ಕಾರವಾರ : ಸಚಿವ-ಶಾಸಕರ ನಡುವೆ ವಾಗ್ವಾದ ; ಕೆಡಿಪಿ ಸಭೆಯಿಂದ ಹೊರನಡೆದ ಸತೀಶ ಸೈಲ್

ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯಲ್ಲಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಕಾಂಗ್ರೆಸ್‌ ಶಾಸಕ ಸತೀಶ ಸೈಲ್ ನಡುವೆ ನಡೆದ ವಾಗ್ವಾದ ನಡೆದು, ಸೈಲ್ ಸಭೆಯ ಮಧ್ಯದಲ್ಲೇ ಹೊರನಡೆದ ಘಟನೆ ನಡೆದಿದೆ. ಇಬ್ಬರೂ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು ಎಂಬುದು ಗಮನಿಸಬೇಕಾದ ಸಂಗತಿ. ಜಿಲ್ಲಾ ಉಸ್ತುವಾರಿ … Continued

ಅಕ್ರಮ ಅದಿರು ರಫ್ತು ಪ್ರಕರಣ; ಕಾರವಾರ ಶಾಸಕ ಸತೀಶ ಸೈಲ್‌ ವಿರುದ್ಧ ಇಡಿ ಚಾರ್ಜ್‌ ಶೀಟ್‌

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಸೈಲ್‌ ಹಾಗೂ ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಬೆಂಗಳೂರಿನ ಪಿಎಂಎಲ್‌ಎ ವಿಶೇಷ ನ್ಯಾಯಾಯಲಯದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಬೆಂಗಳೂರಿನ  ಪಿಎಂಎಲ್‌ಎ ನ್ಯಾಯಾಲಯದ ಮುಂದೆ ಪ್ರಾಸಿಕ್ಯೂಷನ್ ದೂರು ದಾಖಲಾಗಿದೆ ಎಂದು ಫೆಡರಲ್ ತನಿಖಾ ಸಂಸ್ಥೆ ತಿಳಿಸಿದೆ. ಕಬ್ಬಿಣದ … Continued

ಕಾರವಾರ ಶಾಸಕ ಸತೀಶ ಸೈಲ್ ಬಂಧಿಸಿದ ಇ.ಡಿ.

ಕಾರವಾರ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನಲ್ಲಿ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಚಾರಣೆಗಾಗಿ ಇ.ಡಿ. ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಶಾಸಕ ಸತೀಶ್ ಸೈಲ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು … Continued

ಶಾಸಕ ಸತೀಶ ಸೈಲ್ ಮನೆ ಮೇಲೆ ಇಡಿ ದಾಳಿ ವೇಳೆ ಕೋಟಿಗೂ ಹೆಚ್ಚು ನಗದು, ಕೆಜಿಗಟ್ಟಲೆ ಚಿನ್ನ ಜಪ್ತಿ

ಕಾರವಾರ: ಬೇಲೇಕೇರಿ ಬಂದರಿನಿಂದ ಕಬ್ಬಿಣದ ಅದಿರು ಕಳ್ಳ ಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ್ದ ವೇಳೆ ಅಪಾರ ನಗದು, ಚಿನ್ನ ಮತ್ತು ಬ್ಯಾಂಕ್ ಠೇವಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತಿಳಿಸಿದೆ. ಈ ಕುರಿತು … Continued

ಕಾರವಾರ : ಶಾಸಕ ಸತೀಶ ಸೈಲ್ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ: ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದ್ದು, ಸದಾಶಿವಗಡದಲ್ಲಿರುವ ಅವರ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ನಾಲ್ಕು ಕಾರುಗಳಲ್ಲಿ ಬಂದಿರುವ ಇ.ಡಿ.ಅಧಿಕಾರಿಗಳ ತಂಡವು … Continued

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕಾರವಾರ ಶಾಸಕ ಸತೀಶ ಸೈಲ್‌ ಗೆ ಸದ್ಯಕ್ಕೆ ರಿಲೀಫ್‌ ನೀಡಿದ ಹೈಕೋರ್ಟ್

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಹಾಗೂ ಇತರ ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ವಿಶೇಷ ಕೋರ್ಟ್ ವಿಧಿಸಿದ್ದ ಜೈಲು ಶಿಕ್ಷೆ ಪ್ರಶ್ನಿಸಿ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಜನ ಪ್ರತಿನಿಧಿಗಳ ವಿಶೇಷ … Continued

ಅಕ್ರಮ ಅದಿರು ಸಾಗಣೆ ಪ್ರಕರಣ: ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ ಸೈಲ್‌ ಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಸಾವಿರಾರು ಮೆಟ್ರಿಕ್‌ ಟನ್‌ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ನೂರಾರು ಕೋಟಿ ನಷ್ಟ ಉಂಟು ಮಾಡಿರುವ ಆರು ಕ್ರಿಮಿನಲ್‌ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿ ಏಳು ಮಂದಿಗೆ ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಲ್ಲದೆ, ಒಟ್ಟಾರೆ ₹44.65 ಕೋಟಿ … Continued

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್‌ ತೀರ್ಪು

ಬೆಂಗಳೂರು: ಬೇಲೇಕೇರಿ ಬಂದರು ಮೂಲಕ ನಡೆದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ(ಅ24) ತೀರ್ಪು ನೀಡಿದೆ. ಕೋರ್ಟ್‌ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ. ಜಪ್ತಿ ಮಾಡಿ ಇಡಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ … Continued