ವೀಡಿಯೊ..| ಮಕ್ಕಳ ʼಮೊಬೈಲ್ʼ ಚಟ ಬಿಡಿಸಲು ಶಾಲಾ ಶಿಕ್ಷಕಿಯರು ಮಾಡಿದ ಅದ್ಭುತ ಉಪಾಯ ನೋಡಿ…!

ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದೆ. ಕೆಲವು ಮಕ್ಕಳು ಊಟ-ತಿಂಡಿಯನ್ನೂ ಮಾಡದೆ ಮೊಬೈಲ್‌ನಲ್ಲೇ ಮುಳುಗಿರುತ್ತಾರೆ. ಮಕ್ಕಳಿಗೆ ಮೊಬೈಲ್‌ ಗೀಳು ಬಿಡಿಸುವುದು ಪೋಷಕರಿಗೆ ಸವಾಲಿನ ಕೆಲಸವಾಗಿದೆ. ಆದರೆ ಇದೇ ವೇಳೆ ಶಾಲೆಯೊಂದರಲ್ಲಿ ಮಕ್ಕಳನ್ನು ಮೊಬೈಲ್‌ ಫೋನ್‌ನಿಂದ ದೂರವಿರಿಸಲು ಶಿಕ್ಷಕರು ಅನುಸರಿಸಿದ ವಿಧಾನದ ವೀಡಿಯೊವೊಂದು ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಬದೌನ್‌ನಲ್ಲಿರುವ ಶಾಲೆಯೊಂದರ ಜಾಗೃತಿ ಕಾರ್ಯಕ್ರಮದ ವೀಡಿಯೊ ಇದು ಎಂದು … Continued

8 ವರ್ಷದಿಂದ ಅಮೆರಿಕದಲ್ಲಿ ವಾಸಿಸುತ್ತಿರುವ ಶಿಕ್ಷಕಿ ; ಆದ್ರೆ ಸರ್ಕಾರದಿಂದ ಪ್ರತಿ ತಿಂಗಳೂ ಸಂಬಳ…!

ಕಳೆದ ಎಂಟು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದರೂ ಗುಜರಾತಿನ ಬನಸ್ಕಾಂತದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ರಾಜ್ಯ ಸರ್ಕಾರದಿಂದ ವೇತನ ಪಡೆಯುತ್ತಲೇ ಇದ್ದಾರೆ….! ಶಿಕ್ಷಕಿ ಭಾವನಾ ಪಟೇಲ್ ಹಲವು ವರ್ಷಗಳಿಂದ ಶಾಲೆಯಲ್ಲಿ ಕಾಣಿಸಿಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ದೂರು ನೀಡಿದ ನಂತರ ವಿಷಯ ಎಲ್ಲರಿಗೂ ಗೊತ್ತಾಗಿದೆ. ಪ್ರಸ್ತುತ ಐದನೇ ತರಗತಿಯಲ್ಲಿರುವ ವಿದ್ಯಾರ್ಥಿಗಳು ಮೂರನೇ ತರಗತಿಯಲ್ಲಿದ್ದಾಗ … Continued

ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಶಿಕ್ಷಕರು…!

ರಾಮನಗರ: ಶಾಲೆಯ ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಶಾಲೆಯ ಮುಂದೆ ಪೋಷಕರು ಗಲಾಟೆ ನಡೆಸಿದ್ದಾರೆ. ಶಾಲೆಗೆ ಬರುವಾಗ ಎರಡು ಜಡೆಗಳನ್ನು ಹಾಕಿಲ್ಲ ಎಂಬ ಕಾರಣಕ್ಕೆ ಶಾಲಾ ಶಿಕ್ಷಕರು ಎಂಟನೇ ತರಗತಿಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಜಡೆಗಳನ್ನು ಕತ್ತರಿಸಿದ್ದಾರೆ … Continued

ನೀನು ಬಂದ್ರೆ ಶಾಲಾ ವಾತಾವರಣ ಹಾಳಾಗಲಿದೆ…: ಅತ್ಯಾಚಾರ ಸಂತ್ರಸ್ತೆಗೆ 12 ತರಗತಿ ಪರೀಕ್ಷೆ ಬರೆಯಲು ಬಿಡದ ಶಾಲೆ…!

ಅಜ್ಮೀರ್: ಕಳೆದ ವರ್ಷ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದರಿಂದ ತನ್ನ ಶಾಲೆಯು ತನಗೆ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಬಿಡಲಿಲ್ಲ ಎಂದು ರಾಜಸ್ಥಾನದಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆರೋಪಿಸಿದ್ದಾಳೆ. ಪರೀಕ್ಷೆಗೆ ಹಾಜರಾದರೆ ಶಾಲೆಯ ವಾತಾವರಣ ಹಾಳಾಗುತ್ತದೆ ಎಂದು ಶಾಲಾ ಅಧಿಕಾರಿಗಳು ಹೇಳಿದ್ದರು ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದಾಳೆ. ವಿದ್ಯಾರ್ಥಿನಿ 4 ತಿಂಗಳಿನಿಂದ ತರಗತಿಗಳಿಗೆ ಹಾಜರಾಗದ ಕಾರಣ … Continued

ಬೆಂಗಳೂರು : ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ; ಮುಖ್ಯ ಶಿಕ್ಷಕಿ ಅಮಾನತು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಘಟನೆಯ ನಂತರ, ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. … Continued

ಬೆಂಗಳೂರಿನ 44 ಶಾಲೆಗಳಿಗೆ ಬಾಂಬ್ ಬೆದರಿಕೆ….!

ಬೆಂಗಳೂರು :ಬೆಂಗಳೂರಿನ 44 ಶಾಲೆಗಳಿಗೆ ಬಾಂಬ್‌ ಬೆದರಿಕೆ (Bomb Threat to Schools) ಹಾಕಲಾಗಿದೆ. ಈ ಮೇಲ್‌ ಮೂಲಕ ಈ ಬಾಂಬ್‌ ಬೆದರಿಕೆ ಬಂದಿದ್ದು, ಬೆಳಗ್ಗೆ ಮೇಲ್‌ ಚೆಕ್‌ ಮಾಡುವಾಗ ಇದು ಗೊತ್ತಾಗಿದೆ. ಪೊಲೀಸರು ಶಾಲೆಗಳಿಗೆ ದೌಡಾಯಿಸಿದ್ದು, ಬಾಂಬ್‌ ತಪಾಸಣೆ ದಳಗಳೂ ಆಗಮಿಸಿವೆ. ಶುಕ್ರವಾರ ಬೆಳಗ್ಗೆ ಬೆಂಗಳೂರಿನ 44 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ … Continued

ಅಯ್ಯೋ ರಾಮಾ….: 4ನೇ ತರಗತಿ ವಿದ್ಯಾರ್ಥಿಗೆ ಜ್ಯಾಮಿತಿ ಕಂಪಾಸ್‌ ನಿಂದ 108 ಬಾರಿ ಇರಿದ ಸಹಪಾಠಿಗಳು…!

ಇಂದೋರ್‌ :ಮಧ್ಯಪ್ರದೇಶದ ಇಂದೋರ್‌ನಲ್ಲಿ 4 ನೇ ತರಗತಿಯ ವಿದ್ಯಾರ್ಥಿಗೆ ತನ್ನ ಸಹಪಾಠಿಗಳು 108 ಬಾರಿ ಇರಿದಿರುವ ಭಯಾನಕ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಯು (ಸಿಡಬ್ಲ್ಯುಸಿ) ಘಟನೆಯ ಬಗ್ಗೆ ಗಮನಹರಿಸಿದೆ ಮತ್ತು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದೆ. ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ … Continued

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್ : ಪ್ರಾಂಶುಪಾಲರು ಅಮಾನತು

ಲಕ್ನೋ : ಉತ್ತರ ಪ್ರದೇಶದ ಲಕ್ನೋದ ಠಾಕೂರ್‌ಗಂಜ್ ಪ್ರದೇಶದ ಪ್ರಾಥಮಿಕ ಶಾಲೆಯೊಂದರಲ್ಲಿ ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್ ಮಾಡಿದ ಆರೋಪಿತ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶಾಲೆಯ ಪ್ರಾಂಶುಪಾಲರಾದ ಮೀರಾ ಯಾದವ್ ಅವರನ್ನು ಉತ್ತರ ಪ್ರದೇಶ ಸರ್ಕಾರಿ ನೌಕರ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು-1999 ರ ಅಡಿಯಲ್ಲಿ ಶನಿವಾರ ತಕ್ಷಣದಿಂದಲೇ ಜಾರಿಗೆ … Continued

ಶಾಲಾ ವಿದ್ಯಾರ್ಥಿಗಳಿಂದ ನಮಾಜ್ ಮಾಡಿಸಿದ ಶಾಲೆ : ಪ್ರತಿಭಟನೆಗಳ ನಂತರ ತನಿಖೆಗೆ ಆದೇಶ

ಅಹಮದಾಬಾದ್: ಅಹಮದಾಬಾದ್‌ನ ಖಾಸಗಿ ಶಾಲೆಯೊಂದು ಜಾಗೃತಿ ಕಾರ್ಯಕ್ರಮದ ಭಾಗವಾಗಿ ಹಿಂದೂ ಧರ್ಮದ ವಿದ್ಯಾರ್ಥಿಗಳನ್ನು ತನ್ನ ಆವರಣದಲ್ಲಿ ನಮಾಜ್ ಮಾಡಲು ಹೇಳಿರುವುದು ಪ್ರತಿಭಟನೆಗೆ ಕಾರಣವಾಗಿದೆ. ಸೆಪ್ಟೆಂಬರ್ 29 ರಂದು ನಡೆದ ಘಟನೆಯ ಕುರಿತು ಘಟ್ಲೋಡಿಯಾ ಪ್ರದೇಶದಲ್ಲಿ ನೆಲೆಗೊಂಡಿರುವ ಕಲೋರೆಕ್ಸ್ ಫ್ಯೂಚರ್ ಸ್ಕೂಲ್ ಎಂಬ ಶಾಲೆಯ ವಿರುದ್ಧ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಶಾಲಾ ಆಡಳಿತ ಮಂಡಳಿಯು ಕ್ಷಮೆಯಾಚಿಸಿದ್ದು, … Continued

ಕರ್ನಾಟಕ ಬಂದ್‌ : ಶಾಲಾ-ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಸೆಪ್ಟಂಬರ್ 29ರಂದು, ಶುಕ್ರವಾರ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆಯು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ. ಇನ್ನು ಜಿಲ್ಲಾಧಿಕಾರಿಗಳು … Continued