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ … Continued

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆರೋಪಿತ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಶನಿವಾರ ಆದೇಶಿಸಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ … Continued

ಧಾರವಾಡದಲ್ಲೂ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ…!?

ಧಾರವಾಡ : ಶಿವಮೊಗ್ಗ, ಬೀದರ ಬಳಿಕ ಇದೀಗ ಧಾರವಾಡದಲ್ಲಿಯೂ ಜನಿವಾರ ಕತ್ತರಿಸಿ ನಂತರ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆ ನಡೆದಿದೆ ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಧಾರವಾಡ ನಗರದ ಜೆಎಸ್‌ಎಸ್ (JSS) ಕಾಲೇಜಿನ ವಿದ್ಯಾರ್ಥಿ ನಂದನ್ ಏರಿ ಎಂಬವರು … Continued

ಜನಿವಾರ ವಿವಾದ | ವಿದ್ಯಾರ್ಥಿ ಸುಚಿವ್ರತಗೆ ಭೀಮಣ್ಣ ಖಂಡ್ರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಉಚಿತ ಪ್ರವೇಶ; ಸಚಿವ ಈಶ್ವರ ಖಂಡ್ರೆ

ಬೀದರ : ಜನಿವಾರ ತೆಗೆಯದ ಕಾರಣಕ್ಕೆ ಸಿಇಟಿ ಗಣಿತ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ ವಿದ್ಯಾರ್ಥಿ ಸುಚಿವ್ರತ ಪರೀಕ್ಷೆ ವಂಚಿತರಾಗಿದ್ದು, ಈ ಹಿನ್ನೆಲೆಯಲ್ಲಿ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದ್ದಾರೆ. ಇಂದು, ಭಾನುವಾರ ಬೆಳಿಗ್ಗೆ ಸಚಿವ … Continued

ಜನಿವಾರ ವಿವಾದ; ಸಿಇಟಿ ವಂಚಿತ ವಿದ್ಯಾರ್ಥಿ ಮತ್ತೊಮ್ಮೆ ಪರೀಕ್ಷೆ ಬರೆಯುವ ಬಗ್ಗೆ ಸೂಕ್ತ ಕ್ರಮ

ಬೆಂಗಳೂರು: ಬೀದರ ಮತ್ತು ಶಿವಮೊಗ್ಗದಲ್ಲಿ ಇಬ್ಬರು ಅಭ್ಯರ್ಥಿಗಳಿಗೆ ಸಿಇಟಿ (CET 2025) ವೇಳೆ ಜನಿವಾರ ತೆಗೆಸಿದ ಘಟನೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೇ ಪರೀಕ್ಷೆ ವಂಚಿತ ವಿದ್ಯಾರ್ಥಿಗೆ ಮರು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಪರೀಕ್ಷೆ ವಂಚಿತ ಬೀದರ ವಿದ್ಯಾರ್ಥಿಗೆ ಮತ್ತೊಮ್ಮೆ ಸಿಇಟಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಾಗುವುದು ಎಂದು … Continued

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ್ದಕ್ಕೆ ಬ್ರಾಹ್ಮಣ ಮಹಾಸಭಾ ಆಕ್ಷೇಪ

ಶಿವಮೊಗ್ಗ : ಏಪ್ರಿಲ್ 16 ರಂದು ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಕೇಂದ್ರಕ್ಕೆ ಪ್ರವೇಶಿಸುವಾಗ ವಿದ್ಯಾರ್ಥಿಗಳು ಧರಿಸಿದ್ದ ‘ಜನಿವಾರ’ವನ್ನು ಭದ್ರತಾ ಸಿಬ್ಬಂದಿ ಬಲವಂತವಾಗಿ ಹೊರತೆಗೆಸಿದ್ದಾರೆ ಎಂದು ಅಖಿಲ ಭಾರತ ಬ್ರಾಹ್ಮಣ ಸಭಾ ಹಾಗೂ ವಿವಿಧ ಬ್ರಾಹ್ಮಣ ಸಂಘಗಳು ಆರೋಪಿಸಿವೆ. ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ ನೇತೃತ್ವದ ಬ್ರಾಹ್ಮಣ ಸಮುದಾಯದ ನಿಯೋಗವು ಗುರುವಾರ … Continued