ಪಿಕಪ್ ವಾಹನ ಪಲ್ಟಿಯಾಗಿ 18 ಮಂದಿ ಸಾವು, ನಾಲ್ವರಿಗೆ ಗಾಯ

ಕವರ್ಧಾ : ಛತ್ತೀಸ್‌ಗಢದ ಕವರ್ಧಾ ಜಿಲ್ಲೆಯಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 18 ಮಂದಿ ಸಾವಿಗೀಡಾಗಿ, 4 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಕವರ್ಧಾದಲ್ಲಿ ಸೋಮವಾರ ಮುಂಜಾನೆ ಅಪಘಾತ ಸಂಭವಿಸಿದ್ದು, ಮೃತರಲ್ಲಿ ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಹಲವಾರು ಪ್ರಯಾಣಿಕರು ಸೇರಿದ್ದಾರೆ. ಅತಿವೇಗದ ಚಾಲನೆಯಿಂದಾಗಿ ವಾಹನವು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. … Continued

ಸೂರತ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : ಓರ್ವ ಸಾವು, ಹಲವರಿಗೆ ಗಾಯ

ಸೂರತ್ : ಗುಜರಾತ್‌ನ ಸೂರತ್ ರೈಲು ನಿಲ್ದಾಣದಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ದೀಪಾವಳಿಗೆ ತಮ್ಮ ಊರುಗಳಿಗೆ ತೆರಳುವ ಅಪಾರ ಸಂಖ್ಯೆಯ ಜನರು ವಿವಿಧ ರಾಜ್ಯಗಳಿಗೆ ತೆರಳಲು ನಿಲ್ದಾಣದಲ್ಲಿ ಜಮಾಯಿಸಿದ್ದರು. ರೈಲು ಹತ್ತುವಾಗ ಕಾಲ್ತುಳಿತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಪ್ರಜ್ಞೆ ತಪ್ಪಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ … Continued

ಅಮೃತಸರ ಸುವರ್ಣ ಮಂದಿರದ ಬಳಿ ಸ್ಫೋಟ ; ಹಲವರಿಗೆ ಗಾಯ

ಅಮೃತಸರ : ಪಂಜಾಬ್‌ನ ಅಮೃತಸರ ನಗರದ ಸುವರ್ಣ ಮಂದಿರದ ಬಳಿ ಶನಿವಾರ (ಮೇ 6) ತಡರಾತ್ರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೆರಿಟೇಜ್‌ ಸ್ಟ್ರೀಟ್‌ನಲ್ಲಿ ಮಧ್ಯರಾತ್ರಿ ವೇಳೆ ಪ್ರವಾಸಿಗರು ಮತ್ತು ಭಕ್ತರು ಸಂಚರಿಸುತ್ತಿದ್ದಾಗ ಸಾರಗಾರ್ಹಿ ಸಾರಾಯ್‌ ಪ್ರದೇಶದ ವಾಹನ ತಂಗುದಾಣ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಅಮೃತಸರ ಹೆರಿಟೇಜ್‌ ಸ್ಟ್ರೀಟ್‌ನ ರೆಸ್ಟೋರೆಂಟ್‌ವೊಂದರ … Continued

ಬೆಳ್ಳಂಬೆಳಗ್ಗೆ ಪ್ರಪಾತಕ್ಕೆ ಉರುಳಿದ ಬಸ್ : 12 ಮಂದಿ ಸಾವು, 27 ಜನರಿಗೆ ಗಾಯ

ಮುಂಬೈ: ಬಸ್ಸೊಂದು ಕಮರಿಗೆ ಬಿದ್ದು ಸುಮಾರು 12 ಜನರು ಮೃತಪಟ್ಟ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ – ಪುಣೆ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಸಂಗೀತ ತಂಡವೊಂದರ ಸದಸ್ಯರನ್ನು ಪುಣೆಯಿಂದ ಮುಂಬೈಗೆ ಕರೆದೊಯ್ಯುತ್ತಿದ್ದ ವೇಳೆ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಮುಂಜಾನೆ 4:50ರ ಸುಮಾರಿಗೆ ಈ ಅಪಘಡ ಸಂಭವಿಸಿದೆ. ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದು, … Continued

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಆರು ಮಂದಿ ಸಾವು, ಹಲವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುರುವಿಮಲೈ ಗ್ರಾಮದ ಪಟಾಕಿ ಕಾರ್ಖಾನೆಗೆ ಎರಡು ಅಗ್ನಿಶಾಮಕ ಟೆಂಡರ್‌ಗಳು ಮತ್ತು 10 ಆಂಬ್ಯುಲೆನ್ಸ್‌ಗಳು ಧಾವಿಸಿವೆ. ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಟ್ಟಿದ್ದಾರೆ … Continued

ಜೆಎನ್‌ಯುದಲ್ಲಿ ವಿದ್ಯಾರ್ಥಿಗಳು-ಸಿಬ್ಬಂದಿ ನಡುವೆ ಹಿಂಸಾತ್ಮಕ ಘರ್ಷಣೆ: ಎಬಿವಿಪಿ ಅಧ್ಯಕ್ಷ ಸೇರಿದಂತೆ ಹಲವರಿಗೆ ಗಾಯ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಕ್ಯಾಂಪಸ್‌ನ ವಿದ್ಯಾರ್ಥಿ ವೇತನದ ವಿಚಾರವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ನಡುವೆ ಸೋಮವಾರ ಹಿಂಸಾತ್ಮಕ ಘರ್ಷಣೆ ನಡೆದಿದೆ. ಘಟನೆಯಲ್ಲಿ ಎಬಿವಿಪಿ ಅಧ್ಯಕ್ಷ ರೋಹಿತ್ ಕುಮಾರ ಸೇರಿದಂತೆ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಎರಡು ವರ್ಷಗಳಿಂದ ತಡೆಹಿಡಿದಿರುವ … Continued

ದಕ್ಷಿಣ ಪಾಕಿಸ್ತಾನದಲ್ಲಿ ಎರಡು ರೈಲುಗಳ ಡಿಕ್ಕಿ: 30 ಜನರ ಸಾವು, 50 ಜನರಿಗೆ ಗಾಯ

ಇಸ್ಲಾಮಾಬಾದ್‌: ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ಮುಂಜಾನೆ ಎರಡು ಎಕ್ಸ್‌ಪ್ರೆಸ್ ರೈಲುಗಳು ಡಿಕ್ಕಿ ಹೊಡೆದಿದ್ದು, ಕನಿಷ್ಠ 30 ಪ್ರಯಾಣಿಕರು ಮೃತಪಟ್ಟಿದ್ದಾರೆ ಹಾಗೂ ಕನಿಷ್ಠ 50 ಜನರಿಗೆ ಗಾಯಗಳಾಗಿವೆ ಎಂದು ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಮಿಲ್ಲತ್ ಎಕ್ಸ್‌ಪ್ರೆಸ್ ಹಳಿ ತಪ್ಪಿತು ಮತ್ತು ಸರ್ ಸೈಯದ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ ಎಂದು ಸಿಂಧ್ ಪ್ರಾಂತ್ಯದ ಘೋಟ್ಕಿ … Continued