ನಿಗದಿತ ಸಮಯಕ್ಕೆ ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿಗಳಿಗೆ ಸೀಟು ಸೃಷ್ಟಿಸುವಂತೆ ಐಐಟಿ-ಬಾಂಬೆಗೆ ಆದೇಶ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆಯಲ್ಲಿ ಶಿಕ್ಷಣ ಪಡೆಯಲು ಅರ್ಹತೆ ಹೊಂದಿದ್ದರೂ ತಾಂತ್ರಿಕ ದೋಷದಿಂದಾಗಿ ಗಡುವಿನೊಳಗೆ ಶುಲ್ಕ ಪಾವತಿಸಲಾಗದೆ ಸೀಟು ವಂಚಿತನಾಗಿದ್ದ ದಲಿತ ಸಮುದಾಯದ 17 ವರ್ಷದ ಬಾಲಕನಿಗೆ ಸೀಟು ನಿಗದಿಪಡಿಸುವಂತೆ ಸುಪ್ರೀಂಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ. ಸಂವಿಧಾನದ 142ನೇ ವಿಧಿಯಡಿಯಲ್ಲಿ ತನ್ನ ಅಧಿಕಾರ ಚಲಾಯಿಸಿ ವಿದ್ಯಾರ್ಥಿಗೆ ಸೀಟು ನಿಗದಿಪಡಿಸುವಂತೆ ಜಂಟಿ ಸೀಟು ಹಂಚಿಕೆ … Continued