ಕೊರೊನಾದಿಂದ ಭಾರತದಲ್ಲಿ ಪೋಷಕರನ್ನು ಕಳೆದುಕೊಂಡ 30,000ಕ್ಕೂ ಮಕ್ಕಳು : ಸುಪ್ರೀಂಕೋರ್ಟಿಗೆ ಮಕ್ಕಳ ಆಯೋಗ ಮಾಹಿತಿ

ನವ ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆಗೆ ವಿವಿಧ ರಾಜ್ಯಗಳು ಸಲ್ಲಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ, ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್​ಗೆ ರಾಷ್ಟ್ರೀಯ ಮಕ್ಕಳ ಆಯೋಗ ಮಾಹಿತಿ ನೀಡಿದೆ. ಕೊರೊನಾದಿಂದಾಗಿ ಒಟ್ಟು, 26,176 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದರೆ 3,621 ಮಕ್ಕಳು ಅನಾಥರಾಗಿದ್ದಾರೆ ಮತ್ತು 274 ಮಕ್ಕಳನ್ನು ಮನೆಯಿಂದ ಹೊರದಬ್ಬಲಾಗಿದೆ … Continued