ಸಾಮೂಹಿಕ ಅತ್ಯಾಚಾರ: ಅಪರಾಧಿಗಳ ಗಲ್ಲು ಶಿಕ್ಷೆ ಜೀವಾವಧಿಗೆ ಪರಿವರ್ತಿಸಿದ ಬಾಂಬೆ ಹೈಕೋರ್ಟ್

ಮುಂಬೈ: ಶಕ್ತಿ ಮಿಲ್‌ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಅಪರಾಧಿಗಳ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಸಜೆಯಾಗಿ ಬಾಂಬೆ ಹೈಕೋರ್ಟ್ ಗುರುವಾರ ಮಾರ್ಪಡಿಸಿದೆ. ಮುಂಬೈನ ಶಕ್ತಿ ಮಿಲ್‌ ಪ್ರದೇಶದಲ್ಲಿ 23 ವರ್ಷದ ಪತ್ರಿಕಾ ಛಾಯಾಗ್ರಾಹಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಮೂವರು ಆರೋಪಿಗಳಿಗೆ ಅವರು ಪುನರಾವರ್ತಿತ ಅಪರಾಧಿಗಳೆಂಬ ಕಾರಣಕ್ಕಾಗಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. … Continued