ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಘೋಷಣೆ ಬೆನ್ನಲ್ಲೇ ಇನ್ಮುಂದೆ ಸಿನಿಮಾಗಳಲ್ಲಿ ನಟಿಸಲ್ಲ ಅಂದಿದ್ಯಾಕೆ ನಟ ಅನಂತ ನಾಗ್ ?

ಬೆಂಗಳೂರು: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಕನ್ನಡದ ಹಿರಿಯ ನಟ ಅನಂತ ನಾಗ್ (Anant Nag) ಅವರು ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ಬಂದ ಹಿನ್ನೆಲೆಯಲ್ಲಿ ಎನ್‌ಡಿಟಿವಿಯ ದೀಪಕ ಬೋಪಣ್ಣ ಅವರಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ 78 ವರ್ಷದ ಅನಂತ ನಾಗ್, … Continued

ಮೇರು ನಟ ಅನಂತ ನಾಗ್‌ಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ‘ದಾದಾ ಸಾಹೇಬ ಫಾಲ್ಕೆ’ ಪ್ರಶಸ್ತಿ ಘೋಷಣೆ

ನವದೆಹಲಿ: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ 2024ನೇ ಸಾಲಿನ ದಾದಾಸಾಹೇಬ ಫಾಲ್ಕೆ ಪ್ರಶಸ್ತಿಗೆ ಕನ್ನಡದ ಹಿರಿಯ ನಟ ಅನಂತ ನಾಗ್ ಭಾಜನರಾಗಿದ್ದಾರೆ. ಭಾರತೀಯ ಸಿನೆಮಾಕ್ಕೆ ಅವರು ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಅವರಿಗೆ ಘೋಷಿಸಲಾಗಿದೆ. ಗುಜರಾತ್‌ನ ಕೆವಾಡಿಯಾದಲ್ಲಿ 2026ರ ಸೆಪ್ಟೆಂಬರ್ 22 ರಂದು ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ … Continued

ಖ್ಯಾತ ಕನ್ನಡ ನಟ ದುನಿಯಾ ವಿಜಯ – ನಾಗರತ್ನ ದಂಪತಿ ವಿಚ್ಛೇದನ : 2 ಕೋಟಿ ಜೀವನಾಂಶ ನೀಡಲು ಆದೇಶ

ಬೆಂಗಳೂರು: ಖ್ಯಾತ ಕನ್ನಡ ನಟ ದುನಿಯಾ ವಿಜಯ ಮತ್ತು ಅವರ ಪತ್ನಿ ನಾಗರತ್ನ ಅವರ ನಡುವಿನ ಸುದೀರ್ಘ ವೈವಾಹಿಕ ವಿವಾದ ಅಂತ್ಯಗೊಂಡಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ, ಪತ್ನಿ ನಾಗರತ್ನ ಅವರಿಗೆ ಒಂದು ಬಾರಿಯ ಕಾಯಂ ಜೀವನಾಂಶವಾಗಿ (ಅಲಿಮೋನಿ) 2 ಕೋಟಿ ರೂಪಾಯಿ ಪಾವತಿಸುವಂತೆ ನಟ … Continued

400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಬಹುಭಾಷಾ ನಟಿ ಸಾಹಕಾರ ಜಾನಕಿ ಇನಿಲ್ಲ

ಚೆನ್ನೈ : ದಕ್ಷಿಣ ಭಾರತದ ಹಿರಿಯ ನಟಿ, ಬಹುಭಾಷಾ ತಾರೆ ಸಾಹಕಾರ ಜಾನಕಿ ಅವರು ಶುಕ್ರವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ತೀವ್ರ ಎದೆನೋವಿನ ಹಿನ್ನೆಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾಹ್ನ 1:59ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ನಟರ … Continued

ಬಹುಭಾಷಾ ನಟ ಪ್ರದೀಪ ರಾವತ್ ನಿಧನ

ಮುಂಬೈ:  ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಖಳನಾಯಕ ಮತ್ತು ವೈವಿಧ್ಯಮಯ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಖ್ಯಾತ ನಟ ಪ್ರದೀಪ ಸಿಂಗ್ ರಾವತ್ ಅವರು ಮಂಗಳವಾರ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ನಟ ಪ್ರದೀಪ ರಾವತ್ ಮಂಗಳವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ಕ್ಯಾನ್ಸರ್ ಚಿಕಿತ್ಸೆ … Continued

ಕನ್ನಡ ಸಿನೆಮಾ-ಕಿರುತೆರೆಯ ಖ್ಯಾತ ನಟ ದಿಲೀಪ ರಾಜ ನಿಧನ

ಬೆಂಗಳೂರು : ಕನ್ನಡ ಸಿನೆಮಾ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ, ಕಂಠದಾನ ಕಲಾವಿದ ದಿಲೀಪ ರಾಜ (48) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಯಕ ನಟ, ಪೋಷಕ ನಟ, ನಿರ್ಮಾಪಕ ಹೀಗೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸಿನೆಮಾ ಹಾಗೂ ಕಿರುತೆರೆ ಎರಡರಲ್ಲೂ ತೊಡಗಿಸಿಕೊಂಡಿದ್ದರು. ರಾತ್ರಿ ಮಲಗಿದ್ದ ದಿಲೀಪರಾಜ ((Dilip Raj) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ … Continued

ಹಳೆಯ ಸಂಭಾಷಣೆಯ ಆಡಿಯೋ ಲೀಕ್: ಕಾನೂನು ಹೋರಾಟದ ಎಚ್ಚರಿಕೆ ನೀಡಿದ ನಟಿ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್ ಮಂದಣ್ಣ ಅವರದ್ದು ಎನ್ನಲಾದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ರಶ್ಮಿಕಾ ಮಂದಣ್ಣ ಪ್ರತಿಕ್ರಿಯಿಸಿದ್ದು, ಹಳೆಯ ಸಂಭಾಷಣೆಯನ್ನು ಈಗ ಹರಿಬಿಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಈ ವರ್ಷದ ಫೆಬ್ರವರಿ 26 ರಂದು … Continued

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್‌ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಜೋ ಸೈಮನ್‌ ಅಪಾರ ಕೊಡುಗೆ … Continued

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber Of Commerce) ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಜಯಮಾಲಾ (Actress Jayamala) ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಫಿಲ್ಮ್‌ ಚೇಂಬರ್‌ ಚುನಾವಣೆಯಲ್ಲಿ ನಿರ್ಮಾಪಕ ಭಾಮಾ ಹರೀಶ ವಿರುದ್ಧ ನಟಿ ಜಯಮಾಲಾ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಅಧ್ಯಕ್ಷ ಸ್ಥಾನಕ್ಕೆ ಜಯಮಾಲಾ ಹಾಗೂ  ಭಾಮಾ … Continued

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ‌ ಉಮೇಶ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್ ಉಮೇಶ (umesh) ಇಂದು (ನ.30) ಬೆಳಿಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  ಇತ್ತೀಚೆಗೆ ನಟ ಉಮೇಶ  ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಆದರೆ … Continued