ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಜೈನರ ಕ್ಷಮೆಯಾಚಿಸಿದ ಹಂಸಲೇಖ

ಬೆಂಗಳೂರು: ಜೈನ ಸಮುದಾಯದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚಿಸಿದ್ದಾರೆ. ಹೇಳಿಕೆ ಕುರಿತು ಲಿಖಿತ ಹಾಗೂ ವೀಡಿಯೊ ಮೂಲಕ ಕ್ಷಮೆಯಾಚಿಸಿದ ತಮ್ಮ ಹೇಳಿಕೆಯನ್ನು ಹಂಸಲೇಖ ಬಿಡುಗಡೆಗೊಳಿಸಿದ್ದಾರೆ. ಸೋಮವಾರ ಗೌರಿ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಹಂಸಲೇಖ, ಜೈನರ ಫಿಲಾಸಫಿಯಲ್ಲಿ 24 ಜನ್ಮಗಳಿವೆ ಅಂತಾರೆ, ಅದೆಲ್ಲ ಬುಲ್ ಶಿಟ್ ಎಂದು … Continued

ಕಾಪಿರೈಟ್ ಉಲ್ಲಂಘನೆ ದೂರು ; ಸ್ಪಷ್ಟನೆ ಕೊಟ್ಟ ರಕ್ಷಿತ್ ಶೆಟ್ಟಿ : ನ್ಯಾಯಾಲಯದ ಮೊರೆ ಹೋಗಲು ನಿರ್ಧಾರ

ಬೆಂಗಳೂರು : ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್‌ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಂಡಿದ್ದಾರೆ ಎಂದು ಎಂ ಆರ್‌ ಟಿ ಮ್ಯೂಸಿಕ್ ಸಂಸ್ಥೆಯು ದೂರು ನೀಡಿದ್ದು, ಪರಂವಃ ಸ್ಟಡಿಯೋಸ್‌ ಮಾಲೀಕ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಈಗ ಇದಕ್ಕೆ ಸಂಬಂಧಿಸಿದಂತೆ ‘ಪರಂವಃ ಸ್ಟುಡಿಯೋಸ್​’ ಕಡೆಯಿಂದ ಪ್ರತಿಕ್ರಿಯೆ ನೀಡಿದ್ದು, … Continued

ಕನ್ನಡದ ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ  (57  ಇಂದು, ಗುರುವಾರ (ಜುಲೈ 11) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಅವರು  ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು.  ಬೆಂಗಳೂರು ದೂರದರ್ಶನದಲ್ಲಿ ಸಿನೀಯರ್‌ ಗ್ರೇಡ್‌ ನಿರೂಪಕಿಯಾಗಿದ್ದರು. ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) … Continued

ನಟ ವಿನೋದರಾಜ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿನೋದರಾಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಕರುಳಿನ ಸಮಸ್ಯೆಯಿಂದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗಿದೆ. 11 ವರ್ಷಗಳ ಹಿಂದೆ ವಿನೋದರಾಜ ಅವರು ಹೃದಯದ ಆಪರೇಷನ್‌ಗೆ ಒಳಗಾಗಿದ್ದರು. ಈ ವೇಳೆ ಅವರ ಸ್ಟಂಟ್‌ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್‌ ಪರಿಣಾಮದಿಂದ ಅವರಿಗೆ ಕರುಳಿನ ಸಮಸ್ಯೆ ಉಂಟಾಗಿದೆ … Continued

ಬೆಂಗಳೂರು: ನಟ ಚೇತನ್ ಚಂದ್ರ ಮೇಲೆ ಹಲ್ಲೆ

ಬೆಂಗಳೂರು: ಕನ್ನಡ ನಟ ಚೇತನ್ ಚಂದ್ರ (Chetan Chandra) ಅವರ ಮೇಲೆ ಹಲ್ಲೆ ಮಾಡಿದ ಘಟನೆ ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಬರುತ್ತಿದ್ದಾಗ ಕಾರನ್ನು ಅಡ್ಡಗಟ್ಟಿ ತನಗೆ ಮೇಲೆ ರಕ್ತ ಬರುವಂತೆ ಥಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಮೇಲೆ … Continued

ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿಗೆ ಗಾಯ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಮೈಸೂರಿನಲ್ಲಿ ‘ಬಘೀರ’ ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಅವರ ಕಾಲು ಮತ್ತು ಕೈಗೆ ಪೆಟ್ಟಾಗಿದ್ದು, ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೈಸೂರಿನಲ್ಲಿ ‘ಬಘೀರ’ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಿತ್ರೀಕರಣದ ವೇಳೆ ಶ್ರೀಮುರಳಿ ಅವರಿಗೆ ಗಾಯವಾಗಿದೆ. ಎರಡು ದಿನಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. … Continued

ಖ್ಯಾತ ನಟ ಪ್ರಕಾಶ ಹೆಗ್ಗೋಡು ನಿಧನ

ಬೆಂಗಳೂರು: ಖ್ಯಾತ ನಟ, ರಂಗಕರ್ಮಿ ಪ್ರಕಾಶ ಹೆಗ್ಗೋಡು ಅನಾರೋಗ್ಯದಿಂದ ಶನಿವಾರ (ಮಾರ್ಚ್‌ 30) ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಯೇಸುಪ್ರಕಾಶ್‌ ಕಲ್ಲುಕೊಪ್ಪ ಎಂದೂ ಗುರುತಿಸ್ಪಡುತ್ತಿದ್ದ ಪ್ರಕಾಶ ಹೆಗ್ಗೋಡು ಶಿವಮೊಗ್ಗ … Continued

ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣ : ಬಿಗ್‌ ಬಾಸ್‌ ಸ್ಪರ್ಧಿ ಸೋನು ಗೌಡಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪಿತ ಪ್ರಕರಣದಲ್ಲಿ ಬಿಗ್‌ಬಾಸ್ ರಿಯಾಲಿಟಿ ಶೋನ ಸ್ಪರ್ಧಿ ಹಾಗೂ ರೀಲ್ಸ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದ ಸೋನು ಶ್ರೀನಿವಾಸ ಗೌಡ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಸೋನು ಅವರ ಪೊಲೀಸ್ ಕಸ್ಟಡಿ ಸೋಮವಾರ ಅಂತ್ಯವಾದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರು … Continued

ನಟ-ಮಾಜಿ ಐಎಎಸ್​ ಅಧಿಕಾರಿ ಕೆ. ಶಿವರಾಮಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ಕನ್ನಡದ ನಟ ಕೆ. ಶಿವರಾಮ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, 71 ವರ್ಷ ವಯಸ್ಸಿನ ಕೆ ಶಿವರಾಮ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಕೆಲದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿತ್ತು … Continued

ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೇನ್‌ ಹ್ಯಾಮರೇಜ್‌ ಆಗಿತ್ತು. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಸದ್ಯ ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಎಂದು ವರದಿಯಾಗಿದೆ. ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ … Continued