ಸೋಲದೇವನಹಳ್ಳಿಯ ತೋಟದಲ್ಲಿ ನಡೆದ ನಟಿ ಲೀಲಾವತಿ ಅಂತ್ಯಕ್ರಿಯೆ

ಬೆಂಗಳೂರು : ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ನೆಲಮಂಗಲದ ಬಳಿಯ ಸೋಲದೇವನಹಳ್ಳಿಯ ಅವರ ತೋಟದಲ್ಲಿ ಶನಿವಾರ ನೆರವೇರಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ೮೬ ವರ್ಷದ ಲೀಲಾವತಿ ಅವರು ಶುಕ್ರವಾರ ನಿಧನರಾಗಿದ್ದರು. ನೆಲಮಂಗಲದ ಸೋಲದೇವನಹಳ್ಳಿಯ ತೋಟದಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಪುತ್ರ ವಿನೋದರಾಜ ಅವರು ಅಂತಿಮ ವಿಧಿ-ವಿಧಾನಗಳನ್ನು ನೆರವೇರಿಸಿದರು. … Continued

ಹಿರಿಯ ಹಾಸ್ಯನಟ ಬ್ಯಾಂಕ್‌ ಜನಾರ್ಧನಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ (74 ವರ್ಷ) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು ಇರಿಸಿ, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಕುಟುಂಬದ ಸಮೀಪವರ್ತಿಗಳಿಂದ ತಿಳಿದುಬಂದಿದೆ. ಇವರಿಗೆ ಆಂಜಿಯೋಗ್ರಾಂ ಆಪರೇಷನ್‌ ಮಾಡುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ. ಕನ್ನಡ ಸಿನಿಮಾ,ಟಿವಿ ಗಳಲ್ಲಿ ಹಾಸ್ಯನಟನಾಗಿ … Continued

ಖಾಸಗಿ ಜಾಗದಲ್ಲಿ ಶ್ರೀಗಂಧ ಬೆಳೆದ ರೈತರಿಗೆ ಇನ್ಮುಂದೆ ಮುಕ್ತವಾಗಿ ಮಾರಾಟ ಮಾಡಲು ಅವಕಾಶ

ಬೆಂಗಳೂರು: ಇನ್ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ (Sandalwood) ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು. ರೈತರು ತಮ್ಮ ಹೊಲ ಗದ್ದೆಗಳಲ್ಲಿ ಶ್ರೀಗಂಧ ಬೆಳೆಯುವುದನ್ನು ಉತ್ತೇಜಿಸುವುದರ ಜೊತೆಗೆ ಮಾರಾಟಕ್ಕೆ ಸರಳ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ರಾಜ್ಯ ಅರಣ್ಯ ಇಲಾಖೆ ಪ್ರಸ್ತಾಪಿಸಿದ ‘ಶ್ರೀಗಂಧ ನೀತಿ- 2022 ’ ಜಾರಿಮಾಡಲು ರಾಜ್ಯ ಸಚಿ ಸಂಪುಟ ಅನುಮೋದನೆ ನೀಡಿದೆ. … Continued

ಸ್ಯಾಂಡಲ್‌ವುಡ್ ಒತ್ತಡಕ್ಕೆ ಮಣಿದ ಸರ್ಕಾರ : ಏ.7ರ ವರೆಗೆ ಚಿತ್ರಮಂದಿರಗಳ ಪೂರ್ಣ ಭರ್ತಿಗೆ ಅವಕಾಶ..!

ಬೆಂಗಳೂರು :ಕೊರೊನಾ 2ನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಸೋಂಕು ಹೆಚ್ಚಿರುವಂತಹ ಬೆಂಗಳೂರು ನಗರ ಸೇರಿದಂತೆ 8 ಜಿಲ್ಲೆಗಳಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಸೀಟುಗಳ ಭರ್ತಿಗೆ ಮಾತ್ರ ಅವಕಾಶ ನೀಡಿ ಹೊರಡಿಸಿದ್ದ ಆದೇಶವನ್ನು ಚಿತ್ರರಂಗದ ಒತ್ತಡಕ್ಕೆ ಮಣಿದು ಹೇಳಿದ ೨೪ ತಾಸಿನಲ್ಲೇ ವಾಪಸ್‌ ಪಡೆದಿದೆ. ಹಾಗೂ ಶೇ.೧೦೦ ಸೀಟುಗಳ ಭರ್ತಿಗೆ ಅವಕಾಶ ನೀಡಿದೆ. ನಿರ್ಬಂಧದ ವಿರುದ್ಧ … Continued