ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: 20 ಗಂಟೆಯೊಳಗೆ ಭಟ್ಕಳದಲ್ಲಿ ಆರೋಪಿ ಬಂಧನ

ಉಡುಪಿ: ಬೆಂಗಳೂರು-ಮುರುಡೇಶ್ವರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಭಟ್ಕಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ನೀಡಿದ ಫೋಟೋ ಆಧರಿಸಿ ಅಪರಾಧ ನಡೆದ ೨೦ ಗಂಟೆಯೊಳಗೆ ಬಂಧಿಸಿದ್ದಾರೆ. ಭಟ್ಕಳದ ಶುರೈಮ್‌ (22) ಬಂಧಿತ ವ್ಯಕ್ತಿ. ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉಡುಪಿ ಮೂಲದ ಯುವತಿ ಎರಡು ದಿನಗಳ ಹಿಂದೆ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ ರೇವಣ್ಣ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು : ಯುವಕನ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಆದೇಶವನ್ನು ಜುಲೈ 18ಕ್ಕೆ ಕಾಯ್ದಿರಿಸಿದೆ. ಸೂರಜ್‌ ಬೆಂಬಲಿಗ ಎನ್ನಲಾಗಿರುವ ಎಂ.ಎಲ್‌. ಶಿವಕುಮಾರ ಎಂಬವರು ದಾಖಲಿಸಿರುವ ಪ್ರಕರಣದಲ್ಲಿ … Continued

ವೀಡಿಯೊ : ಜೈಪುರ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಸ್ಪೈಸ್‌ಜೆಟ್ ಮಹಿಳಾ ಉದ್ಯೋಗಿ ; ಬಂಧನ

ಸೆಕ್ಯುರಿಟಿ ಸ್ಕ್ರೀನಿಂಗ್ ಕುರಿತು ನಡೆದ ವಾಗ್ವಾದದಲ್ಲಿ ಸ್ಪೈಸ್‌ಜೆಟ್ ಮಹಿಳಾ ಉದ್ಯೋಗಿಯೊಬ್ಬರು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಘಟನೆ ಗುರುವಾರ ಜೈಪುರ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ನಂತರ ಮಹಿಳಾ ಉದ್ಯೋಗಿಯನ್ನು ಬಂಧಿಸಲಾಯಿತು. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿಯಾಗಿರುವ ಅನುರಾಧಾ ರಾಣಿ ಅವರು ಇತರ ಉದ್ಯೋಗಿಗಳೊಂದಿಗೆ ವಾಹನದ ಗೇಟ್‌ನಿಂದ ಮುಂಜಾನೆ 4 ಗಂಟೆಯ ಸುಮಾರಿಗೆ … Continued

ಮಂಗಳೂರು: ಇಸ್ಲಾಂಗೆ ಮತಾಂತರಿಸಿ ಲೈಂಗಿಕ ಕಿರುಕುಳ-ಯುವತಿಯಿಂದ ದೂರು ದಾಖಲು

ಮಂಗಳೂರು: ವ್ಯಕ್ತಿಯೋರ್ವ ತನಗೆ ಲೈಂಗಿಕ ಕಿರುಕುಳ ನೀಡಿ ಅನ್ಯ ಧರ್ಮಕ್ಕೆ ಮತಾಂತರಗೊಳಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬರು ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ನಡೆಸಿ ಆಯೇಷಾ ಎಂದು ಹೆಸರು ಬದಲಿಸಲಾಗಿತ್ತು. ಮತಾಂತರದ ಬಳಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ … Continued