ಮಾರ್ಚ್‌ 21ರೊಳಗೆ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರ ನೀಡಿ : ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ತಾಕೀತು

ನವದೆಹಲಿ: ಚುನಾವಣಾ ಬಾಂಡ್‌ ಕುರಿತ ಸಂಪೂರ್ಣ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(ಎಸ್‌ಬಿಐ)ಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಾಕೀತು ಮಾಡಿದೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಎಸ್‌ಬಿಐಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ತಾಕೀತು ಮಾಡಿದೆ. … Continued