ಸಲ್ಮಾನ್ ಖಾನಗೆ ಜೀವ ಬೆದರಿಕೆ ಪ್ರಕರಣ ; ಮುಂಬೈ ಪೊಲೀಸರಿಂದ ರಾಯಚೂರಿನ ಯುವಕ ವಶಕ್ಕೆ

ಮುಂಬೈ : ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಟೋಯಿ ಹೆಸರಲ್ಲಿ ನಟ ಸಲ್ಮಾನ್ ಖಾನ್‌ ಜೀವ ಬೆದರಿಕೆ ಹಾಕಿ 5 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ ಮಾನ್ವಿಯ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಿಷ್ಟೋಯಿ ಹೆಸರಲ್ಲಿ ಸಲ್ಮಾನ್ ಖಾನ್‌ ಗೆ ಬೆದರಿಕೆ ಹಾಕಿ ಬಂಧನಕ್ಕೆ ಒಳಗಾದ ಈ ವ್ಯಕ್ತಿಯನ್ನು … Continued

ಈಗ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನಗೆ ಜೀವ ಬೆದರಿಕೆ ; 50 ಲಕ್ಷ ರೂ. ಹಣದ ಬೇಡಿಕೆ

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಕುರಿತು ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ. ಛತ್ತೀಸ್‌ಗಢದ ರಾಯ್ಪುರ ನಿವಾಸಿ ಫೈಜಾನ್ ಎಂಬಾತ ಬೆದರಿಕೆ ಕರೆ ಮಾಡಿದ್ದಾನೆ ಎಂದು ಎನ್ನಲಾಗಿದೆ. ಮುಂಬೈ ಪೊಲೀಸ್ ತಂಡವು ತನಿಖೆಗಾಗಿ ರಾಯಪುರಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. … Continued

ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ ಪ್ರಕರಣ: ಹಾವೇರಿಯಲ್ಲಿ ಆರೋಪಿ ಬಂಧನ

ಹಾವೇರಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿ​ಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ ಎಂಬಾತನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮನನ್ನು ಬಂಧಿಸಿದ್ದು, ಬಳಿಕ ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ರಾಜಸ್ತಾನ ಮೂಲದ ಬಿಕಾರಾಮ, ಒಂದೂವರೆ ತಿಂಗಳ ಹಿಂದೆ ಹಾವೇರಿಗೆ ಬಂದಿದ್ದ … Continued

“ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಅಥವಾ ₹ 5 ಕೋಟಿ ಪಾವತಿಸಿ”: ಸಲ್ಮಾನ್ ಖಾನಗೆ ಮತ್ತೊಂದು ಬೆದರಿಕೆ

ನವದೆಹಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ವಿರುದ್ಧ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ ಎಂದು ಮೂಲಗಳು ತಿಳಿಸಿವೆ. ಜೀವಂತವಾಗಿರಬೇಕಾದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಅಥವಾ ₹ 5 ಕೋಟಿ ಪಾವತಿಸಿ ಎಂದು ಬೆದರಿಕೆ ಸಂದೇಶದಲ್ಲಿ ನಟ ಸಲ್ಮಾನ್‌ ಖಾನ್‌ಗೆ ಎರಡು ಆಯ್ಕೆಗಳನ್ನು ನೀಡಲಾಗಿದೆ. ಒಂದು ವಾರದಲ್ಲಿ ಸಲ್ಮಾನ್ ಖಾನ್ ಗೆ ಬಂದ … Continued

ನಟ ಸಲ್ಮಾನ್‌ ಖಾನಗೆ ಜೀವ ಬೆದರಿಕೆ ಪ್ರಕರಣ ; ಆರೋಪಿ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಮುಂಬೈನ ಬಾಂದ್ರಾದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ 2 ಕೋಟಿ ರೂ.ಗಳಷ್ಟು ಹಣ ನೀಡದಿದ್ದರೆ ಸಲ್ಮಾನ್‌ ಖಾನ್‌ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಸಂದೇಶ ಬಂದಿತ್ತು. ಬೆದರಿಕೆ ಸಂದೇಶ ಬಂದ ಒಂದು ದಿನದ ನಂತರ ಬುಧವಾರ ಆ … Continued

ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಬೇಕು, ಲಾರೆನ್ಸ್ ಬಿಷ್ಣೋಯ್ ಬಳಿ ಕ್ಷಮೆ ಕೇಳಬೇಕು: ಜೀವ ಬೆದರಿಕೆ ಮಧ್ಯೆ ಬಾಲಿವುಡ್‌ ನಟನಿಗೆ ರಾಕೇಶ ಟಿಕಾಯತ್‌ ಸಲಹೆ

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳಿಂದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರಿಂದಕೊಲೆ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ನಟನಿಗೆ ಸುರಕ್ಷತೆಯನ್ನು ಖಾತ್ರಿಪಡಿಸಲು ಬಿಗಿ ಭದ್ರತೆ ನೀಡಲಾಗಿದ್ದರೂ, ರೈತ ನಾಯಕ ರಾಕೇಶ ಟಿಕಾಯತ್‌ ಅವರು ಸಲ್ಮಾನ್ ಅವರು ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಎಂದು ಸೂಚಿಸಿದ್ದಾರೆ. ಸಂದರ್ಶನವೊಂದರಲ್ಲಿ, ರಾಕೇಶ ಟಿಕಾಯತ್‌ … Continued

ನೀವು ಜೀವಂತವಾಗಿ ಇರಬೇಕೆಂದರೆ ₹ 5 ಕೋಟಿ ನೀಡಿ ; ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಗೆ ಮತ್ತೆ ಜೀವ ಬೆದರಿಕೆ…!

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ‘ಹಗೆತನವನ್ನು ಕೊನೆಗಾಣಿಸಲು’ ಈಗ ₹ 5 ಕೋಟಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಕಳುಹಿಸಲಾದ ವಾಟ್ಸಾಪ್ ಸಂದೇಶದಲ್ಲಿ ಹಣವನ್ನು ಪಾವತಿಸದಿದ್ದರೆ, ನಟ ಸಲ್ಮಾನ್ ಖಾನ್‌ ಭವಿಷ್ಯವು ಇತ್ತೀಚೆಗೆ ಬಿಷ್ಣೋಯ್ ಗ್ಯಾಂಗ್ ಸದಸ್ಯರಿಂದ ಹತ್ಯೆಗೀಡಾದ ಮಹಾರಾಷ್ಟ್ರದ ಮಾಜಿ … Continued

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಹತ್ಯೆಗೆ ₹ 25 ಲಕ್ಷ ಸುಪಾರಿ, ಪಾಕಿಸ್ತಾನದಿಂದ AK-47 ಖರೀದಿ ; ಚಾರ್ಜ್‌ಶೀಟ್‌

ಮುಂಬೈ : ನಟ ಸಲ್ಮಾನ್ ಖಾನ್ ಅವರನ್ನು ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಅವರ ಫಾರ್ಮ್‌ಹೌಸ್ ಬಳಿ ಕೊಲ್ಲಲು ₹ 25 ಲಕ್ಷದ ಸುಪಾರಿ ತೆಗೆದುಕೊಳ್ಳಲಾಗಿದೆ ಎಂದು ನವಿ ಮುಂಬೈ ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ. ಬಿಷ್ಣೋಯ್‌ ಗ್ಯಾಂಗ್‌ ವಿರುದ್ಧ ನವಿ ಮುಂಬೈ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಐವರು ಆರೋಪಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಐವರು … Continued

ಮಾಜಿ ಸಚಿವ ಬಾಬಾ ಸಿದ್ದಿಕ್‌ ಹತ್ಯೆ ನಂತರ ನಟ ಸಲ್ಮಾನ್ ಖಾನ್‌ ಭದ್ರತೆ ಹೆಚ್ಚಳ

ಮುಂಬೈ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ವೈ ಫ್ಲಸ್‌ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಸರ್ಕಾರ ಸಲ್ಮಾನ್‌ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದೆ. ಸಲ್ಮಾನ್‌ ಖಾನ್‌ಗೆ ಜೀವಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಬೆಂಗಾವಲು ವಾಹನ ಈಗ … Continued

ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್)ನಾಯಕ ಬಾಬಾ ಸಿದ್ದಿಕ್ ಹತ್ಯೆಯಾದ ಕೆಲವೇ ಗಂಟೆಗಳ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. 66 ವರ್ಷದ ಬಾಬಾ ಸಿದ್ದಿಕ್ ಅವರನ್ನು ಶನಿವಾರ ರಾತ್ರಿ ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಅವರ ಮಗ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡು ಹಾರಿಸಿ … Continued